ಪುತ್ತೂರು ನಗರಸಭೆ: ಹೊಸ ಕಚೇರಿಗೆ ಸಿದ್ಧತೆ

5 ಕೋಟಿ ರೂ. ಯೋಜನೆ; ಮರಳಿ ಮೂಲ ಸ್ಥಳಕ್ಕೆ ಕಚೇರಿ ಕಟ್ಟಡ?

Team Udayavani, Nov 21, 2019, 4:07 AM IST

gg-21

ಪುತ್ತೂರು: ದಿನವಹಿ ಸಂತೆ ಮಾರುಕಟ್ಟೆಯ ಉದ್ದೇಶಕ್ಕೆ ನಿರ್ಮಿಸಿದ ಕಟ್ಟಡದ ಭಾಗವನ್ನೂ ಕಚೇರಿಯಾಗಿಸಿ ಬಳಕೆ ಮಾಡಿಕೊಂಡ ಕಳಂಕ ಹೊತ್ತಿರುವ ಪುತ್ತೂರು ನಗರಸಭೆಗೆ ಹೊಸದಾಗಿ ಕಚೇರಿ ಕಟ್ಟಡ ನಿರ್ಮಿಸುವ ರೂಪುರೇಷೆ ಸಿದ್ಧಗೊಳ್ಳುತ್ತಿದೆ.

ಪುತ್ತೂರು ಶಾಸಕ ಸಂಜೀವ ಮಠಂದೂರು ಈ ನಿಟ್ಟಿನಲ್ಲಿ ಮುಂದಡಿಯ ಹೆಜ್ಜೆ ಇರಿಸಿದ್ದು, ಬಹುಮತ ಹೊಂದಿರುವ ಬಿಜೆಪಿ ನಗರಸಭೆ ಸದಸ್ಯರು ಇದಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ನಗರಸಭೆಗೆ ಹೊಸ ಕಚೇರಿ ಕಟ್ಟಡ ನಿರ್ಮಿಸುವ ನಿಟ್ಟಿನಲ್ಲಿ ನೀಲ ನಕಾಶೆಯನ್ನು ಸಿದ್ಧ ಗೊಳಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಲಾಗಿದೆ.

ಪಟ್ಟಣ ಪಂಚಾಯತ್‌ ಕಾಲದಿಂದ ಪುರಸಭೆ ಆದಾಗಲೂ ಮಿನಿ ವಿಧಾನ ಸೌಧದ ಬಳಿಯ ಕಟ್ಟಡದಲ್ಲಿ ಕಾರ್ಯನಿರ್ವಹಿಸಿ ಸುಮಾರು 15 ವರ್ಷಗಳ ಹಿಂದೆ ಈ ನಗರಸಭೆ ಕಚೇರಿ ಕಟ್ಟಡ ನಿರ್ಮಾಣವಾಗಿ ಸ್ಥಳಾಂತರ ನಡೆದಿತ್ತು. ಈ ಕಟ್ಟಡ ನಿರ್ಮಾಣವಾದಾಗ ನೆಲ ಮಹಡಿಯಲ್ಲಿ ಸಂತೆಗೆಂದೇ ವ್ಯಾಪಾರಿ ವಿಭಾಗಗಳನ್ನು ನಿರ್ಮಿ ಸಲಾಗಿತ್ತು. ಮೇಲ್ಮ ಹಡಿಯಲ್ಲಿ ಆಡಳಿತ ಕಚೇರಿ, ಕಾರ್ಯಾ ಲಯ ನಿರ್ಮಿಸಲಾಗಿತ್ತು. ಕಟ್ಟಡ ಪೂರ್ಣಗೊಂಡ ಬಳಿಕ ಸಂತೆಗೆ ಮೀಸಲಿಟ್ಟ ಜಾಗವೂ ನಗರಸಭೆಗೇ ಮೀಸಲಾಯಿತು.

5 ಕೋಟಿ ರೂ. ಯೋಜನೆ
ನಗರಸಭಾ ಆಡಳಿತ ಕಚೇರಿಯ ಹೊಸ ಕಟ್ಟಡವನ್ನು ನಿರ್ಮಿಸುವ ನಿಟ್ಟಿನಲ್ಲಿ 5 ಕೋಟಿ ರೂ. ಯೋಜನೆ ಹಾಕಿಕೊಳ್ಳಲಾಗಿದೆ. ಇದಕ್ಕೆ ಶಾಸಕರ 2 ಕೋಟಿ ರೂ., ನಗರೋತ್ಥಾನದ 1 ಕೋಟಿ ರೂ. ಅನುದಾನವನ್ನು ಇರಿಸಲಾಗಿದೆ. ಇನ್ನುಳಿದ 2 ಕೋಟಿ ರೂ. ಅನುದಾನಕ್ಕೆ ಸರಕಾರಕ್ಕೆ ಬರೆಯಲು ನಿರ್ಧರಿಸಲಾಗಿದೆ.

ಮತ್ತೆ ಮೂಲ ಜಾಗಕ್ಕೆ
ಕಿಲ್ಲೆ ಮೈದಾನದಲ್ಲಿನ ಪುತ್ತೂರು ಸೋಮವಾರ ಸಂತೆಗೆ ಶತಮಾನದ ಇತಿಹಾಸವಿದೆ. ಕೆಲವು ವರ್ಷಗಳ ಹಿಂದೆ ಸಂಚಾರಕ್ಕೆ ಸಮಸ್ಯೆಯಾಗುವ ಕಾರಣ ನೀಡಿ ಈ ಸಂತೆಯನ್ನು ಎಪಿಎಂಸಿಗೆ ಸ್ಥಳಾಂತರ ಮಾಡಿದ್ದರೂ ನಿರೀಕ್ಷಿತ ಫಲ ನೀಡದ ಕಾರಣ ಹಾಗೂ ವಿರೋಧ ವ್ಯಕ್ತವಾದ ಕಾರಣ ಮರಳಿ ಕಿಲ್ಲೆ ಮೈದಾನಕ್ಕೆ ಸ್ಥಳಾಂತರಗೊಳಿಸಲಾಗಿತ್ತು. ಇದೇ ಸಂದರ್ಭದಲ್ಲಿ ಆಗಿನ ನಗರಸಭೆ ಆಡಳಿತವು ಸಂತೆ ವ್ಯಾಪಾರಕ್ಕೆ ಪ್ರತ್ಯೇಕ ಸಂತೆಕಟ್ಟೆ ನಿರ್ಮಿಸುವ ಭರವಸೆಯನ್ನೂ ನೀಡಿ ಹಿಂದಿನ ಪುರಸಭೆ ಕಾರ್ಯನಿರ್ವಹಿಸುತ್ತಿದ್ದ ಜಾಗದಲ್ಲಿ ಕಟ್ಟೆ ನಿರ್ಮಿಸಲು 1 ಕೋಟಿ ರೂ. ಅನುದಾನವನ್ನೂ ನಿಗದಿಪಡಿಸಿತ್ತು. ಆದರೆ ಈಗ ಅದೇ ಜಾಗದಲ್ಲಿ ನಗರಸಭೆ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ ಹಾಕಿಕೊಂಡಿದೆ. ಹಾಲಿ ಇರುವ ನಗರಸಭೆ ಕಟ್ಟಡವನ್ನು ವಾಣಿಜ್ಯ ಸಂಕೀರ್ಣ, ದಿನವಹಿ ಮಾರುಕಟ್ಟೆ ಉದ್ದೇಶಕ್ಕೆ ಬಳಸಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಎಡಿಬಿ ಸಾಲದ ಶೂಲ!
ಹತ್ತು ವರ್ಷಗಳ ಹಿಂದೆ ಅಂದಿನ ಪುರಸಭೆ ಆಡಳಿತವು ವಿವಿಧ ಅಭಿವೃದ್ಧಿ ಕೆಲಸಗಳಿಗಾಗಿ ಎಡಿಬಿಯಿಂದ ಪಡೆದ ಸುಮಾರು 58 ಕೋಟಿ ರೂ. ಸಾಲದ ಹಣದಲ್ಲಿ 18 ಕೋಟಿ ರೂ. ಹಾಗೂ 10 ವರ್ಷಗಳ ಬಡ್ಡಿಯ ಶೂಲವೂ ಇದೆ. ಈ ಹಣದಲ್ಲಿ ನೀರು ಪೂರೈಕೆ, ವಾಣಿಜ್ಯ ಸಂಕೀರ್ಣ, ಶೌಚಾಲಯ, ರಸ್ತೆ ನಿರ್ಮಾಣ, ನಗರಸಭೆಯ ಕಚೇರಿ ಕಟ್ಟಡ ನಿರ್ಮಾಣಕ್ಕೂ ವಿನಿಯೋಗಿಸಲಾಗಿತ್ತು. ಈ ಸಾಲವನ್ನು ಮನ್ನಾ ಮಾಡುವ ಕುರಿತಂತೆ ಸರಕಾರದ ಜತೆ ಚರ್ಚೆ ನಡೆಸಲಾಗುವುದು ಎಂದು ಮಠಂದೂರು ತಿಳಿಸಿದ್ದಾರೆ.

ಶೀಘ್ರ ಕಾಮಗಾರಿ
ಹಿಂದಿನ ಕಟ್ಟಡದಲ್ಲಿ ಸಂತೆ ಮಾರುಕಟ್ಟೆಗೆ ನಿಗದಿಪಡಿಸಿದ ಜಾಗವನ್ನು ಯಾಕೆ ಕಚೇರಿಗೆ ಬಳಸಿಕೊಂಡರೋ ಗೊತ್ತಿಲ್ಲ. ಆದರೆ ನಗರಸಭೆಗೆ ಸುಸಜ್ಜಿತ, ವ್ಯವಸ್ಥಿತ ನೂತನ ಕಚೇರಿ ಕಟ್ಟಡ ಆಗಬೇಕು ಎಂಬ ದೃಷ್ಟಿಯಿಂದ ಮುಂದಡಿ ಇಟ್ಟಿದ್ದೇವೆ. ಈ ನಿಟ್ಟಿನಲ್ಲಿ 2 ಕೋಟಿ ರೂ. ನನ್ನ ಅನುದಾನ ನೀಡಲು ಬದ್ಧನಿದ್ದೇನೆ. ಶೀಘ್ರ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯಲಿದೆ.
– ಸಂಜೀವ ಮಠಂದೂರು, ಶಾಸಕ, ಪುತ್ತೂರು

ಹೆಚ್ಚುವರಿ ಅನುದಾನಕ್ಕೆ ಬೇಡಿಕೆ
ಪಟ್ಟಣ ಪಂಚಾಯತ್‌, ಪುರಸಭೆ ಆಗಿದ್ದಾಗ ಕಾರ್ಯನಿರ್ವಹಿಸುತ್ತಿದ್ದ ಜಾಗದಲ್ಲಿ ನಗರಸಭೆಯ ಹೊಸ ಕಚೇರಿ ಕಟ್ಟಡ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ನಗರೋತ್ಥಾನ ಯೋಜನೆಯ 1 ಕೋಟಿ ರೂ. ಇರಿಸಿದ್ದೇವೆ. ಈ ನಿಟ್ಟಿನಲ್ಲಿ ಒಂದಷ್ಟು ಹೆಚ್ಚುವರಿ ಅನುದಾನದ ಆವಶ್ಯಕತೆಯೂ ಇದೆ. ಈ ಕುರಿತು ಪ್ರಯತ್ನ ನಡೆಸುತ್ತಿದ್ದೇವೆ.
-ರೂಪಾ ಟಿ. ಶೆಟ್ಟಿ , ಪೌರಾಯುಕ್ತೆ, ನಗರಸಭೆ ಪುತ್ತೂರು

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.