Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
ಪಿಕಪ್‌ನಲ್ಲಿ ತಂದು ರಸ್ತೆಯಲ್ಲಿ ಕಾರ್ಮಿಕನ ಮೃತದೇಹ ಇರಿಸಿದ್ದ ಪ್ರಕರಣ
Team Udayavani, Nov 18, 2024, 4:57 PM IST
ಪುತ್ತೂರು: ಕಟ್ಟಡ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿ ಮೇಸ್ತ್ರಿಗೆ ಸಹಾಯಕನಾಗಿ ಕೆಲಸ ನಿರ್ವಹಿಸಲೆಂದು ಶನಿವಾರ ತೆರಳಿದ್ದ ಚಿಕ್ಕಮುಡ್ನೂರು ಗ್ರಾಮದ ಸಾಲ್ಮರದ ಕೆರೆಮೂಲೆ ನಿವಾಸಿ ಶಿವಪ್ಪ ಅಸೌಖ್ಯದಿಂದ ಮೃತಪಟ್ಟಿದ್ದಾರೆಂದೂ, ಅವರ ಮೃತದೇಹವನ್ನು ಸಂಜೆ ವೇಳೆ ಪಿಕಪ್‌ನಲ್ಲಿ ತಂದು ಮನೆ ಮುಂಭಾಗದ ರಸ್ತೆಯಲ್ಲಿ ಮಲಗಿಸಿ ತೆರಳಿದ್ದ ಮಾಲಕನ ವರ್ತನೆಯ ವಿರುದ್ಧ ರವಿವಾರ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಘಟನೆಗೆ ಸಂಬಂಧಿಸಿ ಪೊಲೀಸರು ತನಿಖೆ ನಿಧಾನಗೊಳಿಸಿದ್ದು, ಮಾಲಕನ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ರವಿವಾರ ದಲಿತ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು, ಮುಖಂಡರು ಠಾಣೆ ಮುಂಭಾಗ ನೆರೆದು ಆಕ್ರೋಶ ವ್ಯಕ್ತಪಡಿಸಿರು. ಇನ್ನೊಂದೆಡೆ ಶಾಸಕ ಅಶೋಕ್ ಕುಮಾರ್ ರೈ ಅವರು ಮೃತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ಅನಂತರ ಶಿವಪ್ಪರನ್ನು ಕೆಲಸಕ್ಕೆ ಕರೆದುಕೊಂಡು ಹೋದ ಮಾಲಕ ಹೆನ್ರಿಯ ತಾವ್ರೋ ಇಂಡಸ್ಟ್ರೀಸ್ ಭೇಟಿ ನೀಡಿ ಅವರನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಪ್ರಕರಣ ದಾಖಲಿಸಿ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಶಾಸಕರು ಸೂಚನೆ ನೀಡಿದ್ದು, ಮಿಲ್‌ಗೂ ಬೀಗ ಜಡಿಯುವಂತೆ ಪೊಲೀಸರಿಗೆ ಸೂಚನೆ ನೀಡಿದರು.
ದಲಿತ ಸಂಘಟನೆ ಕಾರ್ಯಕರ್ತರು ಪುತ್ತೂರು ನಗರ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದರು. ಈ ವೇಳೆ ಸ್ಥಳಕ್ಕೆ ಬಂದ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ದಲಿತ ಸಂಘಟನೆಯ ಕಾರ್ಯಕರ್ತರ ಜತೆಗೂಡಿ ಠಾಣಾಧಿಕಾರಿಗಳೊಂದಿಗೆ ಚರ್ಚಿಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿದರು. ಪೊಲೀಸ್ ತನಿಖೆ ನಿಧಾನಗತಿಯಲ್ಲಿ ಸಾಗಿದೆ ಎಂದು ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಸಂಘಟನೆಯ ಕಾರ್ಯಕರ್ತರನ್ನು ಸಮಾಧಾನಿಸಿ ಪ್ರಕರಣದಲ್ಲಿ ತಪ್ಪು ಕಂಡು ಬಂದಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಮಿಲ್‌ಗೆ ತೆರಳಿ ಧಿಕ್ಕಾರ
ಪ್ರಕರಣದ ವಿರುದ್ಧ ಸಮಗ್ರ ತನಿಖೆಗೆ ಆಗ್ರಹಿಸಿ ಮತ್ತು ಮಾಲಕನ ವಿರುದ್ದ ಪ್ರಕರಣ ದಾಖಲಿಸಿ ಆತನನ್ನು ಬಂಧಿಸುವಂತೆ ದಲಿತ ಸಂಘಟನೆಗಳು, ಕುಟುಂಬಸ್ಥರು ಶನಿವಾರ ತಡರಾತ್ರಿ ತನಕವೂ ಆಗ್ರಹಿಸಿದರು. ರವಿವಾರ ಬೆಳಗ್ಗೆ ಮಿಲ್ ಮಾಲಕ ಹೆನ್ರಿ ಅವರ ಸಂಸ್ಥೆಯ ಬಳಿ ತೆರಳಿ ಅಲ್ಲಿ ಧಿಕ್ಕಾರ ಕೂಗಿದರು. ಮಾಲಕ ಬರುವಂತೆ ಆಗ್ರಹಿಸಿದ ಘಟನೆಯೂ ನಡೆಯಿತು.
ಮಿಲ್‌ಗೆ ಬೀಗ, ಪಿಕಪ್ ವಶಕ್ಕೆ
ಸಂಘಟನೆಗಳ ಆಗ್ರಹದ ಹಿನ್ನೆಲೆಯಲ್ಲಿ ಪೊಲೀಸರು, ಸಂಘಟನೆಯ ಪ್ರಮುಖರು ಸಾಲ್ಮರ ತಾವ್ರೋ ಇಂಡಸ್ಟ್ರೀಸ್ ಮಿಲ್‌ಗೆ ತೆರಳಿದರು. ಇದೇ ವೇಳೆ ಶಾಸಕ ಅಶೋಕ್ ಕುಮಾರ್ ರೈ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೊದಲಾದವರು ಸ್ಥಳಕ್ಕೆ ಆಗಮಿಸಿ ಮಾಲಕರು ಎಲ್ಲಿ ಎಂದು ವಿಚಾರಿಸಿದ್ದಾರೆ.
ಈ ವೇಳೆ ಆತ ಅಲ್ಲಿ ಇರಲಿಲ್ಲ. ಪೊಲೀಸರು ಮುಚ್ಚಿದ್ದ ಮಿಲ್‌ನ ಗೇಟ್ ತೆರೆದು ಮೃತದೇಹ ಸಾಗಿಸಿದ ಪಿಕಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಮಾಲಕನನ್ನು ವಿಚಾರಣೆಗೆ ಒಳಪಡಿಸುವ ಭರವಸೆ ನೀಡಿದರು. ಮರಣೋತ್ತರ ಪರೀಕ್ಷೆ ನಡೆದು ರವಿವಾರ ಮೃತರ ಅಂತ್ಯಸಂಸ್ಕಾರ ನಡೆಯಿತು. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
PCB: ಒಂದು ವರ್ಷದಲ್ಲಿ ಐದು ಕೋಚ್; ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್ ಜಾವೇದ್ ಆಯ್ಕೆ
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.