ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಸ್ವಂತ ಕಟ್ಟಡವೇ ಇಲ್ಲ


Team Udayavani, Apr 3, 2018, 4:21 PM IST

3003rjh4.jpg

ಪುತ್ತೂರು ಎ. 2: ಪುತ್ತೂರಿಗೆ ಮಹಿಳಾ ಠಾಣೆ ಮಂಜೂರುಗೊಂಡು ವರ್ಷ ಪೂರೈಸಿದೆ. ಆದರೆ ಮಹಿಳಾ ಠಾಣೆಗೆ ಸ್ವಂತ ಕಟ್ಟಡದಲ್ಲಿ ಕಾರ್ಯ ನಿರ್ವಹಣೆಯ ಭಾಗ್ಯ ಇನ್ನೂ ಲಭಿಸಿಲ್ಲ. ಸುಳ್ಯ, ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕುಗಳನ್ನು ಒಳಗೊಂಡು ಪುತ್ತೂರು ವಿಭಾಗ ಕಾರ್ಯವ್ಯಾಪ್ತಿಯನ್ನು ಹೊಂದಿರುವ  ದ.ಕ. ಜಿಲ್ಲೆಯ 2ನೇ ಮಹಿಳಾ ಪೊಲೀಸ್‌ ಠಾಣೆ ಪುತ್ತೂರಿಗೆ ಮಂಜೂರು ಗೊಂಡು 2017ರ ಮಾ. 11ರಂದು ಸಂಚಾರ ಠಾಣೆಯ ಹೊಸ ಕಟ್ಟಡದಲ್ಲಿ ತಾತ್ಕಾಲಿಕ ಉದ್ಘಾಟನೆಗೊಂಡಿತ್ತು.

ಶಾಸಕರ ಸಹಿತ ಭಾಗಶಃ ಸ್ಥಳೀಯ ಸಂಸ್ಥೆಗಳ ಪ್ರಮುಖ ಸ್ಥಾನಗಳಲ್ಲಿ ಮಹಿಳಾ ಪಾರಮ್ಯ ಮೆರೆದಿರುವ ಪುತ್ತೂರಿಗೆ ಮಹಿಳಾ ಠಾಣೆಯ ಮಂಜೂರಾತಿ ಮತ್ತೂಂದು ಗರಿ ಯನ್ನು ಮೂಡಿಸಿತ್ತು. ಮಹಿಳಾ ಠಾಣೆಯ ಮಂಜೂರಾತಿ ನೆಲೆಯಲ್ಲಿ  ಶಾಸಕಿ ಶಕುಂತಳಾ ಟಿ. ಶೆಟ್ಟಿಯವರು ಗೃಹ ಸಚಿವರ ಮನವೊಲಿ ಸುವಲ್ಲಿ  ಯಶಸ್ವಿಯಾಗಿದ್ದರು.

ಸ್ವಂತ ಕಟ್ಟಡಕ್ಕೆ 20 ಲಕ್ಷ ರೂ.
ಅನಂತರದಲ್ಲಿ ಮಹಿಳಾ ಠಾಣೆಗೆ ಸ್ವಂತ ಕಟ್ಟಡವಾಗಬೇಕೆಂಬ ನಿಟ್ಟಿನಲ್ಲಿ ಆರಂಭಿಸ ಲಾದ ಪ್ರಯತ್ನವೂ ಸಾಕಾರಗೊಂಡು ಸರಕಾರ ಗೃಹ ಇಲಾಖೆಯ ಮೂಲಕ 20 ಲಕ್ಷ ರೂ. ಮಂಜೂರುಗೊಳಿಸಿತ್ತು. ಈ ಅನುದಾನದಲ್ಲಿ ಈ ಹಿಂದೆ ಸಂಚಾರ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದ ಹಳೆಯ ಪೊಲೀಸ್‌ ಸ್ಟೇಷನ್‌ ಕಟ್ಟಡವನ್ನು ಅಭಿವೃದ್ಧಿಪಡಿಸಿ ಅಲ್ಲಿಗೆ ಮಹಿಳಾ ಠಾಣೆ ಯನ್ನು ಸ್ಥಳಾಂತರಿಸುವ ಯೋಜನೆ ಹಾಕಿ ಕೊಂಡಿದ್ದರೂ ಇನ್ನೂ ಕಾರ್ಯಗತಗೊಂಡಿಲ್ಲ.

ನಿರ್ವಹಣೆಯಿಲ್ಲದೆ ಅನಾಥ
ಶ್ರೀ ಮಹಾಲಿಂಗೇಶ್ವರ ದೇವಾಲಯದ ಮುತ್ತು ಬೆಳೆದ ಕೆರೆಯ ಬಳಿ ಮುಖ್ಯರಸ್ತೆಗೆ ಹೊಂದಿಕೊಂಡಂತೆ ಇರುವ ಹಲವು ದಶಕಗಳ ಇತಿಹಾಸ ಹೊಂದಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಚಾರ ಪೊಲೀಸ್‌ ಠಾಣೆ 2015ರ ಸೆ. 7ರಂದು ಪಕ್ಕದ ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡಿತ್ತು. ಎರಡೂವರೆ ವರ್ಷಗಳಿಂದ ನಿರ್ವಹಣೆಯಿಲ್ಲದೆ ಕಟ್ಟಡ ಶಿಥಿಲಗೊಳ್ಳುತ್ತಿದೆ.

2010ರಲ್ಲಿ ಪುತ್ತೂರಿಗೆ ಸಂಚಾರ ಪೊಲೀಸ್‌ ಠಾಣೆ ಮಂಜೂರಾದಾಗ ಈ ಕಟ್ಟಡ ವನ್ನು ಸಂಚಾರ ಠಾಣೆಯನ್ನಾಗಿಸಲಾಗಿತ್ತು. ಅದಕ್ಕೂ ಮೊದಲು ಹಲವು ವರ್ಷಗಳಿಂದ ಪುತ್ತೂರು ಪೊಲೀಸ್‌ ಠಾಣೆ ಕಾರ್ಯ ನಿರ್ವ ಹಿಸುತ್ತಿತ್ತು. ಹೀಗೆ ಪುತ್ತೂರಿನ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಹೊಸದಾಗಿ ಆರಂಭಗೊಳ್ಳುವ ವ್ಯವಸ್ಥೆಗಳು ಇದೇ ಕಟ್ಟಡದಲ್ಲಿ ಆರಂಭಗೊಳ್ಳುವುದು ವಿಶೇಷ. ಪ್ರಸ್ತುತ ಮಹಿಳಾ ಠಾಣೆಗೆ ಸಂಬಂಧಪಟ್ಟ ಪಿಎಸ್‌ಐ, ಎಎಸ್‌ಐ ಹಾಗೂ ಸುಮಾರು 7 ಸಿಬಂದಿ ಸಂಚಾರ ಪೊಲೀಸ್‌ ಠಾಣೆಯ ಕಟ್ಟಡದಲ್ಲಿ ವಿಭಾಗ ಮಾಡಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮೂರು ತಾ| ಗಳ ಕಾರ್ಯವ್ಯಾಪ್ತಿಯನ್ನು ಹೊಂದಿರುವ ಮಹಿಳಾ ಠಾಣೆಯ ಸಮರ್ಪಕ ಕರ್ತವ್ಯ ನಿರ್ವಹಣೆ  ಭಾಗವಾಗಿ ಪ್ರತ್ಯೇಕ ವ್ಯವಸ್ಥೆಯ  ಅನಿವಾರ್ಯವೂ ಇವರಿಗಿದೆ.

ಪುನಶ್ಚೇತನ ಯಾವಾಗ?
ಮಹಿಳಾ ಠಾಣೆಯನ್ನು ಈ ಹಳೆಯ ಕಟ್ಟಡಕ್ಕೆ ಸ್ಥಳಾಂತರಿಸುವುದಕ್ಕೆ ಮೊದಲು ಅದನ್ನು 20 ಲಕ್ಷ ರೂ. ವೆಚ್ಚದಲ್ಲಿ ಪುನಶ್ಚೇತನಗೊಳಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರಿಂದ ಸೂಚನೆ ನೀಡಲಾಗಿದೆ. ಆದರೆ ಇನ್ನೂ ಅಭಿವೃದ್ಧಿ ಕಾರ್ಯ ಆರಂಭಗೊಂಡಿಲ್ಲ. ಹಾಲಿ ಭೂತ ಬಂಗಲೆಯಂತಿರುವ ಹಳೆಯ ಪೊಲೀಸ್‌ ಸ್ಟೇಷನ್‌ ಕಟ್ಟಡದ ನಿರ್ವಹಣೆ ಮಾಡುತ್ತಿಲ್ಲವಾದ್ದರಿಂದ ಇನ್ನಷ್ಟು ಶಿಥಿಲಗೊಳ್ಳುವ ಸಾಧ್ಯತೆಯೂ ಇದೆ.

 ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

1-swami-sm-bg

Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.