Sullia: ಇಲಿ ಪಾಷಾಣ ಸೇವಿಸಿದ್ದ ಯುವಕ ಸಾವು
Team Udayavani, Dec 4, 2024, 11:30 PM IST
ಸುಳ್ಯ: ಇಲಿ ಪಾಷಾಣವನ್ನು ಮದ್ಯಕ್ಕೆ ಬೆರೆಸಿ ಕುಡಿದು ಅಸ್ವಸ್ಥಗೊಂಡಿದ್ದ ಯುವಕನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಪಾಲ್ತಾಡು ಗ್ರಾಮದ ಚೆನ್ನಾವರ ಪಟ್ಟೆಯ ಮಹಾಬಲ ರೈ ಅವರ ಪುತ್ರ ಹರ್ಷಿತ್ ರೈ (29) ಮೃತರು. ಹರ್ಷಿತ್ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಸುಮಾರು ವರ್ಷಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ನ. 21ರಂದು ಸಂಜೆ ಹರ್ಷಿತ್ ಮನೆಯಲ್ಲಿ ಯಾರೂ ಇಲ್ಲದ ವೇಳೆ ಇಲಿಗೆ ಉಪಯೋಗಿಸುವ ಇಲಿ ಪಾಷಾಣವನ್ನು ಮದ್ಯಕ್ಕೆ ಬೆರೆಸಿ ಕುಡಿದು ಅಸ್ವಸ್ಥಗೊಂಡಿದ್ದರು. ಬಳಿಕ ಆತನನ್ನು ಪುತ್ತೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ನ. 30ರಂದು ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ
Dharmasthala: ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್ ಧನ್ಕರ್
Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.