ಸುಬ್ರಹ್ಮಣ್ಯ: ಮಕ್ಕಳ ಲಸಿಕಾಕರಣಕ್ಕೆ ಚಾಲನೆ
Team Udayavani, Jan 3, 2022, 11:44 AM IST
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ 15-18 ವರ್ಷದ ಮಕ್ಕಳ ಲಸಿಕಾಕರಣಕ್ಕೆ ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸೋಮವಾರ ಚಾಲನೆ ನೀಡಲಾಯಿತು.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಚಾಲನೆ ನೀಡಿ ಮಾತನಾಡಿ, ಕೋವಿಡ್ ಎದುರಿಸಲು, ಅದರಿಂದ ರಕ್ಷಣೆ ಪಡೆಯಲು ಲಸಿಕಾಕರಣ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 101541 ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಲಿದೆ. ಸರಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದು ಜನತೆಯ ಕರ್ತವ್ಯ. ಪರಿಸ್ಥಿತಿ ಹತೋಟಿಗೆ ಬಾರದೇ ಇದ್ದಲ್ಲಿ ಲಾಕ್ ಡೌನ್ ಆಗುವ ಸಾಧ್ಯತೆಯೂ ಇದೆ. ಇಂತಹ ಪರಿಸ್ಥಿತಿ ಎದುರಾಗದಂತೆ ಮುಂದುವರಿಯಲು ಎಲ್ಲರ ಸಹಕಾರ ಅಗತ್ಯ ಎಂದರು.
ಇಂದನ ಸಚಿವ ಸುನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಭೋಜೆಗೌಡ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಮ್ ಸುಳ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ.ಜಿ.ಎಸ್.ಎನ್ ಪ್ರಸಾದ್, ಪ್ರಸನ್ನ ದರ್ಭೆ, ಶೋಭಾ ಗಿರಿಧರ್, ವನಜಾ ಭಟ್, ಪ್ರಾಂಶುಪಾಲ ಸೋಮಶೇಖರ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ.ತ್ರಿಮೂರ್ತಿ, ವಿದ್ಯುತ್ ನಿಗಮ ಅಧ್ಯಕ್ಷ ಶರತ್, ಮೆಸ್ಕಾಂ ಮಂಡಳಿ ನಿರ್ದೇಶಕ ಕಿಶೋರ್ ಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.