ಕೊಪ್ಪರಿಗೆ ಏರುವುದರೊಂದಿಗೆ ಚಂಪಾಷಷ್ಠಿ ಆರಂಭ
Team Udayavani, Dec 5, 2018, 1:29 PM IST
ಸುಬ್ರಹ್ಮಣ್ಯ: ಕಾರ್ತಿಕ ಬಹುಳ ದ್ವಾದಶಿ ಬುಧವಾರ ಪೂರ್ವಶಿಷ್ಠ ಸಂಪ್ರದಾಯದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೊಪ್ಪರಿಗೆ ಏರುವ ಕಾರ್ಯ ನಡೆಯಿತು. ಪೂರ್ವಾಹ್ನದ ಬೆಳಗ್ಗೆ 7.10ರ ಉದಯ ಲಗ್ನದಲ್ಲಿ ದೇಗುಲದ ಪ್ರಧಾನ ಅರ್ಚಕ ವೇ|ಮೂ| ಸೀತಾರಾಮ ಎಡಪಡಿತ್ತಾಯರು ವೈದಿಕ ವಿಧಿ- ವಿಧಾನಗಳನ್ನು ನೆರವೇರಿಸಿದರು.
ರಾಮ – ಲಕ್ಷ್ಮಣ ಹೆಸರಿನ ಜೋಡಿ ಅನ್ನದ ಕೊಪ್ಪರಿಕೆಗೆ ವಿಶೇಷ ಪೂಜೆ ಸಲ್ಲಿಸಿ, ದೇಗುಲದ ಒಳಾಂಗಣದಲ್ಲಿ ದೊಡ್ಡದಾದ ಎರಡು ಒಲೆಗಳ ಮೇಲೆ ಏರಿಸಲಾಯಿತು. ಕೊಪ್ಪರಿಗೆಗಳಲ್ಲಿ ಅನ್ನ ಬೆಂದ ಬಳಿಕ ಅದಕ್ಕೆ ಪೂಜೆ ಸಲ್ಲಿಸಲಾಯಿತು. ಅನ್ನದಾನ ಕ್ಷೇತ್ರವೆಂದು ಪ್ರಸಿದ್ಧವಾಗಿರುವ ಶ್ರೀ ಕ್ಷೇತ್ರದಲ್ಲಿ ಜಾತ್ರೆಯ ಸಂದರ್ಭದಲ್ಲಿ ವಿಶೇಷ ಅನ್ನದಾನ ನಿರಂತರವಾಗಿ ನಡೆಯುವುದು.
ಇಂದಿನಿಂದ ವಿಶೇಷ ಕೊಪ್ಪರಿಗೆ ಅನ್ನದ ಪ್ರಸಾದ ಭೋಜನ ಭಕ್ತರಿಗೆ ವಿತರಣೆಯಾಗಲಿದೆ. ಇದು ಶ್ರೀ ದೇವರ ಅತ್ಯಮೂಲ್ಯ ಪ್ರಸಾದಗಳಲ್ಲಿ ಒಂದು. ಕೊಪ್ಪರಿಗೆ ಏರುವುದರೊಂದಿಗೆ ಸಂಭ್ರಮದ ವಾರ್ಷಿಕ ಜಾತ್ರೆ ಕೂಡ ಆರಂಭಗೊಂಡಿದೆ.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್., ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸದಸ್ಯರಾದ ಬಾಲಕೃಷ್ಣ ಬಳ್ಳೇರಿ, ಕೃಷ್ಣಮೂರ್ತಿ ಭಟ್, ದಮಯಂತಿ ಕೀಜುಗೋಡು, ದೇವಸ್ಥಾನದ ಸಿಬಂದಿ ಹಾಗೂ ಭಕ್ತರು ಉಪಸ್ಥಿತರಿದ್ದರು.
ಹೊರೆಕಾಣಿಕೆ ಸಮರ್ಪಣೆ
ಚಂಪಾಷಷ್ಠಿ ಪ್ರಯುಕ್ತ ದೇಗುಲದ ಆಡಳಿತ ಮಂಡಳಿಯ ವಿಶೇಷ ಆಸಕ್ತಿಯಿಂದ ನಡೆದ ಹಸುರು ಕಾಣಿಕೆ ಸಮರ್ಪಣೆ ಕಾರ್ಯಕ್ರಮದಲ್ಲಿ ಹಲವು ಮಂದಿ ಭಕ್ತರು ಹೊರೆ ಕಾಣಿಕೆ ತಂದು ಅರ್ಪಿಸಿದರು. ಭಕ್ತರು ಸೀಯಾಳ, ಬಾಳೆಗೊನೆ, ಅಕ್ಕಿ, ಅಡಿಕೆ ಗೊನೆ, ತರಕಾರಿ ಇತ್ಯಾದಿ ಹೊರೆ ಕಾಣಿಕೆಗಳನ್ನು ದೇವಸ್ಥಾನಕ್ಕೆ ತಂದು ಒಪ್ಪಿಸಿದರು. ಡಿ. 6ರ ತನಕ ಅರ್ಪಿಸಲು ಅವಕಾಶವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.