ಪುತ್ತೂರು: ಎಂಟನೇ ದಿನಕ್ಕೆ ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ
Team Udayavani, May 30, 2018, 4:23 PM IST
ಪುತ್ತೂರು : ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಅಂಚೆ ನೌಕರರು ಪುತ್ತೂರು ಪ್ರಧಾನ ಅಂಚೆ ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆ ಮಂಗಳವಾರ 8ನೇ ದಿನಕ್ಕೆ ಕಾಲಿಟ್ಟಿದ್ದು, 200ಕ್ಕೂ ಹೆಚ್ಚು ಮಂದಿ ಪಾಲ್ಗೊಂಡರು. ಧರಣಿ ನಡೆಸಿದ ನೌಕರರು ನಗರದಲ್ಲಿ ಮೆರವಣಿಗೆಯಲ್ಲಿ ಸಾಗಿ ಸಹಾಯಕ ಕಮಿಷನರ್ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು.
ಧರಣಿನಿರತರನ್ನು ಉದ್ದೇಶಿಸಿ ಮಾತನಾಡಿದ ಅಖೀಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ವಿಭಾಗೀಯ ಕಾರ್ಯದರ್ಶಿ ಸುನೀಲ್ ದೇವಾಡಿಗ, ಗ್ರಾಮೀಣ ಅಂಚೆ ನೌಕರರ ಸಮಸ್ಯೆಯ ಅಧ್ಯಯನ ನಡೆಸಿ ನೀಡಿದ ವರದಿಯನ್ನು ಕ್ಯಾಬಿನೆಟ್‌ನಲ್ಲಿ ಅನುಮೋದಿಸಲು 2 ತಿಂಗಳು ಕಳೆದರೂ ಕೇಂದ್ರ ಸರಕಾರಕ್ಕೆ ಸಾಧ್ಯವಾಗಿಲ್ಲ. ಇಲಾಖೆಯ ಆಧಿಕಾರಿಗಳು ನೌಕರರ ಕುರಿತು ತಪ್ಪು ಮಾಹಿತಿ ನೀಡಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ.
ಸರಕಾರ ಬೇಡಿಕೆಗಳನ್ನು ಈಡೇರಿಸಲು ಎಷ್ಟು ಸಮಯ ಬೇಕಾದರೂ ತೆಗೆದುಕೊಳ್ಳಲಿ. ಆದರೆ ಲಿಖೀತ ರೂಪದಲ್ಲಿ
ಯಾವಾಗ ಸರಿಯಾಗುತ್ತದೆ ಎಂಬುದನ್ನು ತಿಳಿಸಲಿ ಎಂದು ರಾಷ್ಟ್ರೀಯ ಸಮಿತಿ ಕೇಳಿಕೊಂಡಿದೆ ಎಂದರು.
ಉಪವಾಸದ ಎಚ್ಚರಿಕೆ
ಯಾವುದೇ ಕಾರಣಕ್ಕೂ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಹೋರಾಟವನ್ನು
ಹತ್ತಿಕ್ಕುವ ಅಧಿಕಾರಿಗಳ ಪ್ರಯತ್ನವನ್ನೂ ನಡೆಯಲು ಬಿಡುವುದಿಲ್ಲ. ಇದು ಹೀಗೇ ಮುಂದುವರಿದರೆ ಗ್ರಾಮೀಣ ಮಟ್ಟದಿಂದಲೇ ಜನತೆ ದಂಗೆ ಏಳುವ ಭೀತಿ ಇದೆ. ಕೇಂದ್ರ ಸರಕಾರ ಹಾಗೂ ಇಲಾಖೆಯ ಅಧಿಕಾರಿಗಳು ಗ್ರಾಮೀಣ ನೌಕರರನ್ನು ಶೋಷಣೆ ಮಾಡುವುದರ ವಿರುದ್ಧ ನೌಕರರು ನಾಳೆಯಿಂದ ಉಪವಾಸ ಸತ್ಯಾಗ್ರಹ ನಡೆಸಲೂ ಸಿದ್ಧ. ಅನಾಹುತವಾದರೆ ಹಿರಿಯ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಪ್ರಧಾನ ಅಧೀಕ್ಷಕರ ಭೇಟಿ
ಪುತ್ತೂರು ವಿಭಾಗ ಪ್ರಧಾನ ಅಂಚೆ ಅಧೀಕ್ಷಕ ಎಲ್. ಮಂಜುನಾಥ ಅವರು ಧರಣಿ ಸ್ಥಳಕ್ಕೆ ಭೇಟಿ ನೀಡಿದರು. ಗ್ರಾಮೀಣ ಅಂಚೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರಕಾರದಿಂದ ಮಾತ್ರ ಸಾಧ್ಯ. ನೌಕರರ ಬೇಡಿಕೆಗಳ ಮನವಿ ಇದ್ದರೆ ಅದನ್ನು ಹಿರಿಯ ಅಧಿಕಾರಿಗಳ ಮೂಲಕ ತಲುಪಿಸಲಾಗುವುದು ಎಂದು ಹೇಳಿದರು.
ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ಕರ್ನಾಟಕ ವಲಯ ಉಪಾಧ್ಯಕ್ಷ ಬಿ. ಪ್ರಮೋದ್ ಕುಮಾರ್, ವಿಭಾಗೀಯ ಅಧ್ಯಕ್ಷ ವಿಠಲ ಪೂಜಾರಿ, ಗೌರವಾಧ್ಯಕ್ಷ ಜಗತ್ಪಾಲ ಹೆಗ್ಡೆ, ಬಂಟ್ವಾಳ ವಲಯ ಕಾರ್ಯದರ್ಶಿ ಗಣೇಶ್, ಬೆಳ್ತಂಗಡಿಯ ಶೇಖರ್, ಸಂತೋಷ್ ಪುತ್ತೂರು, ಸುಳ್ಯದ ಕಮಲಾಕ್ಷ ಸೇರಿದಂತೆ ಕಾರ್ಕಳ, ಮೂಡಬಿದ್ರೆ, ಸುಳ್ಯ, ಪುತ್ತೂರು, ಬಂಟ್ವಾಳ ವಲಯಗಳ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡರು.
ಮೆರವಣಿಗೆಯಲ್ಲಿ ಸಾಗಿ ಮನವಿ
ಅನಂತರ 200ಕ್ಕೂ ಮಿಕ್ಕಿ ನೌಕರರು ನಗರದ ಮುಖ್ಯರಸ್ತೆಯ ಮೂಲಕ ಘೋಷಣೆಗಳನ್ನು ಕೂಗುತ್ತ ಸಾಗಿ ಸಹಾಯಕ ಕಮಿಷನರ್ ಅವರ ಮೂಲಕ ಬೇಡಿಕೆಗಳ ಈಡೇರಿಸುವಂತೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಿ ಮನವಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.