ಪುತ್ತೂರು-ಸುಳ್ಯ ತಾ.ಪಂ. ಉಪಾಧ್ಯಕ್ಷ ಸ್ಥಾನಕ್ಕೆ ಕುತ್ತು

ಕಡಬಕ್ಕೆ ನೂತನ ತಾ.ಪಂ. ಭಾಗ್ಯ: ಮೀಸಲಾತಿ ಪ್ರಕಟ

Team Udayavani, Jun 22, 2020, 6:15 AM IST

ಪುತ್ತೂರು-ಸುಳ್ಯ ತಾ.ಪಂ. ಉಪಾಧ್ಯಕ್ಷ ಸ್ಥಾನಕ್ಕೆ ಕುತ್ತು

ವಿಶೇಷ ವರದಿ-ಪುತ್ತೂರು/ಸುಳ್ಯ: ಕಡಬ ತಾ.ಪಂ. ಆಗಿ ಹೊಸದಾಗಿ ರೂಪುಗೊಂಡು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಂಡಿದೆ. ಇದರ ಪರಿಣಾಮ ಪುತ್ತೂರು ಮತ್ತು ಸುಳ್ಯ ತಾ.ಪಂ.ನ ಉಪಾಧ್ಯಕ್ಷ ಸ್ಥಾನ ಖಾಲಿಯಾಗಲಿದ್ದು, ಹೊಸದಾಗಿ ಚುನಾವಣೆ ನಡೆಯಲಿದೆ.

ಎರಡೂ ತಾ.ಪಂ.ಗಳ ಉಪಾಧ್ಯಕ್ಷ ಸ್ಥಾನ ಹೊಂದಿರುವ ಸದಸ್ಯರು ಪ್ರತಿನಿಧಿಸುತ್ತಿರುವ ಕ್ಷೇತ್ರ ಕಡಬ ತಾ.ಪಂ.ಗೆ ಒಳಪಡಲಿರುವ ಕಾರಣ ಪುತ್ತೂರು ಮತ್ತು ಸುಳ್ಯ ತಾ.ಪಂ. ಉಪಾಧ್ಯಕ್ಷ ಸ್ಥಾನಕ್ಕೆ ಮರು ಚುನಾವಣೆ ನಡೆಯಬೇಕಿದೆ.

ಎರಡೂ “ಉಪಾಧ್ಯಕ್ಷೆ’ ಸ್ಥಾನ ತೆರವು
ತೆರವಾಗುತ್ತಿರುವ ಎರಡೂ ಉಪಾಧ್ಯಕ್ಷ ಸ್ಥಾನಗಳಲ್ಲಿ ಮಹಿಳೆಯರೇ ಇದ್ದಾರೆ. ಸುಳ್ಯ ತಾ.ಪಂ. ಉಪಾಧ್ಯಕ್ಷೆ ಶುಭದಾ ಎಸ್‌. ರೈ ಅವರು ಎಣ್ಮೂರು ಕ್ಷೇತ್ರ ಪ್ರತಿನಿಧಿಸುತ್ತಿದ್ದಾರೆ. ಪುತ್ತೂರು ತಾ.ಪಂ. ಉಪಾಧ್ಯಕ್ಷೆ ಲಲಿತಾ ಈಶ್ವರ ಅವರು ಚಾರ್ವಾಕ ತಾ.ಪಂ. ಕ್ಷೇತ್ರದ ಸದಸ್ಯೆಯಾಗಿದ್ದಾರೆ.

ಈ ಎರಡು ಕ್ಷೇತ್ರಗಳು ಕಡಬ ತಾ.ಪಂ. ವ್ಯಾಪ್ತಿಗೆ ಸೇರ್ಪಡೆ ಗೊಂಡಿವೆ. ಹೀಗಾಗಿ ಇವರಿಬ್ಬರ ಉಪಾಧ್ಯಕ್ಷ ಸ್ಥಾನ ತೆರವಾಗಲಿದೆ. ಈ ಇಬ್ಬರೂ ಬೇರೆ ಬೇರೆ ತಾಲೂಕುಗಳ ತಾ.ಪಂ. ಸದಸ್ಯೆ, ಉಪಾಧ್ಯಕ್ಷ ರಾಗಿದ್ದರೂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸಂಬಂಧಿಸಿ ಇವರಿಬ್ಬರು ಸುಳ್ಯ ಕ್ಷೇತ್ರದ ವ್ಯಾಪ್ತಿಗೆ ಸೇರುತ್ತಾರೆ. ಇನ್ನು ಮುಂದೆ ಇವರಿಬ್ಬರು ಒಂದೇ ತಾಲೂಕಿನ ತಾ.ಪಂ. ವ್ಯಾಪ್ತಿಯೊಳಗೂ ಸೇರಲಿದ್ದಾರೆ.

ಎಣ್ಮೂರು ಸದಸ್ಯರಿಗೆ ಇಕ್ಕಟ್ಟು
ಮೂರು ಗ್ರಾಮಗಳನ್ನು ಹೊಂದಿರುವ ಎಣ್ಮೂರು ತಾ.ಪಂ. ಕ್ಷೇತ್ರದ ಸದಸ್ಯರಿಗೆ ಸುಳ್ಯ ಮತ್ತು ಕಡಬ ತಾ|ನ ಗ್ರಾಮಗಳು ಒಳಪಡುವ ಕಾರಣ ಹೊಸ ಸಮಸ್ಯೆ ತಲೆದೋರಿದೆ. ಎಣ್ಮೂರು ತಾ.ಪಂ. ಕ್ಷೇತ್ರ ಎಣ್ಮೂರು, ಮುರುಳ್ಯ, ಎಡಮಂಗಲ ಗ್ರಾಮ ಒಳಗೊಂಡಿದೆ. ಕಡಬ ತಾಲೂಕು ಆದ ಬಳಿಕ ಎಡಮಂಗಲ ಮತ್ತು ಎಣ್ಮೂರು ಕಡಬಕ್ಕೆ ಸೇರಿತು. ಮುರುಳ್ಯ ಸುಳ್ಯದಲ್ಲೇ ಉಳಿದುಕೊಂಡಿದೆ.

ಈಗ ಎಣ್ಮೂರು ತಾ.ಪಂ. ಕ್ಷೇತ್ರ ಕಡಬಕ್ಕೆ ಸೇರಿದರೂ ಸುಳ್ಯಕ್ಕೆ ಒಳಪಟ್ಟಿರುವ ಮುರುಳ್ಯ ಗ್ರಾಮ ಯಾವ ತಾ.ಪಂ. ವ್ಯಾಪ್ತಿಗೆ ಬರಲಿದೆ ಎಂಬ ಜಿಜ್ಞಾಸೆ ಮೂಡಿದೆ. ವ್ಯಾಪ್ತಿ ಪ್ರಕಾರ ಎಣ್ಮೂರು ಮತ್ತು ಎಡಮಂಗಲಕ್ಕೆ ಸಂಬಂಧಿಸಿ ಕಡಬ ತಾ.ಪಂ., ಮುರುಳ್ಯ ಸುಳ್ಯ ತಾ.ಪಂ. ವ್ಯಾಪ್ತಿಗೆ ಒಳಪಡುತ್ತದೆ. ಅಂದರೆ ಇಲ್ಲಿನ ಸದಸ್ಯರು ಎರಡೂ ತಾ.ಪಂ. ವ್ಯಾಪ್ತಿಯೊಳಗೆ ಇದ್ದಂತೆ ಆಗಿದೆ.

ಸಹಾಯಕ ಆಯುಕ್ತರಿಗೆ ಪತ್ರ
ಪುತ್ತೂರು ಮತ್ತು ಸುಳ್ಯ ತಾ.ಪಂ.ಉಪಾಧ್ಯಕ್ಷರ ಸ್ಥಾನ ತೆರವಾಗುವ ಕಾರಣ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಉಭಯ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಗಳು ಸಹಾಯಕ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಕಡಬ ತಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಗೆ ದಿನಾಂಕ ನಿಗದಿ ಆದ ಸಂದರ್ಭ ಪುತ್ತೂರು, ಸುಳ್ಯ ತಾ.ಪಂ.ಉಪಾಧ್ಯಕ್ಷತೆಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಕಡಬ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ
ಕಡಬ: ನೂತನ ಕಡಬ ತಾ.ಪಂ.ನ ಪ್ರಥಮ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಂಡಿದ್ದು, ಅಧ್ಯಕ್ಷತೆ ಅನುಸೂಚಿತ ಜಾತಿ (ಮಹಿಳೆ), ಉಪಾಧ್ಯಕ್ಷತೆ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ನೂತನ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಶೀಘ್ರ ದಿನಾಂಕ ಘೋಷಣೆ ಯಾಗಲಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ಪುತ್ತೂರು ಹಾಗೂ ಸುಳ್ಯ ತಾ.ಪಂ.ನ ವ್ಯಾಪ್ತಿಯಲ್ಲಿರುವ ಕಡಬ ತಾ|ಗೆ ಸೇರ್ಪಡೆಯಾಗಿರುವ ಒಟ್ಟು 42 ಗ್ರಾಮ ಗಳನ್ನೊಳಗೊಂಡ 13 ತಾ.ಪಂ. ಕ್ಷೇತ್ರಗಳನ್ನು ಸೇರಿಸಿ ಹೊಸ ಕಡಬ ತಾ.ಪಂ. ರೂಪುಗೊಂಡಿದೆ. ಕಡಬ ತಾ.ಪಂ.ನ 13 ಸದಸ್ಯರ ಪೈಕಿ ಇಬ್ಬರು ಅನುಸೂಚಿತ ಜಾತಿ ಮಹಿಳಾ ಅಭ್ಯರ್ಥಿಗಳಿದ್ದಾರೆ. ಚಾರ್ವಾಕ ಕ್ಷೇತ್ರದ ಸದಸ್ಯೆ ಲಲಿತಾ ಈಶ್ವರ ಹಾಗೂ ಸವಣೂರು ತಾ.ಪಂ. ಸದಸ್ಯೆ ರಾಜೇಶ್ವರಿ ಕನ್ಯಾಮಂಗಲ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಅವಕಾಶ ಪಡೆದಿದ್ದಾರೆ. ಉಪಾಧ್ಯಕ್ಷತೆ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವುದರಿಂದ 13 ಅಭ್ಯರ್ಥಿಗಳಿಗೂ ಸ್ಪರ್ಧಿಸುವ ಅವಕಾಶವಿದೆ.

ವರದಿ ಸಲ್ಲಿಕೆ
ಸುಳ್ಯ ತಾ.ಪಂ. ಉಪಾಧ್ಯಕ್ಷರು ಪ್ರತಿನಿಧಿಸುವ ಕ್ಷೇತ್ರ ಕಡಬ ತಾ.ಪಂ.ಗೆ ಸೇರಲಿದ್ದು, ಹಾಗಾಗಿ ಇಲ್ಲಿನ ಉಪಾಧ್ಯಕ್ಷ ಸ್ಥಾನ ತೆರವಾಗಲಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ಕುರಿತು ತಾ.ಪಂ.ನಿಂದ ಸಹಾಯಕ ಆಯುಕ್ತರಿಗೆ ವರದಿ ಸಲ್ಲಿಸಲಾಗಿದೆ.
– ಭವಾನಿಶಂಕರ
ಇಒ, ತಾ.ಪಂ., ಸುಳ್ಯ

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

ud

Puttur: ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

2

Sullia: 10 ವರ್ಷದ ಬಳಿಕ ಚಿಂಗಾಣಿ ಗುಡ್ಡೆ ಟ್ಯಾಂಕ್‌ಗೆ ಕೊನೆಗೂ ನೀರು ಬಂತು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.