ಪುತ್ತೂರು : 20 ವರ್ಷದ ಹಿಂದೆ ಗೂಡಂಗಡಿಯಲ್ಲಿ ದಿನಸಿ ಕಳವು ಪ್ರಕರಣ : ಐಟಿ ಉದ್ಯೋಗಿ ಬಂಧನ
Team Udayavani, May 30, 2022, 8:38 PM IST
ಪುತ್ತೂರು : ಇಪ್ಪತ್ತು ವರ್ಷಗಳ ಹಿಂದೆ ಪಡೀಲು ಗೂಡಂಗಡಿಯಲ್ಲಿ ದಿನಸಿ ಸಾಮಗ್ರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಐಟಿ ಉದ್ಯೋಗಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ನೆಹರುನಗರ ಸ್ವಾಮಿ ಕಾಂಪೌಂಡ್ನ ಚೆನ್ನಕೇಶವ ಯಾನೆ ಸೂರ್ಯರಾಜ್ ಬಂಧಿತ ಆರೋಪಿ. ಚೆನ್ನಕೇಶವ ಅವರು ಪ್ರಸ್ತುತ ತಮಿಳುನಾಡು ರಾಜ್ಯದ ತಿರುನಾಳ್ ವೆಲ್ಲಿ ಜಿಲ್ಲೆಯ ಮರ್ಫಿನಗರದಲ್ಲಿ ಐಟಿ ಉದ್ಯೋಗಿಯಾಗಿದ್ದರು.
ಪುತ್ತೂರು ಪಡೀಲ್ನಲ್ಲಿರುವ ಕುದ್ಮಾರು ನಿವಾಸಿ ವಸಂತ ಗೌಡ ಅವರ ಗೂಡಂಗಡಿಯಿಂದ 2002ರ ಜೂ. 10ರಂದು ದಿನಸಿ ಸಾಮಾಗ್ರಿಗಳು ಮತ್ತು 1500 ರೂ. ಕಳವು ನಡೆದಿತ್ತು. ಈ ಕುರಿತು ಪೊಲೀಸರು ತನಿಖೆ ನಡೆಸಿ ನಾಲ್ವರು ಯುವಕರನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ವಿಚಾರಣೆ ವೇಳೆ ನ್ಯಾಯಾಧೀಶರು ಮೂವರು ಆರೋಪಿಗಳನ್ನು ದೋಷಮುಕ್ತರಾಗಿ ತೀರ್ಪು ನೀಡಿದ್ದರು. ಆರೋಪಿ ಚೆನ್ನಕೇಶವ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹಾಗಾಗಿ ನ್ಯಾಯಾಲಯ ಆತನ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿತ್ತು. ಮೇ 28ರಂದು ಹೆಡ್ ಕಾನ್ಸ್ಟೆಬಲ್ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಿ ಮೇ 30ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇದನ್ನೂ ಓದಿ : ಸರ್ಕಾರಿ ನೌಕರರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಶೀಘ್ರ ಚಾಲನೆ : ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.