![Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು](https://www.udayavani.com/wp-content/uploads/2024/12/vv-4-415x234.jpg)
ಸಂಗಬೆಟ್ಟು: ವೀರಭದ್ರ ಮಹಮ್ಮಾಯಿ ದೇವಸ್ಥಾನದಿಂದ ಕಳವು
Team Udayavani, Dec 26, 2019, 10:32 PM IST
![31](https://www.udayavani.com/wp-content/uploads/2019/12/31-620x465.jpg)
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಡಬ್ಬಿ ಕಳವುಗೈದಿದ್ದಾರೆ. ಡಿ. 26ರ ನಸುಕಿನ ಜಾವ 2.30ರ ಸುಮಾರಿಗೆ ಘಟನೆ ಸಂಭವಿಸಿದ್ದು, ಕಳ್ಳರ ಚಲನವಲನ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಕಳ್ಳರು ದೇವಸ್ಥಾನದ ಬೀಗ ಮುರಿದು ಒಳಹೊಕ್ಕು ಗರ್ಭಗುಡಿಗೆ ನುಗ್ಗಲು ಯತ್ನಿಸಿದ್ದಾರೆ. ಅದು ಸಾಧ್ಯವಾಗದೆ, ಬಳಿಕ ಹೊರಗಿದ್ದ ಕಾಣಿಕೆ ಡಬ್ಬಿಯನ್ನು ಒಡೆದು ಹಣವನ್ನು ಕೊಂಡೊಯ್ದಿದ್ದಾರೆ.
ಇದೇ ದೇಗುಲದ ಆವರಣದಲ್ಲಿರುವ ಶ್ರೀ ಮಹಮ್ಮಾಯಿ ದೇವಸ್ಥಾನದ ಹಂಚು ತೆಗೆದು ಒಳ ಬಂದಿದ್ದ ಕಳ್ಳರು ಅಲ್ಲಿಯೂ ಗರ್ಭಗುಡಿಗೆ ನುಗ್ಗಲು ಪ್ರಯತ್ನಿಸಿದ್ದರು. ಅದು ಸಾಧ್ಯವಾಗದಾಗ ಹೊರಗಿದ್ದ ದೊಡ್ಡ ಕಾಣಿಕೆ ಡಬ್ಬಿಯನ್ನು ಒಯ್ದಿದ್ದಾರೆ. ಈ ಡಬ್ಬಿಯನ್ನು ವಾಹನದ ಮೂಲಕವೇ ಸಾಗಿ ಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಬೆಳಗ್ಗೆ ಅರ್ಚಕರು ಬಂದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಅವರು ದೇವಸ್ಥಾನದ ಗುರಿಕಾರ ಚಂದ್ರಹಾಸ ಅವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಬಂಟ್ವಾಳ ಸಿಐ ಟಿ. ಡಿ.ನಾಗರಾಜ್, ಗ್ರಾಮಾಂತರ ಎಸ್.ಐ. ಪ್ರಸನ್ನ ಹಾಗೂ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
![Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು](https://www.udayavani.com/wp-content/uploads/2024/12/vv-4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು](https://www.udayavani.com/wp-content/uploads/2024/12/vv-4-150x84.jpg)
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
![Gold-saffron](https://www.udayavani.com/wp-content/uploads/2024/12/Gold-saffron-150x90.jpg)
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
![Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು](https://www.udayavani.com/wp-content/uploads/2024/12/ashok-h-150x100.jpg)
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
![United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ](https://www.udayavani.com/wp-content/uploads/2024/12/sri-sri-ravi-shankar-150x87.jpg)
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
![KSA-Nia-Arrest](https://www.udayavani.com/wp-content/uploads/2024/12/KSA-Nia-Arrest-150x90.jpg)
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.