ಬೆಳ್ತಂಗಡಿ: ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಿಸಿದ ಸಚಿವ ಅಶೋಕ್
Team Udayavani, Apr 9, 2021, 2:47 PM IST
ಬೆಳ್ತಂಗಡಿ: ಬೆಳ್ತಂಗಡಿ ಸಂತಕೆಟ್ಟೆ ಶ್ರೀ ಮಂಜುನಾಥೇಶ್ವರ ಕಲಾಭವನದಲ್ಲಿ ಶುಕ್ರವಾರ ತಾಲೂಕಿನ ಅರ್ಹ ಫಲಾನುಭವಿಗಳಿಗೆ ಕಂದಾಯ ಸಚಿವ ಆರ್.ಅಶೋಕ್ 94ಸಿ ಹಕ್ಕು ಪತ್ರ ವಿತರಿಸಿದರು.
ಬಳಿಕ ನಡೆದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಶಾಸಕ ಹರೀಶ್ ಪೂಂಜ ಆಶಯ ಭಾಷಣ ಮಾಡಿದರು.
ಕೊಕ್ಕಡ ಹೋಬಳಿಯ 19, ಬೆಳ್ತಂಗಡಿ ಹೋಬಳಿಯ 23, ವೇಣೂರು ಹೋಬಳಿಯ 15 ಮಂದಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಯಿತು.
ಇದನ್ನೂ ಓದಿ:ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ ನೀಡಿದ ಕಂದಾಯ ಸಚಿವ ಆರ್.ಅಶೋಕ್
ಈ ವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಎಂ.ಶೆಟ್ಟಿ, ಸದಸ್ಯರಾದ ಕೊರಗಪ್ಪ ನಾಯ್ಕ್, ಸೌಮ್ಯಲತಾ ಜಯಂತ್ ಗೌಡ, ತಾ.ಪಂ.ಉಪಾಧ್ಯಕ್ಷೆ ವೇದಾವತಿ, ಸದಸ್ಯರಾದ ಸುಧೀರ್ ಸುವರ್ಣ, ಕೃಷ್ಣಯ್ಯ ಆಚಾರ್ಯ, ಅಮಿತಾ, ಸುಶೀಲಾ, ವಸಂತಿ ಲಕ್ಷ್ಮಣ್, ನ.ಪಂ.ಅಧ್ಯಕ್ಷೆ ರಜನಿ ಕುಡ್ವ, ದ.ಕ. ಜಿಲ್ಲಾ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ತಹಶೀಲ್ದಾರ್ ಮಹೇಶ್ ಜೆ. ಉಪಸ್ಥಿತರಿದ್ದರು.
ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಸ್ವಾಗತಿಸಿದರು.
ಬಳಿಕ ಸಚಿವರು ತಾಲೂಕು ಆಡಳಿತಕ್ಕೆ ಭೇಟಿ ನೀಡಿ ಅಹವಾಲು ಸ್ವೀಕರಿಸಿದರಲ್ಲದೆ, ಅಧಿಕಾರಿಗಳ ಕಾರ್ಯವೈಖರಿಯನ್ನು ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.