‘ಮಾಚಿದೇವ ಕ್ರಾಂತಿಕಾರಿ ಹೋರಾಟಗಾರ’


Team Udayavani, Feb 2, 2019, 6:41 AM IST

february-12.jpg

ಪುತ್ತೂರು: ಹನ್ನೆರಡನೆಯ ಶತ ಮಾನದಲ್ಲಿ ಸಾಮಾಜಿಕ ಸಮಸ್ಯೆಗಳ ವಿರುದ್ಧ ಕ್ರಾಂತಿಕಾರಿ ಧೋರಣೆಯ ವ್ಯಕ್ತಿ ತ್ವದ ಮೂಲಕ ಹೋರಾಟ ಮಾಡಿದ ದಿಟ್ಟ ವಚನಕಾರ ಮಡಿವಾಳ ಮಾಚಿದೇವ ಎಂದು ಸವಣೂರು ಸ.ಪ.ಪೂ. ಕಾಲೇಜಿನ ಉಪನ್ಯಾಸಕ ಬಿ.ವಿ. ಸೂರ್ಯನಾರಾಯಣ ಅವರು ಹೇಳಿದರು.

ಪುತ್ತೂರು ತಾಲೂಕು ನಾಡಹಬ್ಬಗಳ ಆಚರಣ ಸಮಿತಿಯ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಚರಿಸಲಾದ ಮಡಿವಾಳ ಮಾಚಿದೇವ ಜಯಂತಿಯಲ್ಲಿ ಅವರು ಸಂಸ್ಮರಣ ಉಪನ್ಯಾಸ ನೀಡಿದರು.

12ನೇ ಶತಮಾನದ ಪ್ರಮುಖ ಕಾಲಘಟ್ಟ ದಲ್ಲಿ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ತಾರತಮ್ಯ ಸಹಿತ ಸಾಮಾಜಿಕ, ಧಾರ್ಮಿಕ ಸಮಸ್ಯೆಗಳು ವ್ಯಾಪಕವಾಗಿ ದ್ದವು. ಪ್ರಗತಿ ಪರ ಧೋರಣೆಯ ಮೂಲಕ ಸಮಾಜದಲ್ಲಿ ಪರಿವರ್ತನೆಯ ಉದ್ದೇಶದೊಂದಿಗೆ ಬಸವಣ್ಣ ಅವರು ಮುನ್ನೆಲೆಗೆ ತಂದ ಅನುಭವ ಮಂಟಪ ಮನುಕುಲದ ಪ್ರಥಮ ಸಂಸತ್ತು ಎನ್ನುವ ಹೆಗ್ಗಳಿಕೆಯನ್ನು ಪಡೆದಿದೆ. ಅನುಭವ ಮಂಟಪದ ಪ್ರಮುಖ ಸದಸ್ಯನಾಗಿ ಮಡಿವಾಳ ಮಾಚಿದೇವ ನಡೆಸಿದ ಹೋರಾಟ ಸ್ಮರಣೀಯ ಎಂದರು.

ಪರಿವರ್ತನೆಯೇ ಮಹತ್ವ
ಮಡಿವಾಳ ಮಾಚಿದೇವ ಅವರು ವೃತ್ತಿಯನ್ನು ಪಾಲಿಸಿಕೊಂಡು ಶರಣರ ಬಟ್ಟೆಗಳನ್ನು ಶುಚಿ ಮಾಡುವುದಕ್ಕಿಂತ ವಚನ ಸಾಹಿತ್ಯದ ಮೂಲಕ ಸಮಾಜ ಪರಿವರ್ತನೆಯಲ್ಲಿ ತೊಡಗಿಸಿಕೊಂಡಿದ್ದು ಅತ್ಯಂತ ಮಹತ್ವದ ವಿಚಾರ. ಸಾಮಾಜಿಕ ಸಮಸ್ಯೆಗಳನ್ನು ತಮ್ಮ 400ಕ್ಕೂ ಹೆಚ್ಚು ತೀಕ್ಷ್ಣ ವಚನ ಸಾಹಿತ್ಯದ ಮೂಲಕ ಹೋಗಲಾಡಿ ಸುವ ಪ್ರಯತ್ನ ನಡೆಸಿರುವುದು ಆ ಕಾಲಕ್ಕೆ ಮಾದರಿ. ಆದರೆ ಉಳಿದ ವಚನಕಾರರಂತೆ ಮಾಚಿದೇವರ ವಚನಗಳು ವಿಮರ್ಶೆಗೆ ಒಳಗಾಗದೇ ಇರುವುದು ಬೇಸರದ ವಿಚಾರ ಎಂದರು.

ವೈಚಾರಿಕ ಹೋರಾಟ
ವಚನ ಸಾಹಿತ್ಯವನ್ನು ಉಳಿಸುವಲ್ಲಿಯೂ ಅಗತ್ಯ ಸೇವೆ ಸಲ್ಲಿಸಿದವರು ಮಾಚಿದೇವ. ವಚನ ಸಾಹಿತ್ಯ ನಾಶಕ್ಕೆ ಹೊರಟವರ ವಿರುದ್ಧ ಯೋಧನಾಗಿ ಹೋರಾಟ ಮಾಡಿದವರು ಅವರು ಎಂದು ಹೇಳಿದ ಬಿ.ವಿ. ಸೂರ್ಯನಾರಾಯಣ, ತಾವು ಶಿವಶರಣರಾಗಿದ್ದು, ತಪ್ಪಿ ನಡೆವ ಶಿವಶರಣರ ವಿರುದ್ಧ ವೈಚಾರಿಕ ಟೀಕೆಗಳನ್ನು ಮಾಡಿದವರು. ಸ್ವತಃ ಗುರು ಬಸವಣ್ಣರು ತಪ್ಪು ಮಾಡಿದಾಗಲೂ ವಿರೋಧಿಸಿದವರು. ಇದು ಪ್ರಜಾಪ್ರಭುತ್ವ ಮಾದರಿಯಲ್ಲಿ ಧರ್ಮ ಕಟ್ಟುವ ಕಾರ್ಯ ಆಗಲೂ ನಡೆಯುತ್ತಿತ್ತು ಎನ್ನುವುದಕ್ಕೆ ಉದಾಹರಣೆ ಎಂದು ಅಭಿಪ್ರಾಯಪಟ್ಟರು.

ತಾ.ಪಂ. ಇಒ ಜಗದೀಶ್‌ ಎಸ್‌. ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್‌ ಸದಸ್ಯೆ ಮೀನಾಕ್ಷಿ ಮಂಜುನಾಥ, ಮಡಿವಾಳ ಸಮುದಾ ಯದ ಪ್ರಮುಖರು, ತಾಲೂಕು ಕಚೇರಿ ಸಿಬಂದಿ ವರ್ಗದವರು ಪಾಲ್ಗೊಂಡರು.

ಉಪ ತಹಶೀಲ್ದಾರ್‌ ಶ್ರೀಧರ್‌ ಕೋಡಿಜಾಲ್‌ ಸ್ವಾಗತಿಸಿ, ತಾಲೂಕು ಕಚೇರಿ ಸಿಬಂದಿ ದಯಾನಂದ ಕಾರ್ಯ ಕ್ರಮ ನಿರ್ವಹಿಸಿದರು.

ಸರಕಾರಕ್ಕೆ ಅಭಿನಂದನೆ
ಮಡಿವಾಳ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಮಾತನಾಡಿ, ಕಳೆದ ವರ್ಷ ದಿಂದ ಸರಕಾರ ಮಡಿವಾಳ ಮಾಚಿದೇವ ಅವರ ಜಯಂತಿಯನ್ನು ಆಚರಿಸುವ ಮೂಲಕ ಅವರ ಬದುಕಿಗೆ ನ್ಯಾಯ ನೀಡಿದೆ. ಈ ನಿಟ್ಟಿನಲ್ಲಿ ಸರಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.