Sullia ಜಾಲ್ಸೂರು: ಹೆದ್ದಾರಿ ಸಮೀಪ 7 ಕಾಡಾನೆಗಳ ಹಿಂಡು ಪತ್ತೆ!
Team Udayavani, Nov 11, 2023, 11:36 PM IST
ಸುಳ್ಯ: ಜಾಲ್ಸೂರು- ಕಾಸರಗೋಡು ಅಂತಾರಾಜ್ಯ ರಸ್ತೆಯ ಪಂಜಿಕಲ್ಲಿನಲ್ಲಿ ಶುಕ್ರವಾರ ಬೆಳಗ್ಗೆ ಸಂಚರಿಸಿ ಸಾರ್ವಜನಿಕರಿಗೆ, ವಾಹನ ಪ್ರಯಾಣಿಕರಿಗೆ ಭಯ ಹುಟ್ಟಿಸಿದ್ದ ಕಾಡಾನೆ ಬಳಿಕ ಅಲ್ಲೇ ಸಮೀಪದ ಕಾಡಿಗೆ ತೆರಳಿದ್ದರೆ, ಶನಿವಾರ ಬೆಳಗ್ಗೆ ಅದೇ ಪರಿಸರದಲ್ಲಿ ಒಂದು ಮರಿ ಸಹಿತ ಏಳು ಕಾಡಾನೆಗಳ ಹಿಂಡು ಕಂಡುಬಂದಿವೆ.
ಹಗಲು ಹೊತ್ತಿನಲ್ಲಿ ಅರಣ್ಯ ಪ್ರದೇಶ ದಲ್ಲಿರುವ ಕಾಡಾನೆಗಳ ಹಿಂಡು ರಾತ್ರಿ ಯಾಗುತ್ತಿದ್ದಂತೆ ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ, ಮಂಡೆಕೋಲು ಗ್ರಾಮದ ದೇವರಗುಂಡ, ಮುರೂರು, ಪಂಜಿಕಲ್ಲು ಗಡಿಭಾಗದಲ್ಲಿ ಸಂಚರಿಸಿ, ಕೃಷಿಕರ ತೋಟದಲ್ಲಿ ಹಾನಿ ಮಾಡುತ್ತಿದ್ದು, ಈಗಾಗಲೇ ಈ ಭಾಗದ ಹಲವಾರು ತೋಟಗಳಲ್ಲಿ ಹಾನಿ ಮಾಡಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಾಡಾನೆ ಹಿಂಡು ಕರ್ನಾಟಕ – ಕೇರಳ ಗಡಿಯಲ್ಲಿದ್ದು, ಎರಡೂ ರಾಜ್ಯ ಸರಕಾರಗಳ ಜನಪ್ರತಿನಿಧಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು ಗಮನಹರಿಸಿ, ಸೂಕ್ತ ಕಾರ್ಯಾಚರಣೆ ಕೈಗೊಳ್ಳ ಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಸಿರಿಬಾಗಿಲು: ಆನೆಗಳಿಂದ
ಅಪಾರ ಕೃಷಿ ನಾಶ
ಕಡಬ: ಸಿರಿಬಾಗಿಲು ಗ್ರಾಮದ ರೆಂಜಾಳ, ಪೆರ್ಜೆ ಪ್ರದೇಶ ದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಅಟ್ಟಹಾಸ ಮೇರೆ ಮೀರಿದ್ದು, ಕೃಷಿ ತೋಟಗಳಿಗೆ ಲಗ್ಗೆ ಇಡುತ್ತಿರುವ ಆನೆಗಳು ಅಪಾರ ಕೃಷಿ ನಾಶಕ್ಕೆ ಕಾರಣವಾಗಿದೆ.
ಶುಕ್ರವಾರ ರಾತ್ರಿ ರೆಂಜಾಳದ ಶೂರಪ್ಪ ಗೌಡ ಹಾಗೂ ಉಮೇಶ ಗೌಡ ಅವರ ತೋಟಕ್ಕೆ ನುಗ್ಗಿರುವ ಆನೆಗಳು ಫಲ ನೀಡುತ್ತಿದ್ದ ತೆಂಗು, ಬಾಳೆ ಹಾಗೂ ಅಡಿಕೆ ಮರಗಳನ್ನು ನಾಶಗೊಳಿಸಿವೆ. ಆನೆ ಉಪಟಳದಿಂದ ಕಂಗಾಲಾಗಿರುವ ಕೃಷಿಕರು ಕಾಡಾನೆಗಳು ಜನವಸತಿ ಪ್ರದೇಶಕ್ಕೆ ಬಾರದಂತೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ಕೃಷಿ ಹಾನಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.