ಕಿಲ್ಲೆ ಮೈದಾನದ ಐತಿಹಾಸಿಕ ಧ್ವಜಸ್ತಂಭ ನವೀಕರಣ
Team Udayavani, Jul 30, 2018, 1:21 PM IST
ನಗರ: ಕಿಲ್ಲೆ ಮೈದಾನದ ಬಳಿ ಇರುವ ಧ್ವಜಸ್ತಂಭ ಹಾಗೂ ಅದರ ಆವರಣವನ್ನು ನವೀಕರಿಸುವ ಕಾಮಗಾರಿ ಆರಂಭವಾಗಿದ್ದು, ನಗರಸಭೆಯ ಅಧ್ಯಕ್ಷೆ ಜಯಂತಿ ಬಲ್ನಾಡು ಹಾಗೂ ಸದಸ್ಯರು ವೀಕ್ಷಿಸಿದರು. ನಗರಸಭಾ ಅಧ್ಯಕ್ಷೆ ಜಯಂತಿ ಬಲ್ನಾಡು ಮಾತನಾಡಿ, ನಮ್ಮ ಕೋರಿಕೆಯಂತೆ ಅಂಬಿಕಾ ಸಮೂಹ ಸಂಸ್ಥೆಯ ಮುಖ್ಯಸ್ಥ ಸುಬ್ರಹ್ಮಣ್ಯ ನಟ್ಟೋಜ ಅವರು ತಮ್ಮ ಸ್ವಂತ 3 ಲಕ್ಷ ರೂ. ವೆಚ್ಚದಲ್ಲಿ ಧ್ವಜ ಸ್ತಂಭ ನವೀಕರಣ ಕಾಮಗಾರಿ ನಡೆಸಲು ಮುಂದಾಗಿದ್ದಾರೆ. ಈ ಸಂಸ್ಥೆಯವರು ಯೋಧರ ಸ್ಮಾರಕವನ್ನು ನಿರ್ಮಾಣ ಮಾಡಿ ಇದೀಗ ಧ್ವಜಸ್ತಂಭವನ್ನು ನವೀಕರಿಸಲು ಮುಂದಾಗಿರುವುದು ಅವರ ರಾಷ್ಟ್ರ ಪ್ರೇಮವನ್ನು ತೋರಿಸುತ್ತದೆ. ನಗರ ಸಭೆ, ಪುತ್ತೂರು ಜನತೆಯ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ ಎಂದರು.
ಯೋಧರ ಸ್ಮಾರಕ ಮತ್ತು ಧ್ವಜಸ್ತಂಭದ ಪಕ್ಕದಲ್ಲಿರುವ ಜಾಗವನ್ನು ಉತ್ತಮವಾಗಿ ಅಭಿವೃದ್ಧಿಪಡಿಸುವ, ಅಲ್ಲಿರುವ ರೇಡೀಯೋ ಕೇಂದ್ರ ಮತ್ತು ಸೈರನ್ ಅನ್ನು ನವೀಕರಿಸುವ, ಕಿಲ್ಲೆ ಮೈದಾನ, ಪುರಭವನವನ್ನು ಅಭಿವೃದ್ಧಿಪಡಿಸುವ ಕಾರ್ಯಗಳು 2 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿವೆ ಎಂದು ಹೇಳಿದರು. ನಗರಸಭಾ ಸದಸ್ಯ ಎಚ್. ಮಹಮ್ಮದ್ ಆಲಿ, ನಗರಸಭಾ ಕಿರಿಯ ಅಭಿಯಂತರ ಶ್ರೀಧರ್ ನಾಯ್ಕ. ಹಿರಿಯ ಆರೋಗ್ಯ ನಿರೀಕ್ಷಕಿ ಶ್ವೇತಾಕಿರಣ್, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
ನುಡಿ ನಮನ: ಸಾಮಾಜಿಕ ಚಿಂತಕ, ಎಲ್ಲರ ಮನಗೆದ್ದ ಶ್ರೇಷ್ಠ ಪ್ರಾಧ್ಯಾಪಕ ಪ್ರೊ.ಅಸ್ಸಾದಿ
Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
BBK11: ಕೋಪದಿಂದ ಅರ್ಧದಲ್ಲೇ ಬಿಗ್ ಬಾಸ್ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.