Sullia ಸೀರೆ ಸಿಲುಕಿ ಬೈಕ್ನಿಂದ ಬಿದ್ದ ಮಹಿಳೆ
Team Udayavani, Oct 21, 2023, 12:31 AM IST
ಸುಳ್ಯ: ಬೈಕಿನಲ್ಲಿ ಹಿಂಬದಿ ಸವಾರೆಯಾಗಿದ್ದ ಮಹಿಳೆಯ ಸೀರೆ ಬೈಕಿನ ಚಕ್ರಕ್ಕೆ ಸುತ್ತಿಕೊಂಡ ಪರಿಣಾಮ ಮಹಿಳೆ ಬೈಕ್ನಿಂದ ಬಿದ್ದು, ಕಾಲಿಗೆ ತೀವ್ರವಾಗಿ ಗಾಯಗೊಂಡ ಘಟನೆ ಜಾಲ್ಸೂರು ಗ್ರಾಮದ ಸೋಣಂಗೇರಿಯಲ್ಲಿ ಶುಕ್ರವಾರ ಸಂಭವಿಸಿದೆ.
ಕೌಡಿಚ್ಚಾರಿನ ಶಾಂಭವಿ ಅವರು ಬೈಕಿನಲ್ಲಿ ಹಿಂಬದಿ ಕುಳಿತು ಸುಳ್ಯಕ್ಕೆ ಬರುತ್ತಿದ್ದ ವೇಳೆ ಅವರ ಸೀರೆಯ ಸೆರಗು ಬೈಕಿನ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಅಪಘಾತ ಸಂಭವಿಸಿದ್ದು, ರಸ್ತೆಗೆ ಬಿದ್ದ ಮಹಿಳೆಯ ಕಾಲಿಗೆ ಗಾಯವಾಗಿದೆ. ಮಹಿಳೆಯನ್ನು ಸ್ಥಳೀಯರು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾರು-ಟ್ರಾವೆಲರ್ ನಡುವೆ ಅಪಘಾತ
ಸುಳ್ಯ: ಕಾರು ಹಾಗೂ ಟೆಂಪೋ ಟ್ರಾವೆಲರ್ ನಡುವೆ ಅಪಘಾತ ಸಂಭವಿಸಿ ಕಾರು ಚಾಲಕ ಗಾಯಗೊಂಡ ಘಟನೆ ಸುಳ್ಯದ ಓಡಬಾಯಿಯಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಚೊಕ್ಕಾಡಿಯ ಮುಖೇಶ್ ಗಾಯಾಳು. ಮುಖೇಶ್ ತನ್ನ ಕಾರಿನಲ್ಲಿ ಸುಳ್ಯ ಕಡೆಯಿಂದ ಚೊಕ್ಕಾಡಿ ಕಡೆಗೆ ತೆರಳುತ್ತಿದ್ದು, ಟೆಂಪೊ ಟ್ರಾವೆಲ್ಲರ್ ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿತ್ತು. ಅಪಘಾತದ ಪರಿಣಾಮವಾಗಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಮುಖೇಶ್ ಅವರ ಮುಖಕ್ಕೆ ಏಟಾಗಿದೆ. ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೆಲ್ಕಾರ್: ಪಾರ್ಕ್ ಮಾಡಿದ್ದ ಬೈಕ್ ಕಳವು
ಬಂಟ್ವಾಳ: ಮೆಲ್ಕಾರಿನ ಸೂಪರ್ ಬಝಾರೊಂದರ ಬಳಿ ಸಜೀಪಮೂಡ ಗ್ರಾಮ ನಿವಾಸಿ ಕೃಷ್ಣಪ್ಪ ಅವರು ನಿಲ್ಲಿಸಿದ್ದ ಬೈಕೊಂದು ಕಳವಾದ ಘಟನೆ ಅ. 18ರಂದು ನಡೆದಿದೆ. ಬೈಕ್ ನಿಲ್ಲಿಸಿ ಇತರ ಕೆಲಸ ಮುಗಿಸಿ ಬಂದು ನೋಡಿದಾಗ ಬೈಕ್ ಅಲ್ಲಿರಲಿಲ್ಲ. ಕಳವಾದ ಬೈಕಿನ ಮೌಲ್ಯ 50 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.