Vitla: ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಪರಾರಿ
Team Udayavani, Aug 13, 2024, 9:00 PM IST
ವಿಟ್ಲ: ಅಂಗಡಿಯೊಂದಕ್ಕೆ ವಸ್ತು ಖರೀದಿಗೆ ಬಂದ ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ.
ಕೇಪು ಗ್ರಾಮದ ಅಂಗಡಿಯ ಮಾಲಕ ಅಶ್ರಫ್ (49) ಆರೋಪಿ.
ಈತ ನಾಲ್ಕು ಮಕ್ಕಳ ತಂದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದಾನೆ. ಜನರಲ್ ಸ್ಟೋರ್ಗೆ ವಸ್ತು ಖರೀದಿಗೆ ಬಾಲಕಿ ಆಗಮಿಸಿದ್ದು, ಈ ಸಂದರ್ಭ ಬಾಲಕಿಯ ಜತೆಗೆ ಆರೋಪಿ ಅಸಭ್ಯವಾಗಿ ವರ್ತಿಸಿದ್ದ. ಇದನ್ನು ಬಾಲಕಿಯು ಪೋಷಕರಲ್ಲಿ ಹೇಳಿಕೊಂಡಿದ್ದಾಳೆ. ವಿಟ್ಲ ಠಾಣೆಗೆ ಎರಡು ದಿನಗಳ ಹಿಂದೆ ಪೋಷಕರು ದೂರು ನೀಡಿದ್ದರು. ತನಿಖೆಗೆ ಮುಂದಾದ ಪೊಲೀಸರು ಅಂಗಡಿಯಲ್ಲಿರುವ ಸಿಸಿ ಕೆಮರಾವನ್ನು ಪರಿಶೀಲಿಸಿದ್ದು, ಬಾಲಕಿ ಹೇಳಿದ ರೀತಿಯಲ್ಲಿ ದೌರ್ಜನ್ಯ ಎಸಗಿರುವುದು ಸಿಸಿ ಕೆಮರಾ ದೃಶ್ಯಾವಳಿಯಲ್ಲಿ ಕಂಡುಬಂದಿತ್ತು. ಅದರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.