ಶ್ರೀ ಮಹಾಲಿಂಗೇಶ್ವರ ಜಾತ್ರೆ: ಧ್ವಜಾರೋಹಣ
Team Udayavani, Apr 11, 2019, 6:00 AM IST
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಅಂಗವಾಗಿ ಬುಧವಾರ ಬೆಳಗ್ಗೆ 9.54ರ ವೃಷಭ ಲಗ್ನ ಸುಮುಹೂರ್ತದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಕುಂಟಾರು ಶ್ರೀಧರ ತಂತ್ರಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಬೆಳಗ್ಗೆ ಶ್ರೀ ದೇಗುಲದಲ್ಲಿ ಪ್ರಾರ್ಥನೆ ನಡೆದು ಅನಂತರ ದೇವರ ಬಲಿ ಉತ್ಸವದ ಬಳಿಕ ಧ್ವಜಸ್ಥಂಭ ಪೂಜೆ ನಡೆದು ಧ್ವಜಾರೋಹಣ ನೆರವೇರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ಮತ್ತು ವಸಂತ ಕೆದಿಲಾಯ ಮತ್ತಿತರರು ವೈದಿಕ ಕಾರ್ಯಕ್ರಮ ನೆರವೇರಿಸಿದರು.
ಪುತ್ತೂರು ಶಾಸಕ ಸಂಜೀವ ಮಠಂದೂರು, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್. ಸುಧಾಕರ ಶೆಟ್ಟಿ, ಸದಸ್ಯರಾದ ಅರ್ಚಕ ವಸಂತ ಕೆದಿಲಾಯ, ಎನ್. ಕರುಣಾಕರ ರೈ, ಯು.ಪಿ. ರಾಮಕೃಷ್ಣ, ಜಾನು ನಾಯ್ಕ, ಸಂಜೀವ ನಾಯಕ್ ಕಲ್ಲೇಗ, ನಯನಾ ರೈ, ರೋಹಿಣಿ ಆಚಾರ್ಯ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಎನ್. ಕೆ. ಜಗನ್ನಿವಾಸ ರಾವ್, ವಾಸ್ತು ಎಂಜಿನಿಯರ್ ಪಿ.ಜಿ. ಜಗನ್ನಿವಾಸ್ ರಾವ್, ದೇಗುಲದ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್. ಬಾಬ ಮತ್ತಿತರರಿದ್ದರು.
ಹರಿದು ಬಂತು ಹಸುರುಕಾಣಿಕೆ
ಸೀಮೆಯ ಭಕ್ತರು ಅಡಿಕೆ, ಸೀಯಾಳ, ಬಾಳೆಗೊನೆ, ಕಬ್ಬಿನ ಜಲ್ಲೆ, ಮಾವಿನಕಾಯಿ ಗೊಂಚಲು, ಹಲಸಿನ ಕಾಯಿ, ಹಿಂಗಾರ ಮೊದಲಾದ ಸುವಸ್ತುಗಳನ್ನು ಬುಧವಾರ ಬೆಳಗ್ಗೆಯಿಂದಲೇ ದೇಗುಲಕ್ಕೆ ತಂದೊ ಪ್ಪಿಸುತ್ತಿದ್ದಾರೆ. ಸುವಸ್ತುಗಳನ್ನು ಧ್ವಜ ಸ್ತಂಭದ ಕಟ್ಟೆಗೆ ಸುತ್ತಲೂ ಕಟ್ಟಲಾಗುತ್ತದೆ. ನಿರಂತರ ಅನ್ನದಾನದಲ್ಲಿ ದಿನಂಪ್ರತಿ ಸಾವಿರಾರು ಮಂದಿ ಪಾಲ್ಗೊಳ್ಳುತ್ತಾರೆ.
ಇಂದು ಪೇಟೆ ಸವಾರಿ
ಜಾತ್ರೆಯ ಅಂಗವಾಗಿ ಎ. 11ರ ಬೆಳಗ್ಗೆ ಬಲಿ ಉತ್ಸವ, ರಾತ್ರಿ ಉತ್ಸವದ ಬಳಿಕ ಶ್ರೀ ದೇವರ ಪೇಟೆ ಸವಾರಿಯು ನೆಲ್ಲಿಕಟ್ಟೆ, ಸಾಲ್ಮರ, ಸೂತ್ರಬೆಟ್ಟುಗಳಲ್ಲಿ ನಡೆಯಲಿದೆ.
ಎ. 15: ವಿಷು ಕಣಿ
ಧ್ವಜಾರೋಹಣದ ಅನಂತರ ಪ್ರತಿ ದಿನ ದೇಗುಲದಲ್ಲಿ ಜಾತ್ರೆಯ ಧಾರ್ಮಿಕ ಕಾರ್ಯಕ್ರಮಗಳು, ದೇವರ ಪೇಟೆ ಸವಾರಿ ನಡೆಯಲಿದೆ. ಎ. 15ರಂದು ಶ್ರೀ ದೇಗುಲದಲ್ಲಿ ವಿಷು ಕಣಿ ಉತ್ಸವ ವಿಶೇಷವಾಗಿ ನಡೆದು ಅಂದು ರಾತ್ರಿ ದೇಗುಲದಲ್ಲಿ ಚಂದ್ರಮಂಡಲ ರಥೋತ್ಸವ ನಡೆಯಲಿದೆ ಎಂದು ದೇಗುಲದ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.