August ಅಂತ್ಯದವರೆಗೂ ಮಳೆ ಮುನ್ನೆಚ್ಚರಿಕೆ ಇರಲಿ: ಕೊಡಗು ಡಿಸಿ ವೆಂಕಟ್ ರಾಜಾ
Team Udayavani, Aug 19, 2024, 12:16 AM IST
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆಯು ಸೆ. 30ರ ವರೆಗೂ ಇರಲಿದ್ದು, ಆಗಸ್ಟ್ ಅಂತ್ಯದವರೆಗೂ ಹೆಚ್ಚಿನ ಎಚ್ಚರ ವಹಿಸಬೇಕಿದೆ ಎಂದು ಜಿಲ್ಲಾಧಿ ಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ.
ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಜಿಲ್ಲೆಯ ಭೂ ಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರ ವಹಿಸಬೇಕು. ಈಗ ಮಳೆ ಕಡಿಮೆ ಆಗಿದ್ದರೂ ಸಹ ಮುಂದಿನ ದಿನಗಳಲ್ಲಿ ಉತ್ತಮ ಮಳೆ ಆಗುವ ಸಾಧ್ಯತೆ ಇದೆ. ಆದ್ದರಿಂದ ಭಾರತೀಯ ಹವಾಮಾನ ಇಲಾಖೆ ಕಾಲಾ ಕಾಲಕ್ಕೆ ಹೊರಡಿಸುವ ಮಾಹಿತಿಯಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಅಧಿಕಾರಿಗಳು ಮತ್ತು ಎಂಜಿನಿಯರ್ಗಳು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡ ಬೇಕು. ನೋಡಲ್ ಅಧಿಕಾರಿಗಳು, ವಿವಿಧ ವಿಭಾಗದ ಎಂಜಿನಿಯರ್ಗಳು, ತಾ.ಪಂ. ಇಒಗಳು, ತಹ ಶೀಲ್ದಾರರು ಸೇರಿದಂತೆ ಪ್ರತಿಯೊಬ್ಬರೂ ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ರಸ್ತೆ ಗುಂಡಿ ಬಿದ್ದಿರುವ ಬಗ್ಗೆ ಹಾಗೂ ರಸ್ತೆಯ ಗುಂಡಿ ಮುಚ್ಚಿರುವ ಸಂಬಂಧ ದಿನಾಂಕ ಜತೆಗೆ, ಜಿಪಿಎಸ್ ಛಾಯಾಚಿತ್ರ ಸಹಿತ ಮಾಹಿತಿ ಒದಗಿಸಬೇಕು. ಈ ಬಗ್ಗೆ ಆಯಾಯ ತಹಶೀಲ್ದಾರರು ಗಮನಿಸಬೇಕು. ಹಣವನ್ನು ಸಂಬಂಧಪಟ್ಟ ಎಂಜಿನಿಯರಿಂಗ್ ಇಲಾಖೆಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಶಾಲೆಗಳ ಮೇಲ್ಛಾವಣಿ ಸ್ಥಿತಿಗತಿ ಬಗ್ಗೆ ಗಮನಹರಿಸು ವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸಲಹೆ ಮಾಡಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಪ್ಪ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀಣ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯಾ, ವಿವಿಧ ಇಲಾಖೆ ಅಧಿಕಾರಿಗಳು, ಎಂಜಿನಿಯರ್ಗಳು, ತಾ.ಪಂ. ಇಒಗಳು, ತಹಶೀಲ್ದಾರರು, ಪೌರಾಯುಕ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.