Subramanya ನೀರಿನ ಕೊರತೆ; ಫೆ. 1ರಿಂದ ಕುಮಾರ ಪರ್ವತ ಚಾರಣಕ್ಕೆ ನಿಷೇಧ
Team Udayavani, Jan 30, 2024, 7:30 AM IST
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆ. 1ರಿಂದ ನಿಷೇಧಿ ಸಲಾಗಿದೆ.
ಪ್ರಸ್ತುತ ಜಿಲ್ಲೆಯಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಫೆ. 1ರಿಂದ ಅಕ್ಟೋಬರ್ ತನಕ ಅಥವಾ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇ ಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅ ಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಈ ವರ್ಷದ ಕುಮಾರಪರ್ವತ ಚಾರಣದ ಅವ ಧಿ ಮುಗಿದಿದೆ. ಅಲ್ಲದೆ ಪರ್ವತದ ಹುಲ್ಲುಗಾವಲು ಸಂಪೂರ್ಣ ಒಣಗಿರುವುದರಿಂದ ಮುಂದೆ ಬಿಸಿಲಿನ ಬೇಗೆಗೆ ಬೆಂಕಿಗೆ ತುತ್ತಾಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಆವಶ್ಯಕತೆ ಇದೆ. ಇದೀಗ ಕುಮಾರಪರ್ವತಕ್ಕೆ ಬರುವ ಚಾರಣಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಬೇಸಗೆಯ ಕಾರಣ ನೀರಿನ ಮೂಲಗಳು ಬತ್ತಿ ಹೋಗಿವೆ. ಚಾರಣಿಗರು ತಂಗುವ ಗಿರಿಗದ್ದೆಯಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಕ್ಕೆ ನೀರಿನ ವ್ಯವಸ್ಥೆ ಒದಗಿಸಲು ತೊಂದರೆಯಾಗಿದೆಎಂದು ಅರಣ್ಯ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.