Puttur: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ಇ ಕೆವೈಸಿ ಮಾಡಿಸಲು ಇನ್ನೂ 23,315 ಮಂದಿ ಬಾಕಿ

ಬಾಕಿ ಪಟ್ಟಿಯಲ್ಲಿ ಬಂಟ್ವಾಳ ಪ್ರಥಮ, ಬೆಳ್ತಂಗಡಿ ದ್ವಿತೀಯ, ಪುತ್ತೂರು ತೃತೀಯ

Team Udayavani, Jan 29, 2025, 1:31 PM IST

4

ಪುತ್ತೂರು: ಕಳೆದ ಕೆಲ ವರ್ಷಗಳಿಂದ ಸರಕಾರವು ಪಡಿತರ ಚೀಟಿದಾರರು ಇ ಕೆವೈಸಿ ಮಾಡುವಂತೆ ಸೂಚನೆ ನೀಡುತ್ತಿದ್ದರೂ ಶೇ.100 ರಷ್ಟು ಪ್ರಗತಿ ಕಂಡಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಕಿ ಇರುವವರ ಪಟ್ಟಿಯಲ್ಲಿ ಬಂಟ್ವಾಳ ಪ್ರಥಮ ಸ್ಥಾನದಲ್ಲಿದ್ದರೆ, ಬೆಳ್ತಂಗಡಿ ಎರಡನೇ ಸ್ಥಾನ, ಪುತ್ತೂರು ಮೂರನೇ ಸ್ಥಾನದಲ್ಲಿದೆ.

ಜಿಲ್ಲೆಯ 9 ಕಂದಾಯ ತಾಲೂಕಿನಲ್ಲಿ ಒಟ್ಟು 23,351 ಮಂದಿ ಇ ಕೆವೈಸಿ ಮಾಡಿಸಲು ಬಾಕಿ ಇದ್ದು ಬಂಟ್ವಾಳ -5786, ಬೆಳ್ತಂಗಡಿ 3938, ಪುತ್ತೂರು- 3382, ಮಂಗಳೂರು-2487, ಮೂಡುಬಿದಿರೆ- 2288, ಕಡಬ-2282, ಉಳ್ಳಾಲ-1820, ಮೂಲ್ಕಿ-1185, ಸುಳ್ಯ 183 ಮಂದಿಯಿದ್ದಾರೆ. ಈ ಪೈಕಿ ಸುಳ್ಯದಲ್ಲಿ ಅತಿ ಕಡಿಮೆ ಮಂದಿ ಇ ಕೆವೈಸಿ ಮಾಡಲು ಬಾಕಿಯಾಗಿದ್ದಾರೆ.

ಅಂತಿಮ ಗಡು
ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯುವ ಕುಟುಂಬದ ಸದಸ್ಯರ ಇ – ಕೆವೈಸಿಗೆ ಕೊನೆಯ ಅವಕಾಶ ನೀಡಲಾಗಿದೆ. ಒಂದು ವೇಳೆ ಸದಸ್ಯರು ಹಾಜರಾಗಿ ಕೆವೈಸಿ ಮಾಡಿಸದಿದ್ದರೆ ಅವರ ಪಾಲಿನ ಪಡಿತರ ಬಂದ್‌ ಮಾಡಲಾಗುವುದು ಎಂದು ಆಹಾರ ಇಲಾಖೆ ತಿಳಿಸಿದೆ. ಪಡಿತರ ಚೀಟಿ ಫಲಾನುಭವಿಗಳ ಪೈಕಿ ಕೆಲವು ಸದಸ್ಯರು ಒಟಿಪಿ ಮೂಲಕ ತಿದ್ದುಪಡಿ ಮಾಡಿದ್ದು, ಸದಸ್ಯರು ಜೀವಂತ ಇರುವ ಬಗ್ಗೆ ಜೀವ ಮಾಪನ ನೀಡಿ ಇ-ಕೈವೈಸಿ ಮಾಡುವುದು ಕಡ್ಡಾಯವಾಗಿದೆ.

ಇ ಕೆವೈಸಿ ಹೇಗೆ?
ಪಡಿತರ ಚೀಟಿದಾರರು ಕುಟುಂಬದ ಎಲ್ಲ ಸದಸ್ಯರ ಇ- ಕೆವೈಸಿ ನೀಡುವುದು ಕಡ್ಡಾಯವಾಗಿದೆ. ಪಡಿತರ ಚೀಟಿಗಳಲ್ಲಿನ ಕುಟುಂಬದ ಮುಖ್ಯಸ್ಥ, ಸಂಬಂಧ, ಲಿಂಗ, ಜಾತಿ, ಎಲ್‌ಪಿಜಿ ವಿವರ, ಮೊಬೈಲ್‌ ಸಂಖ್ಯೆ ಸಂಗ್ರಹಿಸಬೇಕಿದ್ದು ಜಿಲ್ಲೆಯಲ್ಲಿ ಚಾಲ್ತಿ ಇರುವ ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳ ಇ-ಕೆವೈಸಿ ನೀಡಲು ಆಧಾರ್‌ ಕಾರ್ಡ್‌, ಎಲ್‌ಪಿಜಿ ದಾಖಲೆ, ಜಾತಿ ಪ್ರಮಾಣ ಪತ್ರ (ಇದ್ದಲ್ಲಿ), ಆದಾಯ ಪ್ರಮಾಣ ಪತ್ರ, ಎಂಡೋಸಲ್ಫಾನ್‌ ಪೀಡಿತರಂತಹ ವಿಶೇಷ ವರ್ಗದವರು ಹೊಂದಿರುವ ದೃಢಪತ್ರಗಳಿದ್ದಲ್ಲಿ ಅವುಗಳೊಂದಿಗೆ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಲು ಆಹಾರ ಇಲಾಖೆ ಸೂಚಿಸಿದೆ.

ಇಲ್ಲೆಲ್ಲ ಮಾಡಿಸಬಹುದು
ಅಂತ್ಯೋದಯ ಆದ್ಯತಾ (ಬಿಪಿಎಲ್‌) ಪಡಿತರ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಲೇ ಬೇಕಾಗಿದ್ದು, ಇ-ಕೆವೈಸಿ ನೀಡಲು ಯಾವುದೇ ಶುಲ್ಕವಿರುವುದಿಲ್ಲ. ಇದನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಉಚಿತವಾಗಿ ಮಾಡಬಹುದು. ಇ-ಕೆವೈಸಿ ಸಂಗ್ರಹಣೆಯನ್ನು ಕರ್ನಾಟಕ ಒನ್‌ ಗ್ರಾಮ ವನ್‌ ಗಳಲ್ಲಿ ಕೂಡಾ ಮಾಡಲು ಅವಕಾಶ ನೀಡಲಾಗಿದೆ.

ಟಾಪ್ ನ್ಯೂಸ್

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್   

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್  

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Sullia: ಯಕ್ಷಗಾನಕ್ಕೆ ರಾಜ್ಯದ ಕಲೆ ಸ್ಥಾನಮಾನ ಘೋಷಣೆ ಮಾಡಬೇಕು

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Bantwala-Narsha-Case

Robbery Case: ಅಸಲಿ ಪೊಲೀಸ್‌ನ ನಕಲಿ ಆಟವನ್ನು ಭೇದಿಸಿದರು!

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್   

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್  

4

Editorial: ನೀರಿನ ಸಂರಕ್ಷಣೆಗಾಗಿ ಈಗಿನಿಂದಲೇ ಎಚ್ಚರ ಅಗತ್ಯ

Udupi: ಗೀತಾರ್ಥ ಚಿಂತನೆ-188: ವೇದಾಂತ-ವ್ಯವಹಾರ ಮಿಶ್ರಣವಾದರೆ ಗೊಂದಲ

Udupi: ಗೀತಾರ್ಥ ಚಿಂತನೆ-188: ವೇದಾಂತ-ವ್ಯವಹಾರ ಮಿಶ್ರಣವಾದರೆ ಗೊಂದಲ

7

Katapadi: ಮುಕ್ಕಾಲು ಎಕರೆಯಲ್ಲಿ 8 ಟನ್‌ ಸೌತೆ, ಅಂಗಳದಿಂದಲೇ ಮಾರಾಟ!

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.