Puttur ಕೊಠಡಿಯಲ್ಲಿ ಕೂಡಿ ಹಾಕಿದ್ದ ವಿವಾಹಿತ ಮಹಿಳೆಯ ರಕ್ಷಣೆ
300 ಮೀ. ಹೊತ್ತೂಯ್ದು ಆಸ್ಪತ್ರೆಗೆ ದಾಖಲಿಸಿದರು
Team Udayavani, Jan 4, 2024, 7:00 AM IST
ಪುತ್ತೂರು: ಅನಾರೋಗ್ಯದ ನೆಪವೊಡ್ಡಿ ಮೂರು ತಿಂಗಳಿನಿಂದ ವಿವಾಹಿತ ಮಹಿಳೆಯನ್ನು ಕನಿಷ್ಠ ಸೌಲಭ್ಯವೂ ಇಲ್ಲದ ಕೊಠಡಿಯಲ್ಲಿ ಕೂಡಿ ಹಾಕಿದ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯು ಪೊಲೀಸರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಕೆಮ್ಮಿಂಜೆ ಗ್ರಾಮದ ಇಡಬೆಟ್ಟು ಸಮೀಪದ ಕರೆಜ್ಜದಲ್ಲಿ ನಡೆದಿದೆ.
ಶ್ರೀಪತಿ ಹೆಬ್ಬಾರ್ ಅವರ ಪತ್ನಿ ಆಶಾಲತಾ ದಿಗ್ಬಂಧನಕ್ಕೆ ಒಳಗಾಗಿದ್ದ ಮಹಿಳೆ. ಮನೆ ಪಕ್ಕದ ಸಿಮೆಂಟ್ ಶೀಟ್ ಅಳವಡಿಸಿದ ಕಿಟಕಿ, ವಿದ್ಯುತ್ ಬೆಳಕು ಇಲ್ಲದ ಒಂದೇ ಬಾಗಿಲಿನ ಕೋಣೆಯಲ್ಲಿ ದಿಗ್ಬಂಧನದಲ್ಲಿರಿಸಲಾಗಿತ್ತು. ಅನಾಮಧೇಯ ಕರೆಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಆಶಾಲತಾ ಮೂಲತಃ ವಿಟ್ಲ ಸಮೀಪದವರು. ಕೆಲವು ವರ್ಷಗಳ ಹಿಂದೆ ಶ್ರೀಪತಿ ಆಕೆಯನ್ನು ಮದುವೆಯಾಗಿದ್ದರು. ಅಂತರ್ಜಾತಿ ವಿವಾಹ ಇದಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆರಂಭದಲ್ಲಿ ಅನ್ಯೋನ್ಯವಾಗಿದ್ದರು ಎನ್ನಲಾಗಿದೆ. ಬಳಿಕ ಆಶಾ ಅವರ ಆರೋಗ್ಯ ಸರಿ ಇಲ್ಲ ಎಂಬ ಕಾರಣಕ್ಕಾಗಿ ಮನೆ ಸಮೀಪದ ಕೊಠಡಿಯೊಳಗೆ ಕೂಡಿ ಹಾಕಲಾಗಿತ್ತು ಎನ್ನುವ ಮಾಹಿತಿ ಲಭಿಸಿದೆ.
ಕನಿಷ್ಠ ಸೌಕರ್ಯವೂ
ಇಲ್ಲದ ಕೊಠಡಿ
ಗೋದಾಮು ಮಾದರಿಯ ಕೊಠಡಿಯೊಳಗೆ ದಿನ ಕಳೆಯುತ್ತಿದ್ದ ಆಶಾಲತಾಗೆ ಹೊರ ಜಗತ್ತಿನ ಸಂಪರ್ಕವೇ ಇರಲಿಲ್ಲ. ಬಾಗಿಲಿಗೆ ಬೀಗ ಜಡಿಯಲಾಗಿತ್ತು. ಮಲ-ಮೂತ್ರವೆಲ್ಲ ಕೊಠಡಿಯೊಳಗೇ ಆಗುತ್ತಿತ್ತು. ಚಾಪೆ ಕೂಡ ಇಲ್ಲದ ಕಾರಣ ನೆಲದಲ್ಲೇ ಮಲಗಬೇಕಿತ್ತು. ಕೊಠಡಿ ದುರ್ವಾಸನೆಯಿಂದ ಕೂಡಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮನೆಯವರು ದಿನಕ್ಕೆ ಒಂದು ಬಾರಿ ಬಿಸ್ಕೆಟ್, ಚಹಾ ಬಿಟ್ಟರೆ ಬೇರೇನೂ ಕೊಡುತ್ತಿರಲಿಲ್ಲ ಎನ್ನಲಾಗಿದೆ. ದೇಹ ಕ್ಷೀಣಿಸಿದ ಪರಿಣಾಮ ಬಿದ್ದುಕೊಂಡ ಸ್ಥಿತಿಯಲ್ಲಿದ್ದ ಆಶಾ ಅವರನ್ನು ಅಧಿಕಾರಿಗಳು ಕೊಠಡಿಯಿಂದ ಹೊರತಂದು ಸ್ನಾನ ಮಾಡಿಸಿ ಆಸ್ಪತ್ರೆಗೆ ದಾಖಲಿಸಿದರು.
ಸಂಪರ್ಕಕ್ಕೆ ಸಿಗದ ಪತಿ
ಶ್ರೀಪತಿ ಅವರ ಮನೆಗೆ ರಸ್ತೆ ಸಂಪರ್ಕ ಇಲ್ಲದ ಕಾರಣ ಆಶಾಲತಾ ಅವರನ್ನು 300 ಮೀ. ದೂರ ಹೊತ್ತುಕೊಂಡೇ ಸಾಗಿ ಬಳಿಕ ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರ್ಯಾಚರಣೆ ವೇಳೆ ಪತಿ ಮನೆಯಲ್ಲಿ ಇರಲಿಲ್ಲ. ಸಂಪರ್ಕಕ್ಕೂ ಸಿಕ್ಕಿಲ್ಲ. ಪತಿಯ ಸಹೋದರಿ ಮನೆಯಲ್ಲಿದ್ದರೂ ಆಕೆ ಹೊರ ಬರಲಿಲ್ಲ ಎನ್ನಲಾಗಿದೆ. ಆಶಾಲತಾಗೆ ಪ್ರೇತಬಾಧೆಯಿಂದ ಹಲವು ಬಾರಿ ಚಿಕಿತ್ಸೆ ನೀಡಿದ್ದರೂ ಗುಣಮುಖ ಆಗಿಲ್ಲ. ತವರು ಮನೆಯವರು ಕೂಡ ಸ್ಪಂದನೆ ನೀಡಿರಲಿಲ್ಲ. ಮಕ್ಕಳನ್ನು ನಾವೇ ಸಾಕುತ್ತಿದ್ದೇವೆ ಎಂದು ಮನೆಯಲ್ಲಿದ್ದ ಶ್ರೀಪತಿ ಅವರ ಸಹೋದರಿ ಅಧಿಕಾರಿಗಳ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಮಹಿಳೆ ದಿಗ್ಬಂಧನದಲ್ಲಿರುವ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪರಿಶೀಲನೆಗೆಂದು ತೆರಳಿದ್ದೆವು. ಆಕೆಯ ಪರಿಸ್ಥಿತಿ ಕಂಡು ರಕ್ಷಣೆ ಮಾಡಿ ಆಸ್ಪತ್ರೆಗೆ ಸೇರಿಸಿದ್ದೇವೆ. ಕೂಡಿ ಹಾಕಿದ್ದ ಕೊಠಡಿ ನಾಲ್ಕು ದಿಕ್ಕಿನಿಂದಲೂ ಬಂದ್ ಆಗಿತ್ತು. ಕನಿಷ್ಠ ಸೌಲಭ್ಯವೂ ಇರಲಿಲ್ಲ. ಬುಧವಾರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದೇವೆ. ಮನೆಯವರನ್ನು ಸಂಪರ್ಕಿಸುವ ಪ್ರಯತ್ನ ನಡೆಯುತ್ತಿದೆ. ಕೂಲಂಕಷ ತನಿಖೆ ನಡೆಸಲಾಗುತ್ತಿದೆ.
– ಮಂಗಳ ಕಾಳೀ,
ಎಸಿಡಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪುತ್ತೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು
Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ
24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್.ಕೆ. ಪಾಟೀಲ್
Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.