ಸಕಲ ಸರಕಾರಿ ಗೌರವಗಳೊಂದಿಗೆ ರಾಮ ಭಟ್ಟರ ಅಂತಿಮ ಯಾತ್ರೆ
Team Udayavani, Dec 7, 2021, 1:16 PM IST
ಪುತ್ತೂರು: ಡಿ.6ರಂದು ಸಂಜೆ ವಿಧಿವಶರಾದ ಮಾಜಿ ಶಾಸಕ ಉರಿಮಜಲು ರಾಮ ಭಟ್ಟ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಸಾವಿರಾರು ಅಭಿಮಾನಿಗಳ, ಕಾರ್ಯಕರ್ತರ ಸಮ್ಮುಖದಲ್ಲಿ ನಡೆಯಿತು. ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಅವಣರದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆ ರಾಮ ಭಟ್ಟ ಅವರ ಕೊಂಬೆಟ್ಟು ಮನೆಯಲ್ಲಿ ಅಂತಿಮ ಯಾತ್ರೆಯ ಸಿದ್ಧತೆಯ ಬಳಿಕ ನೆಹರುನಗರ ವಿವೇಕಾನಂದ ಪದವಿ ಕಾಲೇಜು ಮತ್ತು ಇಂಜಿನಿಯರಿಂಗ್ ಕಾಲೇಜಿಗೆ ಮೆರವಣಿಗೆ ಮೂಲಕ ರಾಮಭಟ್ಟ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ದು ಅಲ್ಲಿ ನುಡಿನಮನ ಸಲ್ಲಿಸಲಾಯಿತು.
ಇದನ್ನೂ ಓದಿ:- ಒಂದು ಮತಕ್ಕೆ 50 ಸಾವಿರ ಆಮಿಷ: ಪರಿಷತ್ ಕಣದಲ್ಲಿ ಕಾಂಚಾಣದ ಕಾರುಬಾರು ಜೋರು; ವಿಡಿಯೋ ವೈರಲ್
ಅಲ್ಲಿಂದ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಆವರಣದಲ್ಲಿ ಸಾರ್ವಜನಿಕ ದರುಶನಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು. ಇದೇ ಸಂದರ್ಭದಲ್ಲಿ ಸರಕಾರಿ ಗೌರವ ನೀಡಲಾಯಿತು. ಬಳಿಕ ಚಿಕ್ಕಪುತ್ತೂರು ಮಡಿವಾಳಕಟ್ಟೆಯಲ್ಲಿ ಶಾಸ್ತ್ರೋಕ್ತವಾಗಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.