ಇನ್ನೂ ಈಡೇರದ ಭರವಸೆ; ಕಟ್ಟಡ ಕಾಮಗಾರಿಗೆ ಸಿಗಲಿ ವೇಗ
ಸೋರುವ ಸುಬ್ರಹ್ಮಣ್ಯ ಪೊಲೀಸ್ ಠಾಣೆ
Team Udayavani, Sep 25, 2022, 10:18 AM IST
ಸುಬ್ರಹ್ಮಣ್ಯ: ಸುಬ್ರಹ್ಮಣ್ಯದಲ್ಲಿರುವ ಅರ್ಧ ಶತಮಾನದ ಪೊಲೀಸ್ ಠಾಣೆಗೆ ಮೂರು ತಿಂಗಳ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ನೂತನ ಠಾಣೆಯ ಕಟ್ಟಡದ ಕೆಲಸ ಕೂಡಲೇ ಆರಂಭಿಸಿ ವರ್ಷದೊಳಗೆ ಠಾಣೆ ಕಾರ್ಯಾರಂಭ ಮಾಡುವ ಬಗ್ಗೆ ಭರವಸೆ ನೀಡಿದ್ದರು. ಆದರೆ ಠಾಣೆ ಕಾಮಗಾರಿ ಮಾತ್ರ ಇನ್ನೂ ಆರಂಭಗೊಂಡಿಲ್ಲ.
ಕುಕ್ಕೆ ಸುಬ್ರಹ್ಮಣ್ಯದ ಪೊಲೀಸ್ ಠಾಣೆಯ ಕಟ್ಟಡಕ್ಕೆ ಸುಮಾರು 50 ವರ್ಷಗಳಾಗುತ್ತ ಬಂದಿದ್ದು, ಠಾಣೆ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ. ಮಳೆಗಾಲದಲ್ಲಿ ನೀರು ಸೋರಿಕೆಯಾಗುತ್ತದೆ. ಇದಕ್ಕಾಗಿ ಮೇಲ್ಛಾವಣಿಗೆ ಪ್ಲಾಸ್ಟಿಕ್ ಟಾರ್ಪಾಲು ಹಾಸಲಾಗಿದೆ. ಈ ಬಗ್ಗೆ ಮಾಹಿತಿ ಅರಿತು ಜೂನ್‌ನಲ್ಲಿ ಕುಕ್ಕೆಗೆ ಆಗಮಿಸಿದ್ದ ಆರಗ ಜ್ಞಾನೇಂದ್ರ ಠಾಣೆಯ ಕಟ್ಟಡ ಪರಿಶೀಲಿಸಿ, ಅಧಿಕಾರಿಗಳ ಜತೆ ಮಾತನಾಡಿ, ಸಂಬಂಧಿಸಿದವರ ಜತೆ ಚರ್ಚಿಸಿದ್ದರು. ಬಳಿಕ ಮಾಧ್ಯದವರೊಂದಿಗೆ ಮಾತನಾಡಿ, ಹೊಸ ಕಟ್ಟಡ ನಿರ್ಮಿಸಲು ತಿಂಗಳೊಳಗೆ ಟೆಂಡರ್ ಪ್ರಕ್ರಿಯೆ ಮುಗಿಸಿ, ವರ್ಷದೊಳಗೆ ನೂತನ ಠಾಣೆ ಕಾರ್ಯಾರಂಭ ಮಾಡುವ ಬಗ್ಗೆ ಭರವಸೆ ನೀಡಿದ್ದರು.
ವರ್ಷಗಳ ಬೇಡಿಕೆ
ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ವ್ಯವಸ್ಥಿತ ಠಾಣಾ ಕಟ್ಟಡ ಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಆಗ್ರಹಿಸುತ್ತಾ ಬರುತ್ತಿದ್ದರೂ, ಕಾರ್ಯಗತ ಮಾತ್ರ ನಡೆದಿಲ್ಲ. ಗೃಹ ಸಚಿವರು ನೀಡಿದ ಭರವಸೆಯಂತೆ ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಬೇಕೆಂದಿದ್ದರೆ ಈ ಮೊದಲೇ ಕಾಮಗಾರಿ ಆರಂಭಿಸಬೇಕಿತ್ತು. ಮುಂದಿನ ಮಳೆಗಾಲವೂ ಠಾಣೆಯ ಮೇಲ್ಛಾವಣಿಗೆ ಪ್ಲಾಸ್ಟಿಕ್ ಟಾರ್ಪಾಲು ಹೊದಿಸಬೇಕಾದ ಅಗತ್ಯ ಇದೆ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.
ಟೆಂಡರ್ ಪ್ರಕ್ರಿಯೆ: ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಹೊಸ ಕಟ್ಟಡ ನಿರ್ಮಿಸಲು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಪ್ರಕ್ರಿಯೆ ವೇಗವಾಗಿ ನಡೆಯಲು ಕ್ರಮ ಕೈಗೊಳ್ಳಲಾಗುವುದು. –ಋಷಿಕೇಶಿ ಭಗವಾನ್ ಸೋನವಾಣೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.