ಸುಳ್ಯ, ಕಡಬಗಳಲ್ಲಿ ಉತ್ತಮ ಮಳೆ : ಕೃಷಿ ತೋಟಗಳು ಜಲಾವೃತ
Team Udayavani, Jun 18, 2022, 2:00 AM IST
ಮಂಗಳೂರು/ಸುಳ್ಯ/ಉಡುಪಿ: ಕರಾವಳಿ ಭಾಗದಲ್ಲಿ ಮುಂಗಾರು ಮತ್ತೆ ಬಿರುಸು ಪಡೆಯುವ ನಿರೀಕ್ಷೆ ಇದ್ದು, ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಸುಳ್ಯ, ಕಡಬ, ಸುಬ್ರಹ್ಮಣ್ಯ ಮೊದಲಾದೆಡೆ ಶುಕ್ರವಾರ ಉತ್ತಮ ಮಳೆಯಾಗಿದೆ. ರಾತ್ರಿಯೂ ಮಳೆ ಮುಂದುವರಿದಿದೆ.
ಸುಳ್ಯ ನಗರ,ಕನಕಮಜಲು, ಮಂಡೆಕೋಲು, ಅಜ್ಜಾವರ, ಆಲೆಟ್ಟಿ, ಕಲ್ಲುಗುಂಡಿ, ಸಂಪಾಜೆ, ಅರಂತೋಡು, ಗುತ್ತಿಗಾರು, ಸೋಣಂಗೇರಿ, ಐವರ್ನಾಡು, ಬೆಳ್ಳಾರೆ, ಕಲ್ಮಡ್ಕ, ಎಡಮಂಗಲ, ಪಂಜ, ಮುರುಳ್ಯ, ಬಳ್ಪ, ಸುಬ್ರಹ್ಮಣ್ಯ, ಹರಿಹರ ಪಳ್ಳತ್ತಡ್ಕ, ಕೊಲ್ಲಮೊಗ್ರು, ಬಿಳಿನೆಲೆ, ಕಡಬದ ಕಲ್ಲುಗುಡ್ಡೆ, ನೂಜಿಬಾಳ್ತಿಲ, ರೆಂಜಿಲಾಡಿ, ಇಚ್ಲಂಪಾಡಿ, ಕೊಣಾಜೆ ಭಾಗದಲ್ಲೂ ಭಾರೀ ಮಳೆಯಾಗಿದೆ.
ಸಂಜೆ ಸುರಿದ ಭಾರೀ ಮಳೆಗೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿ ಭಾಗದಲ್ಲಿ ತೋಡುಗಳಲ್ಲಿ ಪ್ರವಾಹ ಉಕ್ಕಿ ಹರಿದು ಗದ್ದೆ, ಅಡಿಕೆ ತೋಟಗಳಿಗೆ ನುಗ್ಗಿತು.
ಎಲ್ಲೋ ಅಲರ್ಟ್; ಮಳೆ ಸಾಧ್ಯತೆ
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂ. 18ರಿಂದ 21ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಗುಡುಗು, ಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಬೆಳಗ್ಗಿನ ಜಾವ ಉತ್ತಮ ಮಳೆಯಾಗಿತ್ತು. ಉಡುಪಿ, ಕುಂದಾಪುರ, ಹೆಬ್ರಿ, ಕಾರ್ಕಳ ಸಹಿತ ಜಿಲ್ಲೆಯ ಕೆಲವು ಭಾಗಗಳಲ್ಲಿ ಶುಕ್ರವಾರ ಸಂಜೆಯ ಅನಂತರ ಜಿಟಿಜಿಟಿ
ಮಳೆಯಾಗಿದೆ.
ದಿನವಿಡೀ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇದ್ದು, ಕೆಲವೆಡೆ ಸಾಧಾರಣ ಮಳೆಯಾಗಿದೆ. ಹವಾಮಾನ ಇಲಾಖೆ ಮಾಹಿತಿಯಂತೆ ಶುಕ್ರವಾರದಂದು ಮಂಗಳೂರಿನಲ್ಲಿ 31.3 ಡಿ.ಸೆ. ಗರಿಷ್ಠ ಮತ್ತು 23.5 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.