ವಿಟ್ಲ: ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಸೇಫ್ ಗಾರ್ಡ್ ಕಂಬ… ಸಾಲುಗಟ್ಟಿ ನಿಂತ ವಾಹನಗಳು
Team Udayavani, Feb 20, 2024, 9:18 PM IST
ವಿಟ್ಲ: ರೈಲ್ವೇ ಸೇತುವೆಯ ಇಕ್ಕೆಲಗಳಲ್ಲಿ ಅಳವಡಿಸಿರುವ ಸೇಫ್ ಗಾರ್ಡ್ ಕಂಬ ಹೆದ್ದಾರಿಗೆ ಅಡ್ಡವಾಗಿ ಬಿದ್ದ ಘಟನೆ ಮಂಗಳವಾರ ರಾತ್ರಿ ಇಡ್ಕಿದು ಗ್ರಾಮದ ಮಿತ್ತೂರಿನಲ್ಲಿ ನಡೆದಿದೆ.
ಘನ ವಾಹನಗಳು ಸೇತುವೆಗೆ ಅಪ್ಪಳಿಸದಂತೆ ಮುಂಜಾಗರೂಕತೆಯಾಗಿ ಈ ಕಂಬವನ್ನು ಅಳವಡಿಸಲಾಗಿತ್ತು. ಈ ಸೇಫ್ ಗಾರ್ಡ್ ಗೆ ಘನ ವಾಹನವೊಂದು ಢಿಕ್ಕಿ ಹೊಡೆದಿದೆ. ಇದರಿಂದ ಕಂಬ ಹೆದ್ದಾರಿಗೆ ಅಡ್ಡವಾಗಿ ಬಿದ್ದಿದೆ ಎಂದು ತಿಳಿದುಬಂದಿದೆ. ಮಾಣಿ – ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಮಿತ್ತೂರು ರೈಲ್ವೇ ಸೇತುವೆಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತ ದೃಶ್ಯ ಕಂಡುಬಂದಿದೆ.
ಈ ಹಿಂದೆಯೂ ಹಲವು ಬಾರಿ ಈ ರೈಲ್ವೇ ಸೇಫ್ ಗಾರ್ಡ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು ಮತ್ತು ಕೆಲ ವರ್ಷಗಳ ಹಿಂದೆ ಇದೇ ರೀತಿ ಲಾರಿಯೊಂದು ಢಿಕ್ಕಿಯಾಗಿ ಭಾರಿ ಹಾನಿಯಾಗಿತ್ತು ಎನ್ನುವುದನ್ನು ಸ್ಥಳೀಯರು ಸ್ಮರಿಸಿಕೊಳ್ಳುತ್ತಾರೆ.
ಇದನ್ನೂ ಓದಿ: Bigg Boss ನಲ್ಲಿ ಗೆದ್ದ ಸ್ಕೂಟರನ್ನು ಬಡ ಹುಡುಗನಿಗೆ ಕೊಟ್ಟು ನುಡಿದಂತೆ ನಡೆದ ಪ್ರತಾಪ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.