ಸಂಗಮ ಸ್ಥಳ: ನದಿ ನೀರಿನ ಕಸ ಸ್ವಚ್ಛಗೊಳಿಸಿದ ವಿದ್ಯಾರ್ಥಿಗಳು
Team Udayavani, Apr 18, 2019, 5:55 AM IST
ಉಪ್ಪಿನಂಗಡಿ: ಸಂಗಮ ಕ್ಷೇತ್ರದಲ್ಲಿ ಭಕ್ತರ ಹಳೆಯ ವಸ್ತ್ರಗಳು ಹಾಗೂ ಪ್ಲಾಸ್ಟಿಕ್ ತಾಜ್ಯಗಳು ತುಂಬಿದ್ದ ನೇತ್ರಾವತಿ ನದಿಯನ್ನು ಇಂದ್ರಪ್ರಸ್ಥ ವಿದ್ಯಾಲಯದ ನಾಲ್ವರು ಸ್ಕೌಟ್ ವಿದ್ಯಾರ್ಥಿಗಳು ರವಿವಾರ ಸಂಜೆ ಸ್ವಯಂಪ್ರೇರಿತರಾಗಿ ಸ್ವಚ್ಛಗೊಳಿಸಿದರು.
ಗತಿಸಿದ ಬಂಧುಗಳ ಅಸ್ಥಿಗಳನ್ನು ನದಿಯಲ್ಲಿ ವಿಸರ್ಜಿಸುವ ಭಕ್ತರು, ಬಳಿಕ ತೀರ್ಥಸ್ನಾನ ಮಾಡಿ, ತಾವು ಉಟ್ಟಿರುವ ಬಟ್ಟೆಗಳನ್ನು ಅಲ್ಲೇ ಎಸೆದು ಸಂಗಮ ಸ್ಥಳದಲ್ಲಿ ತ್ಯಾಜ್ಯ ರಾಶಿ ಬೀಳುವಂತೆ ಮಾಡಿದ್ದಾರೆ. ಅಸ್ಥಿಗಳನ್ನು ತಂದ ಪ್ಲಾಸ್ಟಿಕ್ ಕರಡಿಗೆ, ಉಟ್ಟಿರುವ ಹಳೆಯ ವಸ್ತ್ರ ಇತ್ಯಾದಿಗಳನ್ನು ಅಲ್ಲೇ ಬಿಸುಡುತ್ತಿರುವ ಕಾರಣ ಬೇಸಗೆಯಲ್ಲಿ ನದಿಯಲ್ಲಿ ನೀರಿನ ಹರಿವೂ ಇಲ್ಲದೆ ತ್ಯಾಜ್ಯಗಳ ರಾಶಿಯೇ ಕಾಣುತ್ತಿತ್ತು. ಪರಿಸರದ ಅಸ್ವತ್ಛತೆ ಹಾಗೂ ದುರ್ನಾತಕ್ಕೂ ಕಾರಣವಾಗಿತ್ತು.
ಈ ಕುರಿತು ಪತ್ರಿಕೆಗಳಲ್ಲಿ ಬಂದ ವರದಿಗಳನ್ನು ಗಮನಿಸಿದ ಇಂದ್ರಪ್ರಸ್ಥ ವಿದ್ಯಾಲಯದ ಸ್ಕೌಟ್ ವಿದ್ಯಾರ್ಥಿಗಳು, ತಮ್ಮ ಪುಟ್ಟ ಕೈಗಳಿಂದಲೇ ನದಿಯನ್ನು ಸ್ವತ್ಛಗೊಳಿಸಿದರು. ಅವರು ಸಂಗ್ರಹಿಸಿದ ತ್ಯಾಜ್ಯಗಳ ರಾಶಿ ಸಾಕಷ್ಟು ದೊಡ್ಡದಾಗಿತ್ತು.
ಪಾವಿತ್ರ್ಯ ಕಾಪಾಡಿ ವಿದ್ಯಾರ್ಥಿಗಳ ಮನವಿ
ಭಕ್ತರು ಕ್ಷೇತ್ರದ ಪಾವಿತ್ರ್ಯ ಕಾಪಾಡಬೇಕು. ನದಿಯಲ್ಲಿ ಬಟ್ಟೆ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಸೆದು ಹಾಳು ಮಾಡಬಾರದು ಎಂದು ಸ್ಕೌಟ್ ವಿದ್ಯಾರ್ಥಿ ಅನಿಕೇತ್ ಕುಮಾರ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.