ಅಭಿವೃದ್ಧಿ ನಿರೀಕ್ಷೆಯಲ್ಲಿ ಪಂಜಿಕಲ್ಲು- ಮೂಡನಡುಗೋಡು-ಕಡಂಬಳಿಕೆ ರಸ್ತೆ


Team Udayavani, Aug 22, 2018, 12:51 PM IST

22-agust-9.jpg

ಬಂಟ್ವಾಳ: ಪಂಜಿಕಲ್ಲು ಗ್ರಾ.ಪಂ. ವ್ಯಾಪ್ತಿಯ ಮೂಡನಡುಗೋಡು ಸೇರುವ ಹನುಮಾನ್‌ ಕ್ರಾಸ್‌ ಕಡಂಬಳಿಕೆ ರಸ್ತೆ ಗ್ರಾಮೀಣ ಪ್ರದೇಶವನ್ನು ಸಂಪರ್ಕಿಸುವ ರಸ್ತೆ. ಮಣಿಹಳ್ಳ ಕ್ರಾಸ್‌ನಿಂದ ಸುಮಾರು 2 ಕಿ.ಮೀ. ದೂರದಲ್ಲಿರುವ ಈ ರಸ್ತೆ ಅಗಲ ಕಿರಿದಾದ ಕಾರಣ ರಿಕ್ಷಾ ಚಾಲಕರು ಸಂಚರಿಸಲು ಹಿಂದೇಟು ಹಾಕುವಂತಾಗಿದೆ.

ಚರಂಡಿ ವ್ಯವಸ್ಥೆಯೂ ಸಮರ್ಪಕವಾಗಿಲ್ಲವಾದ್ದರಿಂದ ಮಳೆ ನೀರು ರಸ್ತೆಯಲ್ಲಿಯೇ ಹರಿಯುತ್ತದೆ. ಈ ರಸ್ತೆಯ ಮೂಲಕ ಹೆಚ್ಚಿನ ಜನರು ತಮ್ಮ ನಿತ್ಯ ಕಾರ್ಯಗಳಿಗೆ ತೆರಳುತ್ತಾರೆ. ರಸ್ತೆಯು ತೀರಾ ಹದಗೆಟ್ಟಿರುವುದರಿಂದ ವಾಹನಗಳ ಸಂಚಾರ ತೀರಾ ಕಷ್ಟಕರವಾಗಿದೆ. ವಾಹನಗಳಿಗೆ ಸೈಡ್‌ ಕೊಡುವಾಗ ರಸ್ತೆಯಿಂದ ಕೆಳಗಿಳಿದ ವಾಹನಗಳು ಹೂತು ಹೋಗುವ ಸಂದರ್ಭಗಳು ಎದುರಾಗುತ್ತಿವೆ.

ಈ ರಸ್ತೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಹಲವು ಬಾರಿ ಜನಪ್ರತಿನಿಧಿಗಳಿಗೆ ಮನವಿ ನೀಡಲಾಗಿತ್ತು. ಆದರೆ ಸ್ಪಂದನೆ ದೊರಕಿಲ್ಲ. ಕೆಲವು ದಿನಗಳ  ಹಿಂದೆ ಇದೇ ರಸ್ತೆಯನ್ನು ಸ್ಥಳೀಯ ರಿಕ್ಷಾ ಮಾಲಕ-ಚಾಲಕರ ಸಂಘದವರು ಶ್ರಮದಾನದ ಮೂಲಕ ದುರಸ್ಥಿ ಮಾಡಿದ್ದರು. ಸರಕಾರದ ಮಟ್ಟದಿಂದ ಇದರ ಅಭಿವೃದ್ದಿ ಕೆಲಸ ನಡೆಯಬೇಕು ಎಂಬುದು ಸಾರ್ವಜನಿಕ ಆಶಯವಾಗಿದೆ.

ಶಾಸಕರಿಂದ ಭರವಸೆ
ಪಂಜಿಕಲ್ಲು ಗ್ರಾಮ ಸಂಪರ್ಕದ ಮೂಡನಡುಗೋಡು -ಹನುಮಾನ್‌ ಕ್ರಾಸ್‌ -ಕಡಂಬಳಿಕೆ ರಸ್ತೆಗೆ ಕಳೆದ ಅವಧಿಯಲ್ಲಿ ಯಾವುದೇ ಅನುದಾನವಿಲ್ಲದೆ ಅಭಿವೃದ್ದಿ ಕೆಲಸ ಸ್ಥಗಿತವಾಗಿತ್ತು. ಕಡಂಬಳಿಕೆ ಸಂಪರ್ಕ ರಸ್ತೆಯು ಪುರಸಭೆಯ ವ್ಯಾಪ್ತಿಗೆ ಬರುವುದರಿಂದ ಅಲ್ಲಿ ಅಭಿವೃದ್ಧಿ ಮಾಡಿ ಗ್ರಾ.ಪಂ. ರಸ್ತೆಯನ್ನು ಹಾಗೇ ಬಿಡಲಾಗಿತ್ತು. ಕಳೆದ ಅವಧಿಯಲ್ಲಿ ಸಚಿವರಲ್ಲಿ ಈ ಬಗ್ಗೆ ಕೇಳಲಾಗಿತ್ತು. ಆದರೆ ಎಂಜಿನಿಯರ್‌ಗೆ ಒಪ್ಪಿಗೆ ಸಿಗದೆ ಡಾಮರು ಹಾಕಿಲ್ಲ. ಪ್ರಸ್ತುತ ಶಾಸಕರಲ್ಲಿ ಮನವಿ ಮಾಡಿದೆ. ಬೇಸಗೆಯಲ್ಲಿ ರಸ್ತೆ ದುರಸ್ತಿಯ ಬಗ್ಗೆ ತಿಳಿಸಿದ್ದಾರೆ.
-ಪೂವಪ್ಪ ಮೆಂಡನ್‌
ಪಂಜಿಕಲ್ಲು ಗ್ರಾ.ಪಂ. ಸ್ಥಳೀಯ ಸದಸ್ಯರು

ಟಾಪ್ ನ್ಯೂಸ್

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.