ಎಸೆಸೆಲ್ಸಿ: 4 ತಾಲೂಕುಗಳಲ್ಲಿ 15,891 ವಿದ್ಯಾರ್ಥಿಗಳು
Team Udayavani, Jun 6, 2020, 8:16 AM IST
ಸಾಂದರ್ಭಿಕ ಚಿತ್ರ
ಪುತ್ತೂರು/ಸುಳ್ಯ: ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ತಾಲೂಕುಗಳಲ್ಲಿ ಈ ಬಾರಿ ಒಟ್ಟು 15,891 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 51 ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಪುತ್ತೂರು ತಾಲೂಕಿನಲ್ಲಿ 5,007 ಮಂದಿ ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯಲಿದ್ದು, 13 ಪರೀಕ್ಷಾ ಕೇಂದ್ರ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಆರೋಗ್ಯ ಪರೀಕ್ಷೆ, ಸ್ಯಾನಿಟೈಸರ್ ವ್ಯವಸ್ಥೆ ಒದಗಿಸಲಾ ಗುವುದು. ವಿಶ್ರಾಂತಿ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿ ಕಾರಿ ಲೊಕೇಶ್ ಸಿ. ತಿಳಿಸಿದ್ದಾರೆ.
ಹೊರ ಜಿಲ್ಲೆಯ 37 ವಿದ್ಯಾರ್ಥಿಗಳು
ತಾಲೂಕಿನಲ್ಲಿ 4,970 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದು, ರಾಜ್ಯ ಸರಕಾರದ ಸೂಚನೆಯಂತೆ ತಾಲೂಕಿನಲ್ಲಿರುವ ಇತರ ತಾಲೂಕು-ಜಿಲ್ಲೆಗಳ ವಿದ್ಯಾಸಂಸ್ಥೆಯ 37 ವಿದ್ಯಾರ್ಥಿಗಳು ಪುತ್ತೂರು ತಾಲೂಕಿನಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಹಾಗೆಯೇ ತಾಲೂಕಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ 181 ವಿದ್ಯಾರ್ಥಿಗಳು ಪ್ರಸ್ತುತ ಬೇರೆ ಜಿಲ್ಲೆಗಳಲ್ಲಿದ್ದು, ಅವರು ಇರುವ ಸ್ಥಳದಲ್ಲಿಯೇ ಪರೀಕ್ಷೆ ಬರೆಯಲಿದ್ದಾರೆ.
320 ನಿಯೋಜನೆ
ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಿಸಿ 320 ಶಿಕ್ಷಕರು ಕಾರ್ಯ ನಿರ್ವಹಿಸಲಿದ್ದಾರೆ. 268 ಮಂದಿ ಶಿಕ್ಷಕರು ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿ ಕೆಲಸ ಮಾಡಲಿದ್ದಾರೆ. 13 ಮಂದಿ ಅಧೀಕ್ಷಕರಾಗಿ, 13 ಮಂದಿ ಉಪ ಅಧೀಕ್ಷಕರಾಗಿ, 13 ಮಂದಿ ಮೊಬೈಲ್ ಸ್ವಾಧೀನ ಅಧಿಕಾರಿಗಳಾಗಿ, 13 ಮಂದಿ ಜಾಗೃತ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಇವರೊಂದಿಗೆ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆಯ ಸಿಬಂದಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಕೇರಳದ 70 ಮಂದಿ ವಿದ್ಯಾರ್ಥಿಗಳು
ಕರ್ನಾಟಕ- ಕೇರಳ ರಾಜ್ಯದ ಗಡಿ ಭಾಗದ ಪುತ್ತೂರು ತಾಲೂಕಿನ 11 ಪ್ರೌಢಶಾಲೆಗಳಲ್ಲಿ ಕಲಿಯುತ್ತಿರುವ 70 ವಿದ್ಯಾರ್ಥಿಗಳು ಕೇರಳದ ನಿವಾಸಿಗಳಾಗಿದ್ದಾರೆ. ಪ್ರಸ್ತುತ ಕರ್ನಾಟಕ-ಕೇರಳ ರಾಜ್ಯದ ಗಡಿ ಬಂದ್ ಆಗಿದೆ. ಹಾಗಾಗಿ ಇವರಿಗೆ ಪರೀಕ್ಷೆ ಬರೆಯಲು ಕೇರಳ ಸರಕಾರದ ಅನುಮತಿ ಬೇಕಾಗಿದೆ. ಈ ಬಗ್ಗೆ ಸ್ಪಷ್ಟ ಮಾಹಿತಿಗಳು ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.
ಸುಳ್ಯ: ಪೂರಕ ತಯಾರಿ ಪೂರ್ಣ
ಸುಳ್ಯ ತಾಲೂಕಿನಲ್ಲಿ 1,967 ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯಲಿದ್ದು, 6 ಪರೀಕ್ಷಾ ಕೇಂದ್ರಗಳನ್ನು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಚಟುವಟಿಕೆಗೆ ಪೂರಕ ತಯಾರಿ ನಡೆದಿದೆ. ತಾಲೂಕಿನ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹೊರ ಜಿಲ್ಲೆಯ 103 ವಿದ್ಯಾರ್ಥಿಗಳು ಆಯಾ ಜಿಲ್ಲಾ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ತಿಳಿಸಿದ್ದಾರೆ.
ಕೇರಳದ 17 ಮಂದಿ
ಕೇರಳ ವ್ಯಾಪ್ತಿಗೆ ಸೇರಿದ ಪ್ರದೇಶಗಳಿಂದ ತಾಲೂಕಿನ ವಿವಿಧ ಪ್ರೌಢಶಾಲೆಗಳಲ್ಲಿ 17 ಮಂದಿ ವ್ಯಾಸಂಗ ಮಾಡುತ್ತಿದ್ದು, ಅವರ ಸಂಚಾರಕ್ಕೆ ಪೂರಕವಾಗಿ ಗಡಿಭಾಗದಿಂದ ಪರೀಕ್ಷಾ ಕೇಂದ್ರದ ತನಕ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಪ್ರತಿ ಕೇಂದ್ರಕ್ಕೆ 15 ಮಂದಿ ನಿಯೋಜನೆ
ಪ್ರತಿ ಪರೀಕ್ಷಾ ಕೇಂದ್ರಕ್ಕೆ 15 ಮಂದಿ ಶಿಕ್ಷಕರನ್ನು ನಿಯೋಜಿಸಲಾಗುತ್ತದೆ. ಒಟ್ಟು 90 ಮಂದಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.
ಬೆಳ್ತಂಗಡಿ: ಎಸೆಸೆಲ್ಸಿ 15 ಕೇಂದ್ರ
ಬೆಳ್ತಂಗಡಿ: ತಾಲೂಕಿನಲ್ಲಿ 13 ಕೇಂದ್ರಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ನಡೆಯಲಿದ್ದು, ಪ್ರಸಕ್ತ ಮುಂಜಾಗೃತ ಕ್ರಮವಾಗಿ ತಾಲೂಕಿನಲ್ಲಿ 2 ಪ್ರತ್ಯೇಕ ಕೇಂದ್ರ ಗುರುತಿಸಿದಂತೆ ಒಟ್ಟು 15 ಕೇಂದ್ರಗಳನ್ನು ಮೀಸಲಿರಿಸಲಾಗಿದೆ. 3,717 ವಿದ್ಯಾರ್ಥಿಗಳು ಪರೀಕ್ಷೆ ಬರೆಯವರು. ಒಂದು ಕೊಠಡಿಯಲ್ಲಿ 20 ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಈ ವರೆಗೆ 220 ಶಿಕ್ಷಕರನ್ನು ನಿಯೋಜಿಸಲಾಗಿದೆ. ಹೊರರಾಜ್ಯದಿಂದ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಲ್ಲ. ಹೊರ ಜಿಲ್ಲೆಯ ಸುಮಾರು 110 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಇನ್ನೆರಡು ದಿನಗಳಲ್ಲಿ ಸಂಪೂರ್ಣ ಮಾಹಿತಿ ಲಭಿಸಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ತಿಳಿಸಿದ್ದಾರೆ.
ಬಂಟ್ವಾಳ: 17 ಕೇಂದ್ರ
ಬಂಟ್ವಾಳ: ತಾಲೂಕಿನಲ್ಲಿ ಒಟ್ಟು 5,200 ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಒಂದು ಕೊಠಡಿಯಲ್ಲಿ 18ರಿಂದ 20 ವಿದ್ಯಾರ್ಥಿಗಳಂತೆ ಪರೀಕ್ಷೆ ಬರೆಯಲಿದ್ದು, 17 ಕೇಂದ್ರಗಳನ್ನು ನಿಯೋಜಿಸಲಾಗಿದೆ. ಒಟ್ಟು 250ಕ್ಕಿಂತ ಅಧಿಕ ಶಿಕ್ಷಕರನ್ನು ನಿಯೋಜಿಸಲಾಗಿದೆ. ಹೊರ ರಾಜ್ಯದ 114 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಹೊರ ಜಿಲ್ಲೆಯ ವಿದ್ಯಾರ್ಥಿಗಳ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.