Puttur: ರಸ್ತೆಯಲ್ಲಿ ಕಾರ್ಮಿಕನ ಮೃತದೇಹ; ಮೂವರ ಮೇಲೆ ಪ್ರಕರಣ ದಾಖಲು; ಓರ್ವ ವಶಕ್ಕೆ
Team Udayavani, Nov 19, 2024, 7:30 AM IST
ಪುತ್ತೂರು: ಮೇಸ್ತ್ರಿಗೆ ಸಹಾಯಕನಾಗಿ ತೆರಳಿದ್ದ ಚಿಕ್ಕಮುಟ್ನೂರು ಗ್ರಾಮದ ಸಾಲ್ಮರದ ಕೆರೆಮೂಲೆ ನಿವಾಸಿ ಶಿವಪ್ಪ ಅವರ ಮೃತದೇಹವನ್ನು ಪಿಕಪ್ನಲ್ಲಿ ತಂದು ಮನೆ ಮುಂಭಾಗದ ರಸ್ತೆಯಲ್ಲಿ ಮಲಗಿಸಿ ತೆರಳಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದಲಿತ ದೌರ್ಜನ್ಯ ಪ್ರಕರಣ ದೂರು ದಾಖಲಾಗಿದೆ.
ಶಿವಪ್ಪ ಅವರ ಅಳಿಯ ಶಶಿ ಕೆರೆಮೂಲೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನ. 16ರಂದು ಬೆಳಗ್ಗೆ ತಾವ್ರೋ ವುಡ್ ಇಂಡಸ್ಟ್ರೀಸ್ ಮಾಲಕ ಹೆನ್ರಿ ತಾವ್ರೊ ಅವರು ಶಿವಪ್ಪ ಅವರನ್ನು ಕೆಲಸಕ್ಕೆ ಕರೆದುಕೊಂಡು ಹೋಗಿದ್ದು ಬಳಿಕ ಅವರನ್ನು ಹೆನ್ರಿ ತಾವ್ರೊ, ಸ್ಟ್ಯಾನಿ ಮೇಸ್ತ್ರಿ ಹಾಗೂ ಇನ್ನೊಬ್ಬರು ಸೇರಿ ಪಿಕಪ್ ವಾಹನದಲ್ಲಿ ಮರದ ದಿಮ್ಮಿಗಳ ಮೇಲೆ ಮಲಗಿಸಿಕೊಂಡು ಬಂದು ಶಿವಪ್ಪ ಅವರ ಮನೆಯ ಬಳಿ ರಸ್ತೆ ಬದಿಯಲ್ಲಿ ಮಲಗಿಸಿ ಹೋಗಿದ್ದರು.
ಶಿವಪ್ಪ ಮಾತನಾಡದೇ ಇದ್ದಾಗ ಪತ್ನಿ ಮತ್ತು ಮಗಳು ತತ್ಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅವರು ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದರು. ಆರೋಗ್ಯದಿಂದಿದ್ದ ನನ್ನ ಮಾವನನ್ನು ಕೆಲಸಕ್ಕೆಂದು ಕರೆದುಕೊಂಡು ಹೋದಾಗ ಅವರ ಆರೋಗ್ಯದ ಬಗ್ಗೆ ನಿರ್ಲಕ್ಷ é ತೋರಿದ ಹೆನ್ರಿ ತಾವ್ರೊ ಬಳಿಕ ಅಮಾನವೀಯವಾಗಿ ಪಿಕಪ್ನಲ್ಲಿ ತಂದು ರಸ್ತೆ ಬದಿಯಲ್ಲಿ ಮಲಗಿಸಿ ಹೋಗಿದ್ದಾರೆ. ಈ ಮೂಲಕ ಅವರು ದಲಿತ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು.
ಓರ್ವ ವಶಕ್ಕೆ
ಪೊಲೀಸರು ಹೆನ್ರಿ ತಾವ್ರೊ, ಸ್ಟ್ಯಾನಿ ಮೇಸ್ತ್ರಿ ಹಾಗೂ ಇನ್ನೋರ್ವನ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲು ಮಾಡಿದ್ದಾರೆ. ಸೋಮವಾರ ಸಂಜೆಯೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಠಾಣೆಗೆ ಮುತ್ತಿಗೆ ಹಾಕುವುದಾಗಿ ದಲಿತ ಸಂಘಟನೆಗಳು ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.