Dharmasthala; ಸಿರಿ ಸಂಸ್ಥೆ ಪ್ರಧಾನ ಕಚೇರಿಗೆ ರಮೇಶ್ ಅರವಿಂದ್ ಭೇಟಿ
Team Udayavani, Jan 28, 2024, 12:39 AM IST
ಬೆಳ್ತಂಗಡಿ: ಚಿತ್ರ ನಟ ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಉತ್ಪನ್ನಗಳ ರಾಯಭಾರಿ ಆಗಿರುವ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಚೇರಿ ಉಜಿರೆಗೆ ಶುಕ್ರವಾರ ಭೇಟಿ ನೀಡಿದರು.
ಬಳಿಕ ಸಭೆಯಲ್ಲಿ ಮಾತನಾಡಿ, ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಡಾ| ಹೇಮಾವತಿ ಅಮ್ಮನವರ ಮಾರ್ಗದರ್ಶನ ಹಾಗೂ ಸಿರಿ ಎಂಡಿ ಕೆ.ಎನ್. ಜನಾದìನ ಅವರ ಮುಂದಾ ಳತ್ವದಲ್ಲಿ ನಡೆಯುತ್ತಿರುವ ಸಿರಿ ಸಂಸ್ಥೆಯ ಉತ್ಪನ್ನಗಳಿಗೆ ರಾಯಭಾರಿಯಾಗಿರಲು ನನಗೆ ಬಹಳ ಹೆಮ್ಮೆಯೆನಿಸುತ್ತಿದೆ ಎಂದು ಅವರು ಹೇಳಿದರು.
ಇಲ್ಲಿನ ಪ್ರತೀ ಉತ್ಪನ್ನದಲ್ಲಿಯೂ ಬಡ ಹೆಣ್ಣುಮಕ್ಕಳ ಪರಿಶ್ರಮ ಅಡಗಿದೆ. ನಾವೆಲ್ಲರೂ ಸಿರಿ ಉತ್ಪನ್ನಗಳನ್ನು ಬಳಸಿದರೆ ಇಲ್ಲಿರುವ ಪ್ರತೀ ಹೆಣ್ಣುಮಕ್ಕಳ ಬಾಳಿನಲ್ಲೂ ಸದಾ ನಗು, ನೆಮ್ಮದಿ ಕೂಡಿ ರಲು ಸಹಕಾರಿಯಾಗಲಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ ಅವರು ಸಿರಿ ಸಿಬಂದಿಯ ಪರವಾಗಿ ರಮೇಶ್ ಅವರನ್ನು ಗೌರವಿಸಿದರು.
ಸಿರಿ ಆಡಳಿತ ಮಂಡಳಿ ನಿರ್ದೇಶಕರಾದ ರಾಜೇಶ್ ಪೈ, ಆಡಳಿತ ಮತ್ತು ಲೆಕ್ಕಪತ್ರ ವಿಭಾಗದ ನಿರ್ದೇಶಕ ಪ್ರಸನ್ನ ಯು. ಮೊದಲಾದವರಿದ್ದರು. ಸಿರಿ ಗೋದಾಮು ಪ್ರಬಂಧಕರಾದ ಜೀವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ರಮೇಶ್ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಡಾ| ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಸಿರಿ ಸಂಸ್ಥೆಯ ಅಭಿವೃದ್ಧಿ ಕುರಿತು ಚರ್ಚಿಸಿದರು. ರಮೇಶ್ ಅವರ ರಾಯಭಾರತ್ವದಲ್ಲಿ ಸಿರಿ ಸಂಸ್ಥೆಯು ಸಮಗ್ರ ಏಳಿಗೆ ಕಾಣುತ್ತಿರುವುದಕ್ಕೆ ಡಾ| ಹೆಗ್ಗಡೆ ಪ್ರಶಂಸೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
Sullia: ಪರಾರಿಯಾಗುತ್ತಿದ್ದ ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
Puttur: ಬಸ್ ನಿಲ್ದಾಣದಲ್ಲಿ ಕಿರುಕುಳ; ಯುವಕನಿಗೆ ಗೂಸಾ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.