ತಾಲೂಕಿಗೊಂದರಂತೆ ನವೋದಯ ಶಾಲೆ ತೆರೆಯಲು ಕೇಂದ್ರ ಚಿಂತನೆ :ಸಂಸದ ನಳಿನ್
Team Udayavani, Dec 16, 2018, 11:50 AM IST
ಸುಳ್ಯ : ಜಿ.ಪಂ. ವ್ಯಾಪ್ತಿಯಲ್ಲಿ ಮೊರಾರ್ಜಿ ಶಾಲೆ ಸ್ಥಾಪನೆ ಹಾಗೂ ಪ್ರತಿ ತಾಲೂಕಿಗೆ ನವೋದಯ ಶಾಲೆ ತೆರೆಯಲು ಕೇಂದ್ರ ಸರಕಾರ ಯೋಜನೆ ರೂಪಿಸುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಹೇಳಿದ್ದಾರೆ. ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಶನಿವಾರ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ನೂತನ ಕಟ್ಟಡ, ಶಾಲಾ ಸಭಾಂಗಣ ಉದ್ಘಾಟನೆ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ ಅಂಕ ಮತ್ತು ಬದುಕಿಗೆ ಮಾತ್ರವಾಗದೆ ಜ್ಞಾನದ ವಿಕಸನ ಮತ್ತು ಆತ್ಮ ಸ್ಥೈರ್ಯದ ಉದ್ದೀಪನಕ್ಕೆ ಕಾರಣವಾಗಬೇಕು. ಎಲಿಮಲೆ ಶಾಲೆಗೆ ಬೇಕಾಗುವ ಕಂಪ್ಯೂಟರ್, ಶೌಚಾಲಯಗಳನ್ನು ಎಂಆರ್ ಪಿಎಲ್ ಮೂಲಕ ಕೊಡಿಸಲು ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ತಾ.ಪಂ. ಉಪಾಧ್ಯಕ್ಷೆ ಶುಭದಾ ಎಸ್. ರೈ, ತಾ.ಪಂ. ಸದಸ್ಯೆ ಯಶೋದಾ ಬಾಳೆಗುಡ್ಡೆ, ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ದಿವಾಕರ ಮುಂಡೋಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಟಿ. ವೀಣಾ, ದೇವಚಳ್ಳ ಗ್ರಾ.ಪಂ. ಸದಸ್ಯರಾದ ಶೈಲೇಶ್ ಅಂಬೆಕಲ್ಲು, ಕೃಷ್ಣಯ್ಯ ಮೂಲೆತೋಟ ಉಪಸ್ಥಿತರಿದ್ದರು. ಮುಖ್ಯ ಗುರು ಚಂದ್ರಶೇಖರ ಪೇರಾಲು ಸ್ವಾಗತಿಸಿ, ಪ್ರಸ್ತಾವಿಸಿದರು. ಶಿಕ್ಷಕ ಮುರಳೀಧರ ಪುನ್ಕುಟ್ಟಿ ವರದಿ ವಾಚಿಸಿದರು. ಶಿಕ್ಷಕ ಗೋಪಿನಾಥ್ ಮೆತ್ತಡ್ಕ ಕಾರ್ಯಕ್ರಮ ನಿರೂಪಿಸಿದರು.
ಕೊಠಡಿ, ಗ್ರಂಥಾಲಯ ಉದ್ಘಾಟನೆ
ನೂತನ ಪ್ರಯೋಗಾಲಯ ಕೊಠಡಿಯನ್ನು ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮತ್ತು ನೂತನ ಗ್ರಂಥಾಲಯ ಕೊಠಡಿಯನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿ, ಈ ಎಲ್ಲ ಅನುಕೂಲತೆಗಳ ಪ್ರಯೋಜನವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.