![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 9, 2024, 1:01 AM IST
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಕೈಕಂಬ ಜಂಕ್ಷನ್‌ನಲ್ಲಿ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನದ ಮೇಲೆ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ಇಬ್ಬರು ಗಾಯಗೊಂಡದ್ದಲ್ಲದೆ ಸಮೀಪದ ಅಂಗಡಿ ಜಖಂಗೊಂಡ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ.
ನೆಟ್ಟಣದ ಶೇಖರ್ ಚಲಾಯಿಸುತ್ತಿದ್ದ ಟಾಟಾ ಸುಮೋದ ಮೇಲೆ ಮರ ಬಿದ್ದಿದ್ದು ಶೇಖರ್ ಅವರ ತಲೆಗೆ ಗಾಯವಾಗಿದೆ. ವಾಹನ ಸಂಪೂರ್ಣ ಜಖಂಗೊಂಡಿದೆ. ಅಂಗಡಿಯಲ್ಲಿದ್ದ ರಾಜೇಶ್ ಅವರ ಕಾಲಿಗೂ ಗಾಯವಾಗಿದೆ. ಅಂಗಡಿಯೂ ಜಖಂಗೊಂಡಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ವಿದ್ಯುತ್ ಕಂಬಗಳಿಗೂ ಹಾನಿ ಸಂಭವಿಸಿದೆ.
ಕಡಬ ತಹಶೀಲ್ದಾರ್ ಪ್ರಭಾಕರ ಕಜೂರೆ, ಉಪತಹಶೀಲ್ದಾರ್ ಮನೋಹರ್, ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು, ಬಿಳಿನೆಲೆ ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳು, ಕಡಬ ಪೊಲೀಸರು, ಮೆಸ್ಕಾಂ ಅಧಿಕಾರಿಗಳು, ಸಿಬಂದಿ ಆಗಮಿಸಿ ಪರಿಶೀಲನೆ ನಡೆಸಿದರು. ಸ್ಥಳೀಯರ ಸಹಕಾರದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು ಹಾಗೂ ಮರವನ್ನು ತೆರವು ಮಾಡಲಾಯಿತು.
ಪರಿಹಾರಕ್ಕೆ ಆಗ್ರಹ
ಗಾಯಾಳುಗಳಿಗೆ ಸರಕಾರದಿಂದ ಪರಿಹಾರ ಒದಗಿಸುವಂತೆ ಹಾಗೂ ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದರು. ಅಧಿಕಾರಿಗಳು ಸ್ಥಳೀಯರ ಜತೆ ಮಾತುಕತೆ ನಡೆಸಿ, ಸರಕಾರದಿಂದ ಪರಿಹಾರ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವ ಭರವಸೆ ನೀಡಿದರು. ಅಪಾಯಕಾರಿ ಮರಗಳ ತೆರವಿಗೆ ಗ್ರಾ.ಪಂ. ಮೂಲಕ ಮನವಿ ಬಂದಲ್ಲಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯಾಧಿಕಾರಿ ವಿಮಲ್ ಬಾಬು ತಿಳಿಸಿದರು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.