ವಿಟ್ಲ: ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ
Team Udayavani, Dec 25, 2020, 4:17 PM IST
ವಿಟ್ಲ: ಮಹಿಳೆಯೊಬ್ಬರೇ ಮನೆಯಲ್ಲಿದ್ದ ಸಮಯದಲ್ಲಿ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಕಟ್ಟಿ ಹಾಕಿ, ಹಲ್ಲೆ ನಡೆಸಿ ಚಿನ್ನಾಭರಣ ದರೋಡೆಗೈದ ಘಟನೆ ವಿಟ್ಲ ಸಮೀಪದ ಕಾಂತಡ್ಕದಲ್ಲಿ ಶುಕ್ರವಾರ ನಡೆದಿದೆ.
ಕಾಂತಡ್ಕ ಜುಮಾ ಮಸೀದಿ ಮುಂಭಾಗದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಆಟೋ ಚಾಲಕ ರಫೀಕ್ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದೆ.
ರಫೀಕ್ ಅವರು ಶುಕ್ರವಾರ ಮಧ್ಯಾಹ್ನ ಮಸೀದಿಗೆ ತೆರಳಿದ್ದರು. ಅವರ ಜತೆ ಅವರ 10 ವರ್ಷದ ಪುತ್ರ ಕೂಡಾ ತೆರಳಿದ್ದರು. ಪತ್ನಿ ಜೈನಾಬ ಅವರು ಒಬ್ಬರೇ ಇದ್ದರು. ಈ ಬಗ್ಗೆ ಮಾಹಿತಿ ಪಡೆದ ವ್ಯಕ್ತಿ ಮಹಿಳೆಯನ್ನು ಕಟ್ಟಿ ಹಾಕಿ, ಬಾಯಿಗೆ ಬಟ್ಟೆ ತುರುಕಿ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆಗೈದಿದ್ದಾರೆ.
ಇದನ್ನೂ ಓದಿ:ಪುತ್ತೂರು: ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಉದ್ಯಮಿ ಸಾವು!
ರಫೀಕ್ ಅವರ ಮನೆಯ ಸುತ್ತಲೂ ಮನೆಗಳಿದ್ದರೂ ಘಟನೆ ಯಾರ ಗಮನಕ್ಕೂ ಬಂದಿಲ್ಲ. ರಫೀಕ್ ಅವರು ಮಸೀದಿಯಿಂದ ವಾಪಸಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.