ಶ್ವಾನಗಳಿಗೆ ಸಂತಾನಶಕ್ತಿಹರಣ ಶಸ್ತ್ರ ಚಿಕಿತ್ಸೆ
Team Udayavani, Mar 29, 2018, 5:29 PM IST
ಬೆಳ್ತಂಗಡಿ: ಬೆಳ್ತಂಗಡಿ ಪಶು ಸಂಗೋಪನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಧರ್ಮಸ್ಥಳ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಬೀದಿನಾಯಿಗಳ ಮತ್ತು ಸಾಕು ನಾಯಿಗಳ ಉಚಿತ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸಾ ಶಿಬಿರ ಧರ್ಮಸ್ಥಳ ಗ್ರಾ.ಪಂ. ಆವರಣದಲ್ಲಿ ನಡೆಯಿತು.
ಮೈಸೂರು ಪಶುಸಂಗೋಪನ ಇಲಾಖೆ ಜಂಟಿ ನಿರ್ದೇಶಕ ಡಾ| ದೇವದಾಸ್ ಉದ್ಘಾಟಿಸಿದರು. 60ಕ್ಕೂ ಹೆಚ್ಚು ಬೀದಿನಾಯಿಗಳು, 40ಕ್ಕೂ ಹೆಚ್ಚು ಸಾಕು ನಾಯಿಗಳಿಗೆ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಬೀದಿನಾಯಿಗಳಿಗೆ ಒಂದು ವಾರಗಳ ಆರೈಕೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಿ ಹ್ಯಾಂಡ್ ಟು ಸರ್ವ್ ಟ್ರಸ್ಟ್, ಧರ್ಮಸ್ಥಳ ಕೃಷಿ ಪತ್ತಿನ ಸಹಕಾರ ಸಂಘ, ಮೋನಿಶ್ ಕುಮಾರ್, ತೃಪ್ತಿ ಹೊಟೇಲ್, ಗುರುವಾಯನಕೆರೆ ನಾಗರಿಕ ಸೇವಾ ಸಮಿತಿ, ಸೇವಾ ಭಾರತಿ ಕನ್ಯಾಡಿ- 2, ಧರ್ಮಶ್ರೀ ಮೆಡಿಕಲ್ಸ್, ಬೆಳ್ತಂಗಡಿ ಯುವ ಜೈನ್ ಮಿಲನ್, ಬೆಂಗಳೂರು ಡೇರಿ ಡೇ ಮೊದಲಾದ ಸಂಘ-ಸಂಸ್ಥೆಗಳು ಸಹಕರಿಸಿದ್ದವು. ತಾ| ಸಹಾಯಕ ನಿರ್ದೇಶಕ ಡಾ| ರತ್ನಾಕರ ಮಲ್ಯ, ಧಮಸ್ಥಳ ಪಶುವೈದ್ಯ ಆಸ್ಪತ್ರೆ ಜಾನುವಾರು ಅಧಿಕಾರಿ ಕೆ. ಜಯಕೀರ್ತಿ ಜೈನ್, ತಜ್ಞವೈದ್ಯರಾದ ಡಾ| ಟಿ.ಎಚ್. ಶಂಕರಪ್ಪ, ಡಾ| ವೇಣುಗೋಪಾಲ ವೇಣೂರು, ಡಾ| ಯತೀಶ್ ಕುಮಾರ್ ನೆರಿಯ, ಡಾ| ವಿನಯ ಮಡಂತ್ಯಾರು, ಡಾ| ಯಶವಂತ ಮೈಸೂರು, ಡಾ| ಅಶೋಕ್ ಕುಮಾರ್ ಮಂಗಳೂರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.