ಸವಣೂರು: ಕೋವಿಡ್ ವಾರಿಯರ್ಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವಕನನ್ನು ಬಂಧಿಸಿದ ಪೊಲೀಸರು
Team Udayavani, Jun 29, 2021, 3:33 PM IST
ಸಾಂದರ್ಭಿಕ ಚಿತ್ರ
ಸವಣೂರು :ಸವಣೂರಿನಲ್ಲಿ ಕೋವಿಡ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಯುವಕನೋರ್ವನ ಮೇಲೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ಜೂ.29 ರಂದು ನಡೆದಿದೆ.
ಕಡಬ ತಾಲೂಕಿನ ಸವಣೂರು ಗ್ರಾಮದ ಪಣೆಮಜಲು ಎಂಬಲ್ಲಿ ಕೋವಿಡ್ – 19 ಕರ್ತವ್ಯದಲ್ಲಿದ್ದ ಆರೋಗ್ಯ ಇಲಾಖೆಯವರು ,ಪಂಚಾಯತ್ ಪಿಡಿಒ,ಆಶಾಕಾರ್ಯಕರ್ತೆರು,ಗ್ರಾಮ ಪಂಚಾಯತ್ ಸದಸ್ಯರಿಗೆ ಮೇಘರಾಜ ಎಂಬ ಯುವಕ ಬೈದು ,ಇಲ್ಲಿಯ ಜನರನ್ನು ಯಾಕೆ ಕ್ವಾರಂಟೈನ್ ಮಾಡುತ್ತೀರಿ. ನೀವು ಇಲ್ಲಿ ಬಂದು ರೋಗ ತಡೆಗಟ್ಟುವ ಅಗತ್ಯವಿಲ್ಲ ಎಂದು ಹೇಳಿರುವುದಾಗಿ ಆರೋಪಿಸಲಾಗಿದೆ.
ಇದನ್ನೂ ಓದಿ: ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು
ಈ ವಿಚಾರವಾಗಿ ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸವಣೂರು ಉಪಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ವಾಗೇಶ್ವರಿ ಅವರು ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.