ಹೊಳೆಯಲ್ಲಿ ಮುಳುಗಿ ಸಹೋದರಿಯರ ಸಾವು: ಬೆಂಗಳೂರಿನಿಂದ ಊರಿಗೆ ಬಂದಿದ್ದ ವೇಳೆ ನಡೆದ ದುರ್ಘಟನೆ
Team Udayavani, May 9, 2023, 7:10 AM IST
ಸುಬ್ರಹ್ಮಣ್ಯ: ಹೊಳೆಯಲ್ಲಿ ಮುಳುಗಿ ಸಹೋದರಿಯರು ಮೃತಪಟ್ಟ ಘಟನೆ ಸೋಮವಾರ ಸಂಜೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಪ ಸಮೀಪದ ಕೇನ್ಯದ ಕನ್ಕಲ್ ಕುಮಾರಧಾರಾ ನದಿಯ ಪೆಲತಗುಂಡಿಯಲ್ಲಿ ಸಂಭವಿಸಿದೆ.
ಮೂಲತಃ ಬಳ್ಪದ ಕನ್ಕಲ್ ನವರಾದ ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ (15) ಹಾಗೂ ಆವಂತಿಕಾ (11) ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಮಕ್ಕಳು. ರಾತ್ರಿ ವೇಳೆ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹ ಪತ್ತೆ ಹಚ್ಚಿ ನದಿಯಿಂದ ಹೊರ ತೆಗೆಯಲಾಯಿತು.
ಘಟನೆ ವಿವರ
ಕೇನ್ಯ ಉದಯ ಅಮ್ಮಣ್ಣಾಯ ಅವರ ಸಹೋದರ ಸತೀಶ್ ಅಮ್ಮಣ್ಣಾಯ ಅವರು ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿದ್ದು, ಅಲ್ಲೇ ವಾಸ್ತವ್ಯವಿದ್ದರು. ಅವರ ಇಬ್ಬರು ಹೆಣ್ಣು ಮಕ್ಕಳು ಶಾಲೆಗೆ ರಜೆಯ ಹಿನ್ನೆಲೆಯಲ್ಲಿ ತಾಯಿಯೊಂದಿಗೆ ಸೋಮವಾರ ತನ್ನೂರಾದ ಬಳ್ಪದ ಕನ್ಕಲ್ ಗೆ ಬಂದಿದ್ದರು.
ಸೋಮವಾರ ಬೆಳಗ್ಗೆ ಉದಯ ಅಮ್ಮಣ್ಣಾಯ ಅವರ ಮನೆಗೆ ಬಂದಿದ್ದ ಹೆಣ್ಣು ಮಕ್ಕಳು ಸಂಜೆ ವೇಳೆಗೆ ಮನೆ ಮಂದಿಯ ಜತೆಗೆ ಮನೆ ಸಮೀಪವೇ ಇರುವ ಕುಮಾರಧಾರಾ ನದಿ ಬಳಿಗೆ ತೆರಳಿದ್ದರು. ಮನೆಯವರು ನದಿ ಸಮೀಪವೇ ಇದ್ದಿದ್ದು, ಹೆಣ್ಣು ಮಕ್ಕಳು ನದಿಗೆ ಇಳಿದವರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು.
ಕಾರ್ಯಕ್ರಮಕ್ಕೆಂದು ಬಂದಿದ್ದರು
ಮಂಗಳವಾರ ಕನ್ಕಲ್ ನಲ್ಲಿ ಕಾರ್ಯಕ್ರಮವೊಂದಿತ್ತು. ಇದಕ್ಕೆ ಅವರು ಬೆಂಗಳೂರಿನಿಂದ ಬಂದಿದ್ದರು ಎಂದು ತಿಳಿದುಬಂದಿದೆ. ತನ್ನಿಬ್ಬರು ಮಕ್ಕಳನ್ನು ಕಳೆದುಕೊಂಡ ಹೆತ್ತವರ ಹಾಗೂ ಮನೆಯವರ ಆಕ್ರಂದನ ಮುಗಿಲುಮುಟ್ಟಿದೆ.
ಕಾಲು ಜಾರಿ ಮುಳುಗಿರುವ ಶಂಕೆ
ಮಕ್ಕಳು ನಾಪತ್ತೆಯಾಗಿರುವುದು ತಿಳಿಯುತ್ತಲೇ ಮನೆಮಂದಿ ಹುಡುಕಾಟ ಆರಂಭಿಸಿದ್ದಾರೆ. ಸುಳ್ಯದಿಂದ ಅಗ್ನಿಶಾಮಕ ದಳವನ್ನು ಕರೆಸಿಕೊಳ್ಳಲಾಗಿತ್ತು. ಸ್ಥಳೀಯ ಈಜುಗಾರರೂ ನದಿ ನೀರಲ್ಲಿ ಮುಳುಗಿ ಹುಡುಕಾಟ ನಡೆಸಿದ್ದರು. ನದಿಯಲ್ಲಿ ತೀವ್ರ ಹುಡುಕಾಟದ ಬಳಿಕ ರಾತ್ರಿ ವೇಳೆಗೆ ಇಬ್ಬರ ಮೃತದೇಹ ಪತ್ತೆಯಾಗಿದೆ. ನದಿಯ ಆಳ ತಿಳಿಯದೇ ಕಾಲು ಜಾರಿ ನೀರಲ್ಲಿ ಮುಳುಗಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಸುಬ್ರಹ್ಮಣ್ಯ ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Aranthodu: ವ್ಯಕ್ತಿಯ ಮೇಲೆ ಕಾಡಾನೆ ದಾಳಿ
Sandalwood: ಫಸ್ಟ್‌ಲುಕ್‌ನಲ್ಲಿ”ಕುಲದಲ್ಲಿ ಕೀಳ್ಯಾವುದೋ’
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.