Rain ಬೆಳ್ತಂಗಡಿಯಲ್ಲಿ ಉತ್ತಮ ಮಳೆ, ಬಂಟ್ವಾಳದಲ್ಲಿ ಹಾನಿ
ಅ. 12ರಂದು ಎಲ್ಲೋ ಅಲರ್ಟ್; ಉತ್ತಮ ಮಳೆ ನಿರೀಕ್ಷೆ
Team Udayavani, Oct 11, 2023, 11:53 PM IST
ಮಂಗಳೂರು/ಬೆಳ್ತಂಗಡಿ/ಸುಳ್ಯ: ಬೆಳ್ತಂಗಡಿ ತಾಲೂಕಿನಲ್ಲಿ ಬುಧವಾರವೂ ಉತ್ತಮ ಮಳೆಯಾಗಿದೆ. ಕಳೆದ ಮೂರು ದಿನಗಳಿಂದ ಉತ್ತಮ ಮಳೆ ಸುರಿದಿದ್ದರಿಂದ ಕೆಲವೆಡೆ ಹಾನಿಯೂ ಸಂಭವಿಸಿತ್ತು. ಮುಂಡಾಜೆ, ಧರ್ಮಸ್ಥಳ, ಉಜಿರೆ, ಬೆಳ್ತಂಗಡಿ, ನಾರಾವಿ, ಕುತ್ಲೂರು, ವೇಣೂರು ಸಹಿತ ಎಲ್ಲೆಡೆ ಸಂಜೆ ಬಳಿಕ ಉತ್ತಮ ಮಳೆ ಸುರಿದಿದೆ.
ಸುಳ್ಯ ತಾಲೂಕು ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಬುಧವಾರ ಸಂಜೆ ಸಾಧಾರಣ ಮಳೆಯಾಗಿದೆ. ಕಡಬ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿತ್ತು. ಸಂಜೆ ವೇಳೆಗೆ ಅರ್ಧ ಗಂಟೆಗೂ ಅಧಿಕ ಸಮಯ ಮಳೆಯಾಗಿದೆ. ಸುಳ್ಯ ನಗರ, ಅರಂತೋಡು, ಸಂಪಾಜೆ, ಮಂಡೆಕೋಲು, ಜಾಲ್ಸೂರು, ಬೆಳ್ಳಾರೆ, ಪಂಜ, ಕೊಲ್ಲಮೊಗ್ರು, ಹರಿಹರ ಪಲ್ಲತ್ತಡ್ಕ, ಸುಬ್ರಹ್ಮಣ್ಯ, ಬಳ್ಪ, ಎಡಮಂಗಲ, ಬಿಳಿನೆಲೆ ಭಾಗದಲ್ಲಿ ಸಾಧರಣ ಮಳೆಯಾಗಿದೆ. ಕಡಬ, ಕಲ್ಲುಗುಡ್ಡೆ, ನೂಜಿಬಾಳ್ತಿಲ, ರೆಂಜಿಲಾಡಿ ಭಾಗದಲ್ಲಿ ಸಂಜೆ ವೇಳೆ ಉತ್ತಮ ಮಳೆಯಾಗಿದೆ.
ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಬುಧವಾರ ಮಳೆಯಾಗಿದೆ. ಮಂಗಳೂರಿನಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಅ. 12ರಂದು ಎಲ್ಲೋ ಅಲರ್ಟ್ ಘೋಷಿಸ ಲಾಗಿದ್ದು, ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ 30.5 ಡಿ.ಸೆ. ಗರಿಷ್ಠ ಮತ್ತು 23.9 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.
ಸಿಡಿಲಿನಿಂದ ಹಾನಿ
ಪುತ್ತೂರು: ಚಿಕ್ಕಮುಟ್ನೂರು ಗ್ರಾಮದ ಕೊಲ್ಯದಲ್ಲಿ ಮಂಗಳವಾರ ರಾತ್ರಿ ಸಿಡಿಲು ಬಡಿದು ಪೂವಪ್ಪ ಗೌಡ ಅವರ ಮನೆ ಹಾಗೂ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ. ಮನೆಯೊಳಗಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಬನ್ನೂರು ಗ್ರಾ.ಪಂ. ಅಧ್ಯಕ್ಷೆ ಸ್ಮಿತಾ ನಾಯ್ಕ, ಉಪಾಧ್ಯಕ್ಷ ಶೀನಪ್ಪ ಕುಲಾಲ್, ಸದಸ್ಯ ತಿಮ್ಮಪ್ಪ ಪೂಜಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
5 ಮನೆಗಳಿಗೆ ಸಿಡಿಲಾಘಾತ
ಬಂಟ್ವಾಳ: ತಾಲೂಕಿನೆಲ್ಲಡೆ ಮಂಗಳವಾರ ರಾತ್ರಿ ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದ್ದು, ಈ ಸಂದರ್ಭ ಸಿಡಿಲು ಬಡಿದು 5 ಮನೆಗಳಿಗೆ ಹಾನಿಯಾಗಿದೆ.
ಬಾಳ್ತಿಲ ಗ್ರಾಮದ ಸುಧೆಕಾರಿನ ಶೀನ ಅವರ ಮನೆಯ ವಿದ್ಯುತ್ ಸಂಪರ್ಕಕ್ಕೆ ಸಿಡಿಲು ಬಡಿದು ಹಾನಿಯಾಗಿದೆ. ವಿದ್ಯುತ್ ಪರಿಕರಣಗಳು ಸುಟ್ಟು ಹೋಗಿವೆ. ಇಡ್ಕಿದು ಗ್ರಾಮದ ಅರ್ಕೆಚಾರುನಲ್ಲಿ ಥಾಮಸ್ ಅವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿಯಾಗಿದೆ.
ಬೋಳಂತೂರು ಗ್ರಾಮದ ಸುರಿಬೈಲಿನ ಅಬ್ದುಲ್ ಖಾದರ್ ಅವರ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಫೈಬರ್ ಶೀಟ್‌ಗಳು ಹಾನಿಗೀಡಾಗಿವೆ. ಸಾಲೆತ್ತೂರು ಗ್ರಾಮದ ಮೆದು ಕೂಡುರಸ್ತೆಯಲ್ಲಿ ಹಮೀದ್ ಅವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದೆ. ಸಜೀಪಮುನ್ನೂರು ಗ್ರಾಮದ ಆಲಾಡಿಯಲ್ಲಿ ಅಬ್ದುಲ್ ರಝಾಕ್ ಅವರ ಮನೆಯ ಗೋಡೆ ಬಿರುಕು ಬಿಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.