Puttur: ಸಿಡಿಲು ಬಡಿದು ಹಾನಿ
Team Udayavani, Oct 21, 2024, 12:57 AM IST
ಪುತ್ತೂರು: ರವಿವಾರ ಸಂಜೆ ಸುರಿದ ಮಳೆಯ ಸಂದರ್ಭ ಸಿಡಿಲು ಬಡಿದು ಮನೆಯೊಂದಕ್ಕೆ ಹಾನಿ ಉಂಟಾದ ಘಟನೆ ಅರಿಯಡ್ಕ ಗ್ರಾಮದ ಪಾಪೆಮಜಲು ಸಮೀಪದ ಪಾದಲಾಡಿಯಲ್ಲಿ ಸಂಭವಿಸಿದೆ.
ಪಾದಲಾಡಿಯ ಶೇಖರ ಪೂಜಾರಿ ಅವರ ಮನೆಗೆ ಸಿಡಿಲು ಬಡಿದ ಕಾರಣ ಗೋಡೆ ಬಿರುಕು ಬಿಟ್ಟಿದ್ದು ಟಿವಿ, ಫ್ರಿಜ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಹೋಗಿವೆ. ವಿದ್ಯುತ್ ಲೈನ್‌ಗೂ ಹಾನಿಯಾಗಿದೆ. ಅಂಗಳದಲ್ಲಿದ್ದ ಸಾಕು ನಾಯಿ ಸಿಡಿಲಾಘಾತದಲ್ಲಿ ಮೃತಪಟ್ಟಿದೆ. ಸುಮಾರು 50,000 ರೂ.ಗೂ ಅಧಿಕ ನಷ್ಟ ಸಂಭವಿಸಿದೆ.
ದ.ಕ.: ಕೆಲವೆಡೆ ಮಳೆ
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ರವಿವಾರ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಬೆಳಗ್ಗೆ ತುಸು ಮಳೆಯಾಗಿದ್ದು, ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮನ್ಸೂಚನೆ ಪ್ರಕಾರ ಅ.21ರಂದು ಕರಾವಳಿಯಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ. ಬಂಟ್ವಾಳ, ಪುತ್ತೂರು, ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕಿನಲ್ಲಿಯೂ ಉತ್ತಮ ಮಳೆಯಾಗಿದೆ. ಬೆಳ್ತಂಗಡಿಯ ಕೆಲವೆಡೆ ಸಿಡಿಲಿನ ಆರ್ಭಟವೂ ಜೋರಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.
Madanthyar: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ತೇಪೆ ಕಾರ್ಯ
Subhramanya: 9 ತಿಂಗಳ ಹಿಂದೆ ಪೊಲೀಸರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದನೇ ವಿಕ್ರಂ ಗೌಡ?
Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು
MUST WATCH
ಹೊಸ ಸೇರ್ಪಡೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್.ರೆಹಮಾನ್ ತಂಡದ ಸದಸ್ಯೆ ಮೋಹಿನಿ
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.