ಧರ್ಮಸ್ಥಳದಲ್ಲಿ ರಾಜ್ಯಮಟ್ಟದ 19ನೇ ವರ್ಷದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ ಸಮಾರಂಭ
ಸಿನಿಮಾ ನಟ ಮಾ.ಆನಂದ್, ವನ್ಷಿಕಾ ಅಂಜನೀ ಕಶ್ಯಪ್ ಭಾಗಿ
Team Udayavani, Jul 4, 2022, 12:25 PM IST
ಬೆಳ್ತಂಗಡಿ: ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಆಶ್ರಯದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ 19ನೇ ವರ್ಷದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಇಂದು ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆಯಲ್ಲಿ ಪುರಸ್ಕಾರ ಸಮಾರಂಭ ನೆರವೇರಿತು.
ಚಲನಚಿತ್ರ ನಟ ಮಾಸ್ಟರ್ ಆನಂದ್ ವಿಜೇತರಿಗೆ ಪುರಸ್ಕಾರವನ್ನು ನೀಡಿದರು. ಇದೇ ಸಂದರ್ಭದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಜ್ಞಾನವಿಕಾಸ ಮತ್ತು ಜ್ಞಾನಪ್ರಕಾಶ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನು ಖ್ಯಾತ ಸಾಹಿತಿ ಎಸ್.ಎನ್. ಸೇತುರಾಮ್ ಬಿಡುಗಡೆಗೊಳಿಸಿ ಶುಭಹಾರೈಸಿದರು.
ಹೇಮಾವತಿ ವೀ. ಹೆಗ್ಗಡೆಯವರು ಮತ್ತು ಡಿ. ಹರ್ಷೇಂದ್ರ ಕುಮಾರ್, ಶಿಕ್ಷಣ ಇಲಾಖೆಯ ಸಹನಿರ್ದೇಶಕ ಎಸ್.ಜಿ. ನಾಗೇಶ್, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಾಡಿತ್ತಾಯ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ನಿರ್ದೇಶಕ ಡಾ.ಐ.ಶಶಿಕಾಂತ್ ಜೈನ್ ಉಪಸ್ಥಿತರಿದ್ದರು.
ನನ್ನಮ್ಮ ಸೂಪರ್ ಸ್ಟಾರ್ ಖ್ಯಾತಿಯ, ಮಾ.ಆನಂದ್ ಅವರ ಪುತ್ರಿ ವನ್ಷಿಕಾ ಅಂಜನೀ ಕಶ್ಯಪ್‌ರೊಂದಿಗೆ ಮಕ್ಕಳ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕುಂಚ–ಗಾನ–ನೃತ್ಯ ವೈಭವ: ಉಡುಪಿಯ ಖ್ಯಾತ ಗಾಯಕಿ ಸಂಗೀತ ಬಾಲಚಂದ್ರ ಗಾಯನಕ್ಕೆ ಬಂಟ್ವಾಳದ ಮುರಳೀಧರ ಆಚಾರ್ ಕುಂಚದಲ್ಲಿ ಕಲಾ ರಚನೆ ಮಾಡಿದ್ದು, ಪುತ್ತೂರಿನ ನಾಟ್ಯರಂಗದ ವಿದುಷಿ ಮಂಜುಳಾ ಸುಬ್ರಹ್ಮಣ್ಯ ಮತ್ತು ಬಳಗದವರು ನೃತ್ಯ ಪ್ರದರ್ಶನ ನೀಡಿದರು.
ಕಾರ್ಕಳ ಶ್ರೀ ಭುವನೇಂದ್ರ ಪ್ರೌಢ ಶಾಲೆಯ ಗಣೇಶ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.