Puttur: ವಿದೇಶದಿಂದ ರಜೆಯಲ್ಲಿ ಬಂದಿದ್ದ ಯುವಕ ಹೃದಯಾಘಾತದಿಂದ ನಿಧನ
Team Udayavani, Dec 17, 2024, 9:39 PM IST
ಕಾಣಿಯೂರು: ವಿದೇಶದಲ್ಲಿ ಉದ್ಯೋಗಿಯಾಗಿದ್ದು, ರಜೆಯಲ್ಲಿ ಊರಿಗೆ ಬಂದಿದ್ದ ಯುವಕ ಹೃದಯಾಘಾತದಿಂದ ನಿಧನಹೊಂದಿದ ಘಟನೆ ಸೋಮವಾರ ಪುತ್ತೂರಿನಲ್ಲಿ ಸಂಭವಿಸಿದೆ.
ಕಡಬ ತಾಲೂಕು ಚಾರ್ವಾಕ ಗ್ರಾಮದ ದೇವಿನಗರ ಮೂಲದವರಾಗಿದ್ದು, ಪುತ್ತೂರಿನ ಸಂಪ್ಯದಲ್ಲಿ ಮನೆ ಮಾಡಿಕೊಂಡಿದ್ದ ದೇಜಪ್ಪ ಯಾನೆ ದಿವೀಶ್ ಮಡಿವಾಳ (45) ಮೃತಪಟ್ಟವರು.
ಚಾರ್ವಾಕದ ಮೂಲ ಮನೆಯಲ್ಲಿ ನಡೆಯುತ್ತಿದ್ದ ದೈವಗಳ ಕಾರ್ಯಕ್ರಮಕ್ಕೆಂದು ವಿದೇಶದಿಂದ ಆಗಮಿಸಿದವರು ರವಿವಾರ ರಾತ್ರಿ ಪುತ್ತೂರಿನ ಮನೆಗೆ ಬಂದಿದ್ದರು. ಸೋಮವಾರ ಬೆಳಗ್ಗಿನ ಜಾವ ಹೃದಯಾಘಾತವಾಗಿದ್ದು, ತತ್‌ಕ್ಷಣ ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ಸಾಗಿಸಿದರೂ ಅಲ್ಲಿ ಮೃತಪಟ್ಟರು.
ದಿವೀಶ್ ಡಿ. 28ರಂದು ವಿದೇಶಕ್ಕೆ ಮರಳುವವರಿದ್ದರು. ಮೃತರು ತಂದೆ, ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರನನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.