Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನೆ
Team Udayavani, Nov 15, 2024, 3:23 PM IST
ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣ ವೇದಿಕೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕಿನ ಬಾಧಿತ ಗ್ರಾಮಗಳ ಗ್ರಾಮಸ್ಥರ ಹಾಗೂ ಸಾರ್ವಜನಿಕರ ಭಾಗವಹಿಸುವಿಕೆಯೊಂದಿಗೆ ಕಡಬ ತಾಲೂಕಿನ ಗುಂಡ್ಯದಲ್ಲಿ ಬೃಹತ್ ಪ್ರತಿಭಟನ ಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆ ಶುಕ್ರವಾರ ನಡೆಯಿತು.
ಜಂಟಿ ಸರ್ವೆಗೆ ಆಗ್ರಹ
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರತಿಭಟನ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಅರಣ್ಯ ಇಲಾಖೆಯವರು ತಮ್ಮಲ್ಲಿರುವ ಅರಣ್ಯ ಪ್ರದೇಶದಲ್ಲಿ ಗಿಡ ನೆಟ್ಟು ಕಾಡು ಬೆಳೆಸಲಿ. ಅದು ಬಿಟ್ಟು ಕೃಷಿಕರ ಜಮೀನನ್ನು ಪಡೆಯುವ ಕೆಲಸಕ್ಕೆ ಕೈ ಹಾಕುವುದು ಖಂಡನೀಯ. ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಿ, ಗಡಿ ಗುರುತು ಮಾಡುವ ಕೆಲಸ ಮಾಡಲಿ. ಮುಂದಿನ ಅಧಿವೇಶನದಲ್ಲಿ ಈ ಭಾಗದ ಶಾಸಕರು ಇದರ ವಿರುದ್ಧ ಧ್ವನಿ ಎತ್ತುತ್ತೇವೆ ಹಾಗೂ ಕಸ್ತೂರಿ ರಂಗನ್ ವಿರುದ್ಧ ಯಾವುದೇ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದರು.
ಅರಣ್ಯ ಇಲಾಖೆಯಿಂದ ರೈತರಿಗೆ ಕಿರುಕುಳ
ಸಕಲೇಶಪುರ ಶಾಸಕ ಮಂಜುನಾಥ್ ಮಾತನಾಡಿ, ಅರಣ್ಯ ಹಾಗೂ ಪರಿಸರದ ಉಳಿವು ಮಲೆನಾಡಿನ ಜನರಿಂದ ಆಗಿದೆ. ಅರಣ್ಯ ಇಲಾಖೆ ಕೃಷಿಕರಿಗೆ ನಿರಂತರ ಕಿರುಕುಳ ನೀಡುತ್ತಿದೆ. ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಯಾಗಲು ಬಿಡವುದಿಲ್ಲ ಎಂದರು.
ಜ.15ರೊಳಗೆ ಗಡಿ ಗುರುತು ಮಾಡಿ
ಇಂದು ನಾವು ಸರಕಾರಕ್ಕೆ ಕಸ್ತೂರಿ ರಂಗನ್ ವರದಿ ಕೈ ಬಿಡಲು ಮನವಿ ಸಲ್ಲಿಸುತ್ತಿದ್ದೇವೆ. ಜತೆಗೆ ಜ.15ರ ಮೊದಲು ಈ ಭಾಗದಲ್ಲಿ ಜಂಟಿ ಸರ್ವೆ ನಡೆಸಿ ಗಡಿ ಗುರುತು ಮಾಡುವ ಕೆಲಸವನ್ನು ಮಾಡಬೇಕು ಇಲ್ಲವೇ ಗುಂಡ್ಯದಲ್ಲಿ ರಸ್ತೆ ತಡೆ ನಡೆಸಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.
ಪ್ರಮುಖರಾದ ಆದರ್ಶ ಗುತ್ತಿಗಾರು, ಶಿಬಿ ಮುಂಡಾಜೆ, ಕಿಶೋರ್ ಶಿರಾಡಿ ಜೋಸೆಫ್ ಶಿರಾಡಿ, ವೆಂಕಪ್ಪ ಗೌಡ ಸುಳ್ಯ, ಎ.ವಿ.ತೀರ್ಥರಾಮ, ಸಯ್ಯದ್ ಮೀರಾ ಸಾಹೇಬ್, ಕೃಷ್ಣ ಶೆಟ್ಟಿ ಕಡಬ, ಪಿ.ಪಿ.ವರ್ಗೀಸ್, ಸರ್ವೋತ್ತಮ ಗೌಡ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಆಶಾ ತಿಮ್ಮಪ್ಪ ಗೌಡ, ಮಹ್ಮದ್ ಅಲಿ, ಸುಧೀರ್ ಕುಮಾರ್, ವೆಂಕಟ್ ವಳಲಂಬೆ, ಸಂಜೀವ ಮಠಂದೂರು, ವರ್ಗೀಸ್, ಸೋಯಿ ವರ್ಗೀಸ್ ಮತ್ತಿತರರು ವೇದಿಕೆಯಲ್ಲಿದ್ದರು. ಧನಂಜಯ ಕೋಡಂಗೆ ಸ್ವಾಗತಿಸಿದರು. ಹರಿಣಿ ಪುತ್ತೂರಾಯ, ವಿನಯಕುಮಾರಿ ಬಳಕ್ಕ ಕಾರ್ಯಕ್ರಮ ನಿರೂಪಿಸಿದರು.
ಕೇರಳ ಮಾದರಿ ವರದಿ ಅಗತ್ಯ
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಕಸ್ತೂರಿ ರಂಗನ್ ವರದಿ ಕೈಬಿಡಲು ಇಲ್ಲೂ ಕೇರಳ ಮಾದರಿಯಲ್ಲಿ ವರದಿ ಸಿದ್ಧಪಡಿಸಬೇಕು. ಈ ನಿಟ್ಟಿನಲ್ಲಿ ಇಲ್ಲಿನ ವಕೀಲರು ಇಂತಹ ವರದಿಯನ್ನು ಶೀಘ್ರ ಸಿದ್ಧಪಡಿಸುವ ಕೆಲಸ ಮಾಡಬೇಕು. ಕಸ್ತೂರಿ ರಂಗನ್ ವಿರುದ್ಧದ ಎಲ್ಲ ಹೋರಾಟಕ್ಕೂ ನಮ್ಮ ಬೆಂಬಲವಿದೆ ಎಂದರು.
1 ತಾಸಿಗೂ ಅಧಿಕ ಸಮಯ ರಾಷ್ಟ್ರೀಯ ಹೆದ್ದಾರಿ ತಡೆ
ಸಭಾ ಕಾರ್ಯಕ್ರಮ ಮುಗಿದು ಮನವಿ ಸ್ವೀಕರಿಸಲು ತಹಶೀಲ್ದಾರ್‌ಗಿಂತ ಉನ್ನತ ಅಧಿಕಾರಿ ಗಳು ಬಾರದೇ ಇರುವ ಬಗ್ಗೆ ಪ್ರತಿಭಟನಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಶಾಸಕಿ ಭಾಗೀರಥಿ ಮುರುಳ್ಯ ನೇತೃತ್ವದಲ್ಲಿ ಪ್ರತಿಭಟನಕಾರರು ನೇರವಾಗಿ ಸುಬ್ರಹ್ಮಣ್ಯ ಹೆದ್ದಾರಿಗೆ ಬಂದು ಅಲ್ಲಿಂದ ಘೋಷಣೆ ಕೂಗುತ್ತ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಜಂಕ್ಷನ್‌ನಲ್ಲಿ ಹೆದ್ದಾರಿ ತಡೆ ನಡೆಸಿದರು.
ಪೊಲೀಸರು ಹೆದ್ದಾರಿ ತಡೆ ನಡೆಸದಂತೆ ಮನವಿ ಮಾಡಿದರೂ ಪ್ರತಿಭಟನಕಾರರುಸ್ಪಂದಿಸಲಿಲ್ಲ. ಸುಮಾರು 1 ಗಂಟೆಗೂ ಅಧಿಕ ಸಮಯ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರು ಮನವಿ ಸ್ವೀಕರಿಸಿ, ಇಂದೇ ಮನವಿಯನ್ನು ಸರಕಾರಕ್ಕೆ ಸಲ್ಲಿಸುವ ಭರವಸೆ ನೀಡಿದರು. ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ಜತೆಗಿದ್ದರು. ಉಪ್ಪಿನಂಗಡಿ ಸಿಐ ರವಿ ಬಿ.ಎಸ್. ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಸುಮಾರು 5 ಸಾವಿರಕ್ಕೂ ಅಧಿಕ ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bigg Boss Telugu 8: ಬಿಗ್‌ಬಾಸ್ ತೆಲುಗು ಗೆದ್ದ ಮೈಸೂರಿನ ಹುಡುಗ: ಯಾರು ಈ ನಿಖಿಲ್?
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
Someshwar Beach: ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು
ಬೆಳಕಿನ ನಿರೀಕ್ಷೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪ್ರದೇಶದ ನಿವಾಸಿಗಳು
PMML: ನೆಹರು ಅವರ ಪತ್ರ ಸಂಗ್ರಹವನ್ನು ಮರಳಿಸಿ: ರಾಹುಲ್ ಗೆ ಕೇಂದ್ರದ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.