Puttur ಕೊಲೆ ಪ್ರಕರಣ: ಮೂರನೇ ಆರೋಪಿ ಬಂಧನ
Team Udayavani, Dec 13, 2023, 11:19 PM IST
ಪುತ್ತೂರು: ಕುಂಬ್ರದಲ್ಲಿ ಟಿಪ್ಪರ್ ಚಾಲಕನಾಗಿದ್ದ ಬಾಗಲಕೋಟೆ ಬಾದಾಮಿ ಡಾಣಕಶಿರೂರು ಮೂಲದ ಹನುಮಂತ ಮಾದರ (22) ಕೊಲೆ ಪ್ರಕರಣದ ಮೂರನೇ ಆರೋಪಿ ದುರ್ಗಪ್ಪ ಮಾದರನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ ಅಪಹರಣಕ್ಕೆ ಬಳಸಿದ್ದ ವಾಹನ ಮತ್ತು ಕೊಲೆ ಮಾಡಲು ಬಳಸಲಾಗಿದ್ದ ರಾಡ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ನ. 17ರಂದು ಹನುಮಂತ ಮಾದರನನ್ನು ಕುಂಬ್ರದಿಂದ ಮೂವರು ಸೇರಿ ವಾಹನವೊಂದರಲ್ಲಿ ಕರೆದೊಯ್ದು ಕೊಲೆ ಮಾಡಿ ಮೃತದೇಹವನ್ನು ಆಗುಂಬೆ ಘಾಟಿ ಸಮೀಪ ಎಸೆದು ಹೋಗಿದ್ದರು. ಡಿ. 8ರಂದು ಮೃತದೇಹ ಪತ್ತೆಯಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಬಾದಾಮಿ ತಾಲೂಕು ಡಾಣಕಶಿರೂರು ನಿವಾಸಿ ಹನುಮಪ್ಪ ಮಾದರ, ರೋಣ ತಾಲೂಕು ಜಗಳೂರು ಗ್ರಾಮ ಅಂಬೇಡ್ಕರ್ ನಗರ ನಿವಾಸಿ ಮಂಜುನಾಥನನ್ನು ಪೊಲೀಸರು ಬಂಧಿಸಿದ್ದರು. ಇನ್ನೋರ್ವ ಆರೋಪಿ ಬೆಳಗಾವಿ ರಾಮದುರ್ಗಾ ಗ್ರಾಮದ ಮನೇನಕೊಪ್ಪ ನಿವಾಸಿ ದುರ್ಗಪ್ಪ ಮಾದರ ಪರಾರಿಯಾಗಿದ್ದ. ಇದೀಗ ಆತನನ್ನೂ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯಿಂದ ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಪೆಟ್ರೋಲ್ ಪಂಪ್ ಒಂದರ ಬಳಿಯಿಂದ ಮತ್ತು ಕೊಲೆ ಮಾಡಲು ಉಪಯೋಗಿಸಿದ ರಾಡ್‌ವೊಂದನ್ನು ಆಗುಂಬೆ ಘಾಟಿಯಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ.
ಕೊಲೆ ಆರೋಪಿ ಶಿವಪ್ಪ ಹನುಮಂತ ಮಾದರ ಅವರ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಕಾರಣಕ್ಕಾಗಿ ಹನುಮಂತ ಮಾದರ ಅವರ ಕೊಲೆ ನಡೆದಿತ್ತು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.