ಪುತ್ತೂರು :ಮಸೂದ್ ಕುಟುಂಬಕ್ಕೆ 25ಲಕ್ಷ ರೂ. ಪರಿಹಾರ ನೀಡುವಂತೆ ಪಟ್ಟುಹಿಡಿದ ಮುಸ್ಲಿಂ ಒಕ್ಕೂಟ
Team Udayavani, Jul 21, 2022, 10:06 PM IST
ಪುತ್ತೂರು : ಕಳಂಜ ಗ್ರಾಮದ ವಿಷ್ಣುನಗರದಲ್ಲಿ 8 ಮಂದಿಯಿಂದ ಹಲ್ಲೆಗೊಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಮಸೂದ್ ಕುಟುಂಬಕ್ಕೆ ಪರಿಹಾರ ನೀಡಲು ಜಿಲ್ಲಾಡಳಿತ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಒಪ್ಪಿಕೊಂಡಿದೆ.
ಹಲ್ಲೆಗೊಳಗಾಗಿ ಸಾವನ್ನಪ್ಪಿರುವ ಮಸೂದ್ ಮೃತದೇಹವನ್ನು ಅಂತ್ಯಸಂಸ್ಕಾರಕ್ಕಾಗಿ ತೆಗೆಯಬೇಕಾದರೆ ಸರಕಾರ 25 ಲಕ್ಷ ರೂ. ಪರಿಹಾರ ನೀಡಬೇಕು, ಆಸ್ಪತ್ರೆಯ ಬಿಲ್ಲನ್ನು ಸರಕಾರವೇ ಪಾವತಿಸಬೇಕು, ಸ್ವತಃ ಜಿಲ್ಲಾಧಿಕಾರಿಗಳೇ ಆಸ್ಪತ್ರೆಗೆ ಬಂದು ಭರವಸೆ ನೀಡಬೇಕು ಎಂದು ಮುಸ್ಲಿಂ ಒಕ್ಕೂಟದ ಮುಖಂಡರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದರು.
ಮಂಗಳೂರಿನ ಆಸ್ಪತ್ರೆಯ ಮುಂದೆ ನೂರಾರು ಮಂದಿ ಮುಸ್ಲಿಂ ಸಮಾಜ ಬಾಂಧವರು ಜಮಾಯಿಸತೊಡಗಿದ್ದರು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಜಿಲ್ಲಾಧಿಕಾರಿಗಳು ಮಂಗಳೂರು ತಹಶೀಲ್ದಾರ್ ರನ್ನು ಮಾತುಕತೆಗಾಗಿ ಆಸ್ಪತ್ರೆ ಕಳುಹಿಸಿದರು. ಜತೆಗೆ ಮಂಗಳೂರಿನ ಪೊಲೀಸ್ ಕಮಿಷನರ್ ಡಾ। ಶಶಿಧರ್ ಮತ್ತಿತರ ಅಧಿಕಾರಿಗಳು ಆಸ್ಪತ್ರೆಗೆ ಬಂದರು ಅಲ್ಲಿ ಮಾತುಕತೆ ನಡೆದ ಸಂದರ್ಭ ಮೃತರ ಕುಟುಂಬಕ್ಕೆ ಇಪ್ಪತ್ತೈದು ಲಕ್ಷ ರೂ. ಪರಿಹಾರವನ್ನು ಸರಕಾರ ನೀಡಬೇಕು ಎಂಬ ಬೇಡಿಕೆಯನ್ನು ಮುಸ್ಲಿಂ ಒಕ್ಕೂಟದ ಮುಖಂಡರು ಮುಂದಿಟ್ಟರು.
ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಫೋನ್ ಮೂಲಕ ಚರ್ಚೆ ನಡೆಸಿದ ತಹಶೀಲ್ದಾರ್ ಜಿಲ್ಲಾಧಿಕಾರಿಗಳು ಸರಕಾರಕ್ಕೆ ಶಿಫಾರಸು ಮಾಡಲು ಒಪ್ಪಿರುವುದಾಗಿ ಹೇಳಿದರೆನ್ನಲಾಗಿದೆ.
ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮಸೂದ್ ಗೆ ಚಿಕಿತ್ಸೆ ನೀಡಿದ ಬಾಬ್ತು 43 ಸಾವಿರ ಬಿಲ್ ಆಗಿದ್ದು, ಅದರಲ್ಲಿ 13 ಸಾವಿರ ರೂ. ಗಳನ್ನು ಸುಳ್ಯದ ಮುಖಂಡರು ಮಾತನಾಡಿದ ಮೇರೆಗೆ ಕಡಿಮೆ ಮಾಡಲಾಗಿತ್ತೆನ್ನಲಾಗಿದೆ. ಉಳಿದ 30 ಸಾವಿರ ರೂ.ಗಳನ್ನು ಜಿಲ್ಲಾಡಳಿತವೇ ಪಾವತಿಸಬೇಕೆಂಬ ಮುಖಂಡರ ಆಗ್ರಹವನ್ನೂ ಜಿಲ್ಲಾಡಳಿತ ಒಪ್ಪಿಕೊಂಡಿತೆನ್ನಲಾಗಿದೆ.
ತಮ್ಮ ಬೇಡಿಕೆಗಳಿಗೆ ಜಿಲ್ಲಾಡಳಿತ ಹಿನ್ನಲೆಯಲ್ಲಿ ಮಸೂದ್ ಮೃತ ದೇಹವನ್ನು ಪೋಸ್ಟ್ ಮಾರ್ಟಮ್ ಗೆ ಕಳುಹಿಸಲು ಅವರ ಕುಟುಂಬಿಕರು ಮತ್ತು ಸಮಾಜ ಬಾಂಧವರು ಒಪ್ಪಿದರು. ಅದರಂತೆ ಇದೀಗ ಮೃತದೇಹದ ಮರಣೋತ್ತರ ಶವ ಪರೀಕ್ಷೆ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಈ ಮಾತುಕತೆಯಲ್ಲಿ ಮಂಗಳೂರು ಶಾಸಕ ಯು.ಟಿ. ಖಾದರ್, ಸುಳ್ಯದ ಮುಸ್ಲಿಂ ಮುಖಂಡರುಗಳಾದ ಕೆ.ಎಂ.ಮುಸ್ತಫಾ, ಇಕ್ಬಾಲ್ ಬೆಳ್ಳಾರೆ, ಜಾಬಿರ್ ಅರಿಯಡ್ಕ, ಸುಹೈಲ್ ಕಂದಕ್, ಶಾಹುಲ್ ಹಮೀದ್, ಅಬ್ದುಲ್ ಗಫೂರ್ ಕಲ್ಮಡ್ಕ, ಇಸ್ಮಾಯಿಲ್ ಪಡ್ಪಿನಂಗಡಿ ಮೊದಲಾದ ಹಲವು ಮಂದಿ ಇದ್ದರೆಂದು ತಿಳಿದುಬಂದಿದೆ.
ಬೆಳ್ಳಾರೆಯಲ್ಲಿ ಅಂತ್ಯಸಂಸ್ಕಾರ
ಮಸೂದೆ ಮೃತದೇಹದ ಮರಣೋತ್ತರ ಪರೀಕ್ಷೆಯ ಬಳಿಕ ಅಂತ್ಯಸಂಸ್ಕಾರಕ್ಕಾಗಿ ದೇಹವನ್ನು ಬೆಳ್ಳಾರೆಗೆ ತರಲು ನಿರ್ಧರಿಸಲಾಗಿದೆ. ಬೆಳ್ಳಾರೆ ಮಸೀದಿ ಖಬರ್ ಸ್ಥಾನದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಮುಸ್ಲಿಂ ಮುಖಂಡರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.