ಮಾಡಾವು ಸಬ್ ಸ್ಟೇಷನ್ : 110 ಕೆ.ವಿ. ವಿದ್ಯುತ್ ಕೇಂದ್ರ ಲೋಕಾರ್ಪಣೆ
Team Udayavani, May 21, 2020, 5:07 AM IST
ಕೆಯ್ಯೂರು: ಬಹು ನಿರೀಕ್ಷಿತ ಮಾಡಾವು 110 ಕೆ.ವಿ. ವಿದ್ಯುತ್ ಉಪಕೇಂದ್ರವು ಲೋಕಾರ್ಪಣೆ ಗೊಂಡಿದೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸ್ಥಾಯೀ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಕೆಯ್ಯೂರು ಗ್ರಾ.ಪಂ. ಅಧ್ಯಕ್ಷ ಬಾಬು ಬಿ. ಹಾಗೂ ಸದಸ್ಯರು ಹಾಗೂ ಕೆಪಿಟಿಸಿಎಲ್, ಮೆಸ್ಕಾಂ ಅಧಿಕಾರಿಗಳು, ಸಿಬಂದಿ ಉಪಸ್ಥಿತರಿದ್ದರು.
ವಿದ್ಯುತ್ ಬಳಕೆದಾರರ ವೇದಿಕೆಯ ಅಧ್ಯಕ್ಷ ಜಯಪ್ರಸಾದ್ ಜೋಶಿ ಸ್ವಾಗತಿಸಿ,ವಂದಿಸಿದರು.
ಪುತ್ತೂರು, ಸುಳ್ಯ, ಕಡಬ ತಾಲೂಕು ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪ್ರಸರಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಈ ಉಪ ಕೇಂದ್ರ ಸಹಕಾರಿಯಾಗಲಿದೆ. ಹಲವು ಅಡ್ಡಿ ಅಂತಕಗಳನ್ನು ಎದುರಿಸಿದ್ದ ಈ ಯೋಜನೆಯೂ ಪೂರ್ಣಗೊಂಡಿದೆ.ಕೆಲವು ದಿನಗಳ ಹಿಂದೆ ಸುಳ್ಯ ಶಾಸಕ ಎಸ್. ಅಂಗಾರ ಪ್ರಾಯೋಗಿಕ ಚಾಲನೆ ನೀಡಿದ್ದರು.
ಒಟ್ಟು ವೆಚ್ಚ
ಮಾಡಾವು 110 ಕೆ.ವಿ. ವಿದ್ಯುತ್ಉಪಕೇಂದ್ರದ ನಿರ್ಮಾಣಕ್ಕೆ ರೂ. 15 ಕೋಟಿ ವೆಚ್ಚವಾಗಿದ್ದು, ಲೈನ್ ಕಾಮಗಾರಿ ಗಳಿಗಾಗಿ ರೂ. 18 ಕೋಟಿ ವೆಚ್ಚವಾಗಿದೆ. ಒಟ್ಟು ರೂ. 23 ಕೋಟಿ ವೆಚ್ಚದ ಈ ಉಪಕೇಂದ್ರವನ್ನು ಕೆಪಿಟಿಸಿಎಲ್ ವತಿಯಿಂದ ನಿರ್ಮಾಣಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.