ನಿರ್ಭೀತಿಯಿಂದ ಮತ ಚಲಾಯಿಸಿ: ಸತೀಶ್‌ ಕುಮಾರ್‌


Team Udayavani, Mar 14, 2019, 6:24 AM IST

15-march-7.jpg

ಸುಳ್ಯ: ಲೋಕಸಭೆ ಚುನಾವಣೆ ಸಂದರ್ಭ ಮತದಾರರು ನಿರ್ಭೀತಿಯಿಂದ ಮತ ಚಲಾಯಿಸುವ ಸಲುವಾಗಿ ಪೊಲೀಸ್‌ ಇಲಾಖೆ ರಕ್ಷಣೆ ನೀಡಲಿದೆ ಎಂದು ವೃತ್ತ ನಿರೀಕ್ಷಕ ಆರ್‌. ಸತೀಶ್‌ ಕುಮಾರ್‌ ಹೇಳಿದರು.

ಎ. 18ರಂದು ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಗರಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವೃತ್ತ ನಿರೀಕ್ಷಕರ ಕಚೇರಿ, ಸುಳ್ಯ ಪೊಲೀಸ್‌ ಠಾಣೆ ವತಿಯಿಂದ ಬುಧವಾರ ಸುಳ್ಯ ಸಿ.ಎ. ಬ್ಯಾಂಕ್‌ ಸಭಾಂಗಣದಲ್ಲಿ ನಡೆದ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು. ಮತದಾರರನ್ನು ಹೆದರಿಸುವ, ಆಮಿಷ ಒಡ್ಡುವ ಪ್ರಕರಣ ಕಂಡುಬಂದಲ್ಲಿ ತತ್‌ ಕ್ಷಣ ಪೊಲೀಸರ ಗಮನಕ್ಕೆ ತರಬೇಕು. ಮತದಾರರಿಗೆ ರಕ್ಷಣೆ ಒದಗಿಸಿ ಮತ ಚಲಾಯಿಸುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ
ತಾಲೂಕಿನ ಐದು ಕಡೆಗಳಲ್ಲಿ ಚೆಕ್‌ ಪೋಸ್ಟ್‌ ತೆರೆಯಲಾಗಿದೆ. ಅಲ್ಲಿ ವಾಹನ ಓಡಾಟದ ಮೇಲೆ ನಿಗಾ ಇಡಲಾಗಿದೆ. ವಾಹನಗಳ ತಪಾಸಣೆ ಮಾಡಲಾಗುವುದು. ಹೆಚ್ಚುವರಿ ಸಿಬಂದಿಯನ್ನು ನೇಮಿಸಲಾಗಿದೆ. ಅಕ್ರಮ ಹಣ, ಇತರೆ ವಸ್ತುಗಳು ಸಾಗಾಟ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸತೀಶ್‌ ಕುಮಾರ್‌ ಹೇಳಿದರು.

ಅನುಮತಿ ಕಡ್ಡಾಯ
ಸಾರ್ವಜನಿಕ ಪ್ರದೇಶದಲ್ಲಿ ಬ್ಯಾನರ್‌ ಗಳನ್ನು ಅಳವಡಿಸಬಾರದು. ಅನುಮತಿ ಇಲ್ಲದೆ ಯಾವುದೇ ರೀತಿಯ ಸಭೆ ಸಮಾರಂಭಗಳನ್ನು ಆಯೋಜಿಸಬಾರದು. ಜಾತ್ರೆ, ಉರೂಸ್‌, ನೇಮ ಸಂದರ್ಭದಲ್ಲಿ ರಾತ್ರಿ 10 ಗಂಟೆ ಅನಂತರ ಧ್ವನಿವರ್ಧಕ ಬಳಸುವಂತಿಲ್ಲ. ಮಾ. 15ರೊಳಗೆ ಕೋವಿ ಹೊಂದಿರುವವರು ಸೂಚಿತ ಸ್ಥಳಕ್ಕೆ ತಂದೊಪ್ಪಿಸಬೇಕು ಎಂದರು. ದಾಖಲು ಪತ್ರ ಇಲ್ಲದೇ 50 ಸಾವಿರ ರೂ.ಗಳಿಗಿಂತ ಹೆಚ್ಚು ಹಣ ತೆಗೆದುಕೊಂಡು ಹೋಗುವಂತಿಲ್ಲ. ರಾಜಕೀಯವಾಗಿ ಯಾವುದೇ ಪಕ್ಷದ ಅಭ್ಯರ್ಥಿ ಪರ ಜಾಲತಾಣದಲ್ಲಿ ಸಂದೇಶ ಕಳುಹಿಸಿದರೆ ಅದಕ್ಕೆ ತಗಲುವ ವೆಚ್ಚ ಅಭ್ಯರ್ಥಿ ಖಾತೆಗೆ ಜಮೆ ಆಗಲಿದೆ. ಸಾರ್ವಜನಿಕವಾಗಿ ನಡೆಯುವ ಉತ್ಸವ, ಇನ್ನಿತರ ಕಾರ್ಯಕ್ರಮಗಳಲ್ಲಿ ಅಭ್ಯರ್ಥಿ ಪರ ಪ್ರಚಾರ ಮಾಡಬಾರದು.

ಅಂತಹ ಪ್ರಕರಣಗಳು ಕಂಡು ಬಂದಲ್ಲಿ ಕ್ರಮ ಜರುಗಿಸಲಾಗುವುದು ಎಂದರು. ಸುಳ್ಯ ಸಬ್‌ ಇನ್‌ಸ್ಪೆಕ್ಟರ್‌ ಹರೀಶ್‌ ಎಂ.ಆರ್‌. ಕಾನೂನು ಪಾಲನೆಯ ಕುರಿತು ಮಾಹಿತಿ ನೀಡಿದರು. ಎನ್‌.ಎ.ರಾಮಚಂದ್ರ, ಗೋಕುಲ್‌ ದಾಸ್‌, ಮುಸ್ತಾಫ, ಪಿ.ಎಸ್‌. ಗಂಗಾಧರ, ಬಾಲಗೋಪಾಲ ಸೇರ್ಕಜೆ, ದಾಮೋದರ ಮಂಚಿ, ತಿಮ್ಮಪ್ಪ ನಾವೂರು, ರಂಜಿತ್‌ ಪೂಜಾರಿ, ಕರುಣಾಕರ ಸೇರ್ಕಜೆ, ಅಬ್ದುಲ್‌ ರಜಾಕ್‌, ದಿನೇಶ್‌ ಕೊಟ್ಯಾನ್‌, ಕೇಶವ ಬಂಗ್ಲೆಗುಡ್ಡೆ, ಸರಸ್ವತಿ ಬೊಳಿಯಮಜಲು, ಮುನೀರ್‌ ಅನ್ಸಾರ್‌, ಹರ್ಷ ಕರುಣಾಕರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.