Puttur; ಪುತ್ತಿಲ ಪರಿವಾರ ಕಚೇರಿಯಲ್ಲಿ ತಲವಾರು ಝಳಪಿಸಿದ 9 ಜನರ ವಿರುದ್ಧ ಪ್ರಕರಣ
Team Udayavani, Nov 10, 2023, 5:46 PM IST
ಪುತ್ತೂರು: ಮುಕ್ರಂಪಾಡಿಯ ಪುತ್ತಿಲ ಪರಿವಾರದ ಕಚೇರಿಯಲ್ಲಿ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿರುವ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ವಯಸ್ಕರ ಸಹಿತ 9 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಶುಕ್ರವಾರ (ನ.10) ಮಧ್ಯಾಹ್ನ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ರಂಪಾಡಿ ಎಂಬಲ್ಲಿ ಕೆಲ ಯುವಕರು ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆ ನಡೆದ ತಕ್ಷಣವೇ ಆರೋಪಿಗಳಾದ ಪುತ್ತೂರು ಶಾಂತಿಗೋಡು ಗ್ರಾಮದ ದಿನೇಶ ಪಂಜಿಗ (38), ನರಿಮೊಗರು ಗ್ರಾಮದ ಭವಿತ್ (19), ಪುತ್ತೂರು ಬೊಳ್ವಾರು ನಿವಾಸಿ ಮನ್ವಿತ್ (19), ಆರ್ಯಾಪು ಗ್ರಾಮದ ಜಯಪ್ರಕಾಶ (18), ಚಿಕ್ಕಮುಡ್ನೂರು ಗ್ರಾಮದ ಚರಣ್ (23), ಬನ್ನೂರು ಗ್ರಾಮದ ಮನೀಶ (23), ವಿನೀತ್ ಹಾಗೂ ಇಬ್ಬರು ಅಪ್ರಾಪ್ತ ಪ್ರಾಯದ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ: 108/2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.