Subhramanya: ಹೆದ್ದಾರಿಗಳು ಜಲಾವೃತ, ಸ್ನಾನಘಟ್ಟ ಮುಳುಗಡೆ
ಕೈಕಂಬದ ಕೋಟೆಸಾರ್ ಹೊಳೆಗೆ ಅಡ್ಡಲಾಗಿರುವ ಸೇತುವೆ ಮುಳುಗಿ ಸಂಚಾರ ಕಡಿತ
Team Udayavani, Jul 31, 2024, 1:10 AM IST
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಪರಿಸರ ಸೇರಿದಂತೆ ಪಶ್ಚಿಮ ಘಟ್ಟ ಮತ್ತು ಘಟ್ಟ ಪ್ರದೇಶದಲ್ಲಿ ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ಸ್ನಾನಘಟ್ಟ ಮುಳುಗಡೆಯಾಗಿದ್ದು, ಕುಕ್ಕೆ ಸಂಪರ್ಕದ ಮೂರು ಕಡೆಗಳಲ್ಲಿ ಹೆದ್ದಾರಿಗೆ ನೀರು ನುಗ್ಗಿ ಸಂಚಾರ ಕಡಿತಗೊಂಡ ಘಟನೆ ಸಂಭವಿಸಿದೆ.
ಕುಮಾರಧಾರದ ಸುಬ್ರಹ್ಮಣ್ಯ -ಪುತ್ತೂರು ಸಂಪರ್ಕ ರಸ್ತೆ ಮತ್ತು ಸೇತುವೆ ಸುಬ್ರಹ್ಮಣ್ಯದಲ್ಲಿ ನದಿ ನೀರು ನುಗ್ಗಿ ಹೆದ್ದಾರಿ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಸುಬ್ರಹ್ಮಣ್ಯ- ನೆಟ್ಟಣ-ಉಪ್ಪಿನಂಗಡಿ- ಮಂಗಳೂರು ಹೆದ್ದಾರಿಯ ಬಿಳಿನೆಲೆ ಗ್ರಾಮದ ಕೈಕಂಬದ ಕೋಟೆಸಾರ್ ಹೊಳೆಗೆ ಅಡ್ಡಲಾಗಿರುವ ಸೇತುವೆ ಮುಳುಗಡೆಗೊಂಡು ಸಂಚಾರ ಕಡಿತಗೊಂಡಿತು. ಪರಿಣಾಮ ಎರಡೂ ಬದಿಗಳಲ್ಲೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸುಬ್ರಹ್ಮಣ್ಯ- ಕೈಕಂಬ-ಗುಂಡ್ಯ ಹೆದ್ದಾರಿಯ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿ ಹೆದ್ದಾರಿಗೆ ಸಮೀಪದ ಹೊಳೆಯ ನೀರು ನುಗ್ಗಿ ಸಂಪರ್ಕ ಕಡಿತಗೊಂಡು ವಾಹನ ಸಂಚಾರ ಸ್ಥಗಿತಗೊಂಡಿತು.
ಸ್ನಾನಘಟ್ಟ ಮುಳುಗಡೆ
ನೆರೆ ನೀರಿಗೆ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಗೊಂಡಿದ್ದು, ನದಿ ತೀರದಲ್ಲಿರುವ ಶ್ರೀ ದೇವರ ಜಳಕದ ಕಟ್ಟೆ ಮುಳುಗಡೆಗೊಂಡಿದೆ. ಇಲ್ಲಿನ ಶೌಚಾಲಯ ಕಟ್ಟಡ ಮುಕ್ಕಾಲು ಭಾಗ ಮುಳುಗಡೆಗೊಂಡಿದೆ. ಡ್ರೆಸ್ಸಿಂಗ್ ಕೊಠಡಿಗಳು, ಲಗೇಜ್ ಕೊಠಡಿ, ಅಂಗಡಿಗಳು ಜಲಾವೃತಗೊಂಡಿವೆ.
ಮಳೆಗೆ ಶಾಲೆಗೆ ರಜೆ
ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾಸಂಸ್ಥೆಗೆ ಗ್ರಾಮೀಣ ಭಾಗದ ದೂರ ದೂರುಗಳಿಂದ ವಿದ್ಯಾರ್ಥಿಗಳು ಆಗಮಿಸುವುದರಿಂದ ಮುಂಜಾಗ್ರತ ಕ್ರಮವಾಗಿ ಸುಬ್ರಹ್ಮಣ್ಯ ಪರಿಸರದ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಯಿತು. ಭಾರೀ ಮಳೆಯಿಂದಾಗಿ ಕುಕ್ಕೆ ದೇಗುಲದಲ್ಲಿ ಭಕ್ತರ ಸಂಖ್ಯೆ ವಿರಳಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.