Sullia: ಪ್ಲಾಟ್‌ಫಾರ್ಮ್ ಎತ್ತರಿಸುವ ಕಾರ್ಯ ಪೂರ್ಣ
ಕಡಬ: ರೈಲು ನಿಲ್ದಾಣಗಳಲ್ಲಿ ನಡೆದ ಕಾಮಗಾರಿ | ಇನ್ನು ಶೆಲ್ಟರ್ ನಿರ್ಮಾಣ ಆರಂ»
Team Udayavani, Dec 28, 2024, 1:04 PM IST
ಸುಳ್ಯ: ಮಂಗಳೂರು- ಬೆಂಗಳೂರು ನಡುವಿನ ರೈಲು ಮಾರ್ಗದಲ್ಲಿ ಬರುವ ಕಡಬ ತಾಲೂಕಿನ ಐದು ರೈಲು ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಎತ್ತರಿಸುವ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇನ್ನು ಶೆಲ್ಟರ್ ಕಾಮಗಾರಿ ಆಗಬೇಕಾಗಿದೆ. ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
ಮಂಗಳೂರು-ಬೆಂಗಳೂರು ರೈಲು ಮಾರ್ಗದಲ್ಲಿ ಮೀಟರ್‌ಗೆàಜ್‌ನಿಂದ ಬ್ರಾಡ್ ಗೇಜ್‌ಗೆ ಹಳಿ ಪರಿವರ್ತನೆಯಾದ ಬಳಿಕ ಗ್ರಾಮೀಣ ಭಾಗದ ಕೆಲವು ರೈಲು ನಿಲ್ದಾಣಗಳಲ್ಲಿ ಪ್ಲಾರ್ಟ್‌ಫಾರ್ಮ್ ಹಳಿಗೆ ಸಮಾನಾಂತರವಾಗಿತ್ತು. ಇದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿತ್ತು. ಇದನ್ನು ಸರಿಪಡಿಸಬೇಕು ಎಂದು ಹಲವು ವರ್ಷಗಳಿಂದ ಬೇಡಿಕೆ ಇತ್ತು. ಅದರಂತೆ ಪ್ಲಾಟ್‌ಫಾರ್ಮ್ ಎತ್ತರಿಸುವ ಕಾಮಗಾರಿ ವರ್ಷದ ಹಿಂದೆ ಆರಂಭಗೊಂಡಿತ್ತು.
ಯಾವ ಐದು ರೈಲು ನಿಲ್ದಾಣ?
ಕಡಬ ತಾಲೂಕಿನ ಕಡಬ ಸಮೀಪದ ಕೋಡಿಂಬಾಳ, ಬಜಕೆರೆ, ಎಡಮಂಗಲ, ಕಾಣಿಯೂರು, ನರಿಮೊಗರು ರೈಲು ನಿಲ್ದಾಣಗಳ ಪ್ಲಾಟ್‌ಫಾರ್ಮ್ ಅನ್ನು ಎತ್ತರಿಸುವ ಕಾಮಗಾರಿ ನಡೆಸಲಾಗಿದೆ. ಪ್ಲಾಟ್‌ಫಾರ್ಮ್ಗಳನ್ನು ಸುಮಾರು 250 ಮೀಟರ್ ಉದ್ದಕ್ಕೆ ವಿಸ್ತರಿಸಲಾಗಿದೆ ಮತ್ತು ನಿಯಮಿತ ಎತ್ತರಕ್ಕೆ ಏರಿಸಲಾಗಿದೆ.
ಶೀಘ್ರವೇ ರೈಲು ವಿಸ್ತರಣೆ
ಶೀಘ್ರದಲ್ಲಿ ಮಂಗಳೂರು-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆಯಾಗುವ ನಿರೀಕ್ಷೆಯಲ್ಲಿದ್ದು, ಬಳಿಕ ಬೆಳಗ್ಗೆ, ಮಧ್ಯಾಹ್ನ, ಸಂಜೆ, ರಾತ್ರಿ ಹೊತ್ತು ಮಂಗಳೂರು-ಸುಬ್ರಹ್ಮಣ್ಯ ರೋಡ್ ನಡುವೆ ಲೋಕಲ್ ಪ್ಯಾಸೆಂಜರ್ ರೈಲು ಓಡಾಟ ನಡೆಸಲಿದೆ. ಈ ಮೂಲಕ ಈ ಭಾಗದ ಹಲವು ವರ್ಷಗಳ ಬೇಡಿಕೆ ಈಡೇರಲಿದೆ.
ಇನ್ನು ಆಗಬೇಕಿರುವ ಕೆಲಸಗಳು
ಪ್ಲಾಟ್‌ಫಾರ್ಮ್ ಎತ್ತರಿಸುವ ಕಾಮಗಾರಿ ಮುಗಿದಿದ್ದು, ಇನ್ನು ಹಲವು ಕೆಲಸಗಳು ಬಾಕಿ ಇವೆ. ಪ್ರಯಾಣಿಕರಿಗೆ ಕುಡಿಯುವ ನೀರು, ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಶೆಲ್ಟರ್ ವ್ಯವಸ್ಥೆಯ ಕಾಮಗಾರಿ ನಡೆಯಬೇಕಿದೆ. ಕೆಲವೆಡೆ ಶೆಲ್ಟರ್ ನಿರ್ಮಾಣಕ್ಕೆ ಪಿಲ್ಲರ್ ಅಳವಡಿಕೆಗೆ ಸಿದ್ಧತೆಗಳನ್ನು ಆರಂಭಿಸಲಾಗಿದೆ. ನಿಲ್ದಾಣಗಳಲ್ಲಿ 60 ಮೀಟರ್ ಉದ್ದದ ಶೆಲ್ಟರ್ ನಿರ್ಮಾಣವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಸನ, ನೀರು, ಶೆಲ್ಟರ್ ಕಾಮಗಾರಿ ಒಟ್ಟು 4.50 ಕೋಟಿ ವೆಚ್ಚದಲ್ಲಿ ನಡೆಯಲಿದೆ.
ಶೆಲ್ಟರ್ ಮಾರ್ಚ್‌ಗೆ ಪೂರ್ಣ
ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಸಮೀಪದ ದಕ್ಷಿಣ ಕನ್ನಡ ಜಿಲ್ಲೆಯ ಐದು ಸ್ಥಳೀಯ ರೈಲು ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಎತ್ತರಿಸು ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಉಳಿದಂತೆ ಶೆಲ್ಟರ್ ಕಾಮಗಾರಿಯನ್ನು ಮಾರ್ಚ್ ಅಂತ್ಯದೊಳಗೆ ಮುಗಿಸಲಾಗುತ್ತದೆ.
-ಕಿಲ್ಜಿ, ಸಾರ್ವಜನಿಕ ಸಂಪರ್ಕ ಅಧಿಕಾರಿ, ಮೈಸೂರು ರೈಲ್ವೇ ವಿಭಾಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.