Rain ಬೆಳ್ತಂಗಡಿ: ಕೃಷಿ, ರಸ್ತೆ ಸಹಿತ ಮನೆಗಳಿಗೆ ಹಾನಿ
Team Udayavani, Dec 11, 2023, 11:52 PM IST
ಬೆಳ್ತಂಗಡಿ: ತಾಲೂಕಿನೆಲ್ಲೆಡೆ ರವಿವಾರ ರಾತ್ರಿ ಸಿಡಿಲು, ಗಾಳಿ ಸಹಿತ ಭಾರೀ ಮಳೆಯಾಗಿದ್ದು, ಕೃಷಿ, ರಸ್ತೆ, ಮನೆಗೆ ಹಾನಿಯಾಗಿದೆ.
ಸಂಜೆ 6.30ರ ಸುಮಾರಿಗೆ ಆರಂಭವಾದ ಮಳೆ ಸುಮಾರು ಎರಡು ತಾಸು ಕಾಲ ಎಡೆಬಿಡದೆ ಸುರಿಯಿತು. ಹಲವೆಡೆ ಕೊçಲಿನ ಅಡಿಕೆ ಒದ್ದೆಯಾಗಿದೆ. ಕೆಲವು ಕಡೆಗಳಲ್ಲಿ ಅಂಗಳ ಮತ್ತು ತೋಟದಿಂದ ಮಳೆ ನೀರಿನಲ್ಲಿ ಅಡಿಕೆ ತೇಲಿ ಹೋಗಿ ನಷ್ಟ ಉಂಟಾಗಿದೆ. ಗಾಳಿಗೆ ನೂರಾರು ಅಡಿಕೆ ಮರ, ಬಾಳೆ ಗಿಡಗಳು ಧರಾಶಾಯಿಯಾಗಿವೆ.
ಬೆಳಾಲು ಗ್ರಾಮದ ಆಲಡ್ಕ ವಸಂತ ಆಚಾರ್ಯ ಅವರ ಮನೆಗೆ ಸಿಡಿಲು ಬಡಿದು ಪಂಪ್, ವಿದ್ಯುತ್ ವೈರಿಂಗ್ ಸುಟ್ಟು ಹೋಗಿದೆ. ಮನೆಯ ಸಿಟ್ ಔಟ್ ಹಾಗೂ ತೆಂಗಿನ ಮರಕ್ಕೆ ಹಾನಿ ಸಂಭವಿಸಿದೆ. ಅಲ್ಲಲ್ಲಿ ವಿದ್ಯುತ್ ಉಪಕರಣಗಳಿಗೂ ಹಾನಿಯಾಗಿದೆ. ಮೊದಲೇ ಹದ್ದಗೆಟ್ಟಿರುವ ಗ್ರಾಮೀಣ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮಳಿಗೆಯವರು ಮಳೆಯಿಂದ ತೊಂದರೆ ಅನುಭವಿಸಿದರು.
ಮನೆ ಮೇಲೆ ಬಿದ್ದ ಮರ
ಮುಂಡಾಜೆ ಗ್ರಾಮದ ಒಂಜರೆಬೈಲು ಸೀತಾ ಅವರ ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಮನೆ ಮಂದಿಗೆ ಅಪಾಯ ಸಂಭವಿಸಿಲ್ಲ.ಸ್ಥಳಕ್ಕೆ ಮುಂಡಾಜೆ ವಿಎ ರಣಿತಾ, ತಾ.ಪಂ. ಸಂಯೋಜಕ ಜಯಾನಂದ ಲಾೖಲ, ಗ್ರಾ.ಪಂ. ಅಧ್ಯಕ್ಷ ಗಣೇಶ ಬಂಗೇರ ಭೇಟಿ ನೀಡಿದರು. ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಮರ ತೆರವು ಹಾಗೂ ಇನ್ನಿತರ ಕೆಲಸಗಳನ್ನು ನಡೆಸಿ ಕೊಟ್ಟಿದ್ದಾರೆ. ಮನೆ ಮಂದಿ ಪಕ್ಕದ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ.
ಹೆದ್ದಾರಿ ಸಂಚಾರ ಸಮಸ್ಯೆ
ರಾ. ಹೆದ್ದಾರಿಯ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಮಳೆಯಿಂದ ಸಂಚಾರಕ್ಕೆ ಸಮಸ್ಯೆ ಉಂಟಾಯಿತು. ಅಲ್ಲಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು ಅಗೆದು ಹಾಕಿರುವ ಮಣ್ಣು ರಸ್ತೆಗೆ ಹರಿದು ಬಂದು ರಸ್ತೆಯು ಸಂಪೂರ್ಣ ಕೆಸರುಮಯವಾಗಿತ್ತು. ಲಘು ವಾಹನ ಸವಾರರು ಪರದಾಡುವಂತಾಯಿತು. ಟ್ರಾಫಿಕ್ ಜಾಮ್ ಸಮಸ್ಯೆಯು ಕಂಡು ಬಂತು.ಮುಂಡಾಜೆ ಗ್ರಾಮದ ಸೋಮಂತಡ್ಕದ ಹೆದ್ದಾರಿಯಲ್ಲಿ ಸಿಮೆಂಟ್ ಸಾಗಾಟದ ಲಾರಿ ಹೆದ್ದಾರಿಯಿಂದ ಅಂಗಡಿಗೆ ತಿರುವು ಪಡೆಯುತ್ತಿದ್ದ ವೇಳೆ ಕೆಸರಲ್ಲಿ ಹೂತು ಹೋಯಿತು.
ಗ್ರಾಮೀಣ ಭಾಗದಲ್ಲಿ ಮಳೆ
ಮಂಗಳೂರು: ಸುಳ್ಯ, ಕಡಬ ತಾಲೂಕಿನ ಕೆಲವೆಡೆ ಸೋಮವಾರ ಹನಿ ಮಳೆಯಾಗಿದ್ದು, ಸುಬ್ರಹ್ಮಣ್ಯ ಸಮೀಪದ ಕೊಲ್ಲಮೊಗ್ರುವಿನಲ್ಲಿ ಸಾಧಾರಣ ಮಳೆಯಾಗಿದೆ. ಬೆಳ್ತಂಗಡಿ ಭಾಗದಲ್ಲಿ ಮೋಡ ಕವಿದ ವಾತಾವರಣವಿತ್ತು.
ಮಂಗಳೂರು ನಗರದಲ್ಲಿಯೂ ಬೆಳಗ್ಗಿನ ಅವಧಿಯಲ್ಲಿ ಮೋಡಕವಿದ ವಾತಾವರಣವಿತ್ತು. ಹೊತ್ತೇರುತ್ತಿದ್ದಂತೆ ಬಿಸಿಲು ಕಾಣಿಸಿಕೊಂಡಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 31.4 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಆವರಣಗೋಡೆ ಕುಸಿತ
ರವಿವಾರ ರಾತ್ರಿ ಸುರಿದ ಭಾರೀ ಮಳೆಗೆ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಬೊಳು³ಗುಡ್ಡೆ ರಸ್ತೆಯ ವಾದಿರಾಜ ಅವರ ಮನೆಯ ಆವರಣ ಗೋಡೆ ಜರಿದು ಬಿದ್ದು ಅಪಾರ ನಷ್ಟ ಸಂಭವಿಸಿದೆ. ಮನೆಗೂ ಅಪಾಯ ಭೀತಿ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady: ತ್ಯಾಜ್ಯ ಸರಿಯಾಗಿ ವಿಂಗಡಿಸಿ ಕೊಡದಿದ್ದರೆ ಕ್ರಮಕ್ಕೆ ಸದಸ್ಯರ ಸಲಹೆ
Bantwal: ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃ*ತ್ಯು
Bantwal: ಅಭಿವೃದ್ಧಿ ಕಾರ್ಯಕ್ಕಿಂತಲೂ ಸಮಸ್ಯೆಗಳ ಸರಮಾಲೆ ಪ್ರಸ್ತಾವಿಸಿದ ಸಾರ್ವಜನಿಕರು
Puttur: ಮುಖ್ಯ ರಸ್ತೆಯ ಚರಂಡಿ ಮೇಲಿನ ಪೈಪ್‌ನಲ್ಲಿ ಸಿಲುಕಿದ ಮಹಿಳೆ!
Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.