Shirady; ಉದನೆ: ಹೆದ್ದಾರಿಯಲ್ಲಿ ಕಾಡಾನೆ ಸಂಚಾರ !
Team Udayavani, Jan 11, 2024, 12:28 AM IST
ಉಪ್ಪಿನಂಗಡಿ: ನಿರಂತರ ವಾಹನಗಳು ಸಂಚರಿಸುವ ಹೆದ್ದಾರಿಯಲ್ಲಿ ಕಾಡಾನೆಯೊಂದು ಕಾಣಿಸಿಕೊಂಡು ವಾಹನ ಚಾಲಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ಸೋಮವಾರ ಸಾಯಂಕಾಲ ಶಿರಾಡಿ ಗ್ರಾಮದ ಉದನೆಯಲ್ಲಿ ಸಂಭವಿಸಿದೆ.
ಶಿರಾಡಿ ಪರಿಸರದಲ್ಲಿ ವಾಹನದ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಇನ್ನೂ ಮರೆಯಾಗುವ ಮೊದಲೇ ಉದನೆ ಪೇಟೆ ಸಮೀಪ ಗುಂಡ್ಯ ಹೊಳೆಬದಿಯಿಂದ ಬಂದ ಆನೆಯು ಯಾವುದೇ ತೊಂದರೆ ಮಾಡದೆ ರಾಷ್ಟ್ರೀಯ ಹೆದ್ದಾರಿ ದಾಟಿ ಅರಣ್ಯ ಪ್ರದೇಶಕ್ಕೆ ತೆರಳಿದ ಕಾರಣ ವಾಹನ ಸವಾರರು ನಿಟ್ಟುಸಿರು ಬಿಟ್ಟಿದ್ದಾರೆ.
ಕಳೆದ ಕೆಲವು ದಿನಗಳಿಂದ ಶಿರಾಡಿ ಗ್ರಾಮದ ವಿವಿಧ ಕಡೆಗಳಲ್ಲಿ ಕಾಡಾನೆಗಳು ಜನರಿಗೆ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು ತೋಟಗಳಿಗೆ ನುಗ್ಗಿ ಬಾಳೆ, ಅಡಿಕೆ, ತೆಂಗು ಸೇರಿದಂತೆ ಇತರೇ ಕೃಷಿ ಬೆಳೆಗಳನ್ನು ಹಾನಿಗೊಳಿಸುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ದೂರು ಸಲ್ಲಿಸಲಾಗಿದೆ.
ಚೇಲಾವರ: ಕಾಡಾನೆಗಳ ಉಪಟಳ
ಮಡಿಕೇರಿ: ನರಿಯಂದಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಚೇಲಾವರ ಗ್ರಾಮದಲ್ಲಿ ಕಾಡಾನೆಗಳ ಉಪಟಳದಿಂದ ಗ್ರಾಮಸ್ಥರು ಪರದಾಡುವಂತಾಗಿದೆ.
ಪ್ರತೀ ದಿನ ಕಾಫಿಯ ತೋಟಗಳಿಗೆ ಲಗ್ಗೆ ಇಡುತ್ತಿರುವ ಆನೆಗಳು ಕಾಫಿ ಗಿಡದ ರೆಂಬೆಗಳನ್ನು ಮುರಿದು ನಷ್ಟಪಡಿಸುತ್ತಿರುವುದಲ್ಲದೇ ತೆಂಗು, ಅಡಿಕೆ, ಬಾಳೆ ಮತ್ತಿತರ ಫಸಲನ್ನು ನಾಶಪಡಿಸುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಕಾಫಿ ಬೆಳೆಗಾರರಾದ ಮನೆಯಪಂಡ ಧೀರಜ್ ತಿಮ್ಮಯ್ಯ, ಕುಟ್ಟನ ಶಶಿ ಹಾಗೂ ಕುಟ್ಟನ ಪೂವಯ್ಯ ಅವರ ತೋಟಗಳಿಗೆ ನುಗ್ಗಿದ ಕಾಡಾನೆಗಳು ಅಪಾರ ಪ್ರಮಾಣದ ನಷ್ಟವನ್ನು ಉಂಟು ಮಾಡಿವೆ.
ಜನಸಾಮಾನ್ಯರು, ವಿದ್ಯಾರ್ಥಿಗಳು ಸಂಚರಿಸಲು ಭಯಪಡುತ್ತಿದ್ದಾರೆ. ಕಾಡಾನೆಗಳ ಹಾವಳಿ ನಿಯಂತ್ರಿಸಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.